Belehani parihara ಪಡೆಯಲು ಬೆಳೆ ಸಮೀಕ್ಷೆ ಹೀಗೆ ಮಾಡಿ

Written by Ramlinganna

Updated on:

Belehani parihara  : ಬೆಳೆ ಹಾನಿ ಪರಿಹಾರ, ಬೆಳೆ ವಿಮೆ,  ಜಮೆಯಾಗಲು ರೈತರು  ಬೆಳಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಹೌದು, ಬೆಳೆ ಸಮೀಕ್ಷೆ ಮಾಡಿದ ನಂತರವೇ ನಿಮಗೆ ಪರಿಹಾರ ಹಣ ಜಮೆಯಾಗಲಿದೆ. ಬೆಳೆ ಸಮೀಕ್ಷೆ ಹೇಗೆ ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ,

2023-24ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಆರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆದ ಬೆಳೆಗಳ ವಿವರಗಳ್ನು ತಾವೇ ಖುದ್ದಾಗಿ ಗೂಗಲ್ ಪ್ಲೇ ಸ್ಟೋರ್ ನಿಂದ ಹ ಡೌನ್ಲೋಡ್ ಮಾಡಿಕೊಂಡು  ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ.

ಹೀಗೆ ವಿವರಗಳನ್ನು ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಹಾಗೂ ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆ ಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವುದರಿಂದ ಎಲ್ಲಾರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.

ರೈತರು ಬೆಳೆ ವಿವರಗಳನ್ನು ಅಪ್ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ದಾಖಲಿಸಬೇಕು ಎಂದು ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಅಂಡ್ರ್ಯಾಯ್ಡ್ ಆ್ಯಪ್ ಮೂಲಕ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು.

Belehani parihara ಪಡೆಯಲು ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡುವುದು ಹೇಗೆ?

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡಲು ಈ

https://play.google.com/store/apps/details?id=com.csk.farmer23_24.cropsurvey&hl=en_US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಹಿಂಗಾರು ರೈತರ ಬೆಳೆ ಸಮೀಕ್ಷೆ 2024 ಕಾಣಿಸುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಫನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು Open ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ Agree ಮೇಲೆ ಕ್ಲಿಕ್ ಮಾಡಬೇಕು. ಆಗ ನಿಂಗೆ ರೈತರ ಬೆಳೆ ಸಮೀಕ್ಷೆ 2024-5ಕೆಳಗಡೆ ಋತು ಹಿಂಗಾರು ಕಾಣಿಸುತ್ತದೆ. ಅದರ ಕೆಳಗಡ ನಿಮಗೆ ಬೆಳೆ ಸಮೀಕ್ಷೆಯಲ್ಲಿ ತೊಂದರೆಯಾದರೆ ಅಲ್ಲಿ ಕಾಣುವ ಸಹಾಯವಾಣಿ ನಂಬರ್ ಗೆ ಕರೆ ಮಾಡಬಹುದು.  ರೈತರು ಬೆಳೆ ಸಮೀಕ್ಷೆಯ ಉಚಿತ ಸಹಾವಾಣಿ ನಂಬರ್ 18004253553 ಗೆ ಸಂಪರ್ಕಿಸಬಹುದು.

ಬೆಳೆ ಸಮೀಕ್ಷೆ ಮಾಡುವಾಗ ಏನೇನು ಮಾಡಬೇಕು?

ಇಕೆವೈಸಿ ಮೂಲಕ ಆಧಾರ್ ದೃಢೀಕರಿಸು ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ನನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳು ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು.  ನಂತರ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ.  ಓಟಿಪಿ ಪಡೆಯಿರಿ / Generate OTP  ಮೇಲೆ ಕ್ಲಿಕ್ಮಾಡಬೇಕು.

ಇದನ್ನೂ ಓದಿ :ಬರ ಪರಿಹಾರ ಜಮೆಯಾಗಲು ಯಾವ ಷರತ್ತುಗಳಿವೆ? ಇಲ್ಲಿದೆ ಮಾಹಿತಿ

ಆಗ ನಿಮ್ಮಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ಪೇಸ್ಟ್ ಮಾಡಿ ಸೆಂಡ್ ಮೇಲೆ ಕ್ಲಿಕ್ ಮಾಡಬೇಕು.  ನಿಮ್ಮ ಮೊಬೈಲಿಗೆ ಓಟಿಪಿ ಬರದಿದ್ದರೆ Face Capture ಮೇಲೆ ಕ್ಲಿಕ್ ಮಾಡಿ ನಿಮ್ಮ ಫೋಟೋದೊಂದಿಗೆ ಬೆಳೆ ಸಮೀಕ್ಷೆ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಇನ್ನೂ ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬಹುದು.

Leave a Comment