ಬಡ ರೈತರು, ಕೂಲಿ ಕಾರ್ಮಿಕರು, ನಾಗರಿಕರು ಹಣಕಾಸಿನ ತೊಂದರೆಯಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯದೇ ಬಳಲುತ್ತಿರುವುದರನ್ನು ಗಮನಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ.
ಬಡವರಿಗೆ ಆರೋಗ್ಯಸೇವೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಯೋಜನೆಯೂ ಒಂದಾಗಿದೆ.
ರಾಜ್ಯದ ಎಲ್ಲಾ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯರಕ್ಷಣಾ ಯೋಜನೆಯನ್ನು ಕರ್ನಾಟಕ ಸರ್ಕಾರವು 2-3-2018 ರಿಂದ ಅನು ಆಯುಷ್ಠಾನಗೊಳಿಸಲಾಗುತ್ತಿತ್ತು. ನಂತರ ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿತು. ಈ ಎರಡೂ ಯೋಜನೆಗಳನ್ನು ಸಂಯೋಜಿಸಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನಿಂದ ಯಾರಿಗೆ ಚಿಕಿತ್ಸೆ ಸಿಗಲಿದೆ?
ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಶಕ್ಕೆ 5 ಲಕ್ಷ ರೂರಪಾಯಿಯವರೆಗೆ ಉಚಿತ ಚಿಕಿತ್ಸೆ ಸಿಗಲಿದೆ. ಎಪಿಎಲ್ ಕಾರ್ಡುದಾರರಿಗೆ ಅಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರಿಗೂ ಸಹ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ. 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದೆ. ವಾರ್ಶಿಕ ಪ್ರತಿ ಕುಟುಂಬಕ್ಕೆ 1.50 ಲಕ್ಷರೂಪಾಯಿಯವರೆಗೆ ಚಿಕಿತ್ಸೆ ಪಡೆಯಬಹುದು. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆಯಬಹುದು.
ಯಾವ ಯಾವ ಚಿಕಿತ್ಸೆ ಪಡೆಯಬಹುದು?
ಸಾಮಾನ್ಯ ದ್ವಿತೀಯ ಹಂತದ ಚಿಕಿತ್ಸೆಗಳೊಂದಿಗೆ ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ (ಹಾರ್ಟ್ ಅಟ್ಯಾಕ್), ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತು ಶಿಶುಗಳ ಕಾಯಿಲೆ ಸೇರಿದಂತೆ ಇನ್ನಿತರ ಚಿಕಿತ್ಸೆಗಳನ್ನು ಪಡೆಯಬಹುದು. ಸರ್ಕಾರಿ ಆಸ್ಪತ್ರಗಳಲ್ಲಿ ಚಿಕಿತ್ಸೆ ಲಭ್ಯವಿರದಿದ್ದರೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.
ಸೌಲಭ್ಯ ಪಡೆಯುವುದು ಹೇಗೆ?
ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡು ರೋಗಿಯು ತಾವು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು.
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಪಡೆಯುವುದೇ ಹೇಗೆ?
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ 10 ರೂಪಾಯಿ ಶುಲ್ಕದೊಂದಿಗೆ ನೀಡಲಾಗುತ್ತದೆ. ಸಮುದಾಯ ಆರೋಗ್ಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪಡೆಯಬಹುದು.
ಇದನ್ನೂ ಓದಿ : ಪಿಎಂ ಕಿಸಾನ್ 11ನೇ ಕಂತಿನ ಹಣ ಜಮೆಯಾಗಲು ಅನುಮೋದನೆ ಸಿಕ್ಕಿದೆಯೋ ಇಲ್ಲವೋ ಮೊಬೈಲ್ ನಲ್ಲೆ ಚೆಕ್ ಮಾಡಿ
ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿಯೂ 35 ರೂಪಾಯಿ ಶುಲ್ಕದೊಂದಿಗೆ ಕಾರ್ಡ್ ಪಡೆಯಬಹುದು. ಈ ಕಾರ್ಡ್ ಪಡೆಯಲು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ನೀಡಿ ಕಾರ್ಡ್ ಪಡೆದುಕೊಳ್ಳಬಹುದು.
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಅಡಿಯಲ್ಲಿ ಚಿಕಿತ್ಸೆ ಪಡೆಯುವುದು ಸೇರಿದಂತೆ ಕಾರ್ಡ್ ಪಡೆಯುವುದರ ಕುರಿತು ಮಾಹಿತಿಗೆ ಉಚಿತ ಸಹಾಯವಾಣಿ 104 ಅಥವಾ 1800 425 8330 ಗೆ ಕರೆ ಮಾಡಬಹುದು.
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಇಲ್ಲದಿದ್ದರೂ ಚಿಕಿತ್ಸೆ ಪಡೆಯಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ ನೀಡಿ ಚಿಕಿತ್ಸೆ ಸೌಲಭ್ಯ ಪಡೆಯಬಹುದು. ಆದರೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಇದ್ದರೆ ಚಿಕಿತ್ಸೆ ಪಡೆಯಲು ಯಾವುದೇ ಸಮಸ್ಯೆಯಾಗುವುದಿಲ್ಲ. ಯಾವ ದಾಖಲೆಯೂ ಸಲ್ಲಿಸುವ ಅಗತ್ಯವಿಲ್ಲ.