ಈ ರೈತರೇಕೆ ಪಿಎಂ ಕಿಸಾನ್ ಪಟ್ಟಿಯಿಂದ ಹೊರಗುಳಿಯಲಿದ್ದಾರೆ?

Written by By: janajagran

Updated on:

why these farmers not receiving pmkisan money ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಮಾಡಿಸಿದರೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಬಹುದು. ಒಂದು ವೇಳೆ ನೀವು ಇನ್ನೂ ಇಕೆವೈಸಿ ಮಾಡಿಸದಿದ್ದರೆ  ನಿಮಗೆ ಮುಂದಿನ ಕಂತು ತಡೆಹಿಡಿಯಲಾಗುವುದು. ಕೂಡಲೇ ನಿಮ್ಮ ಹತ್ತಿರದ ಸಿಎಸ್.ಸಿ ಕೇಂದ್ರದಲ್ಲಿ ಅಥವಾ ನಿಮ್ಮ ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಿಕೊಳ್ಳಬಹುದು.

ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು.  ಇಲ್ಲದಿದ್ದರೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.

ನೈಜ ಫಲಾನುಭವಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಈ ಆದೇಶ ಹೊರಡಿಸಿದೆ. ಇ-ಕೆವೈಸಿ ಮಾಡಿಕೊಂಡಲ್ಲಿ ಅರ್ಹ ರೈತರ ಖಚಿತ ಮಾಹಿತಿ ಲಭ್ಯವಾಗಲಿದೆ. ಇದಕ್ಕಾಗಿ ಆಧಾರ್ ಕಾರ್ಡ್ ಸಂಖ್ಯೆ ಲಿಂಕ್ ಮಾಡಬೇಕಿದೆ. ಒಂದೇ ಕುಟುಂಬದ ಹಲವರ ಹೆಸರಿನಲ್ಲಿ ಆರ್.ಟಿ.ಸಿ ಇದ್ದ ಕಾರಣ ಅಥವಾ ಮೂರು ಜನರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದರು.ಈ ಬಾರಿ ಆಧಾರ್ ಲಿಂಕ್ ಮಾಡುವುದರಿಂದ ಕುಟುಂಬದ ಮಾಹಿತಿ ಲಭ್ಯವಾಗುವುದರಿಂದ ಎಷ್ಟೇ ಜನರ ಹೆಸರಿನಲ್ಲಿ ಆರ್.ಟಿ.ಸಿ ಗಳಿದ್ದರೂ ಒಬ್ಬರಿಗೆ ಅಷ್ಟೇ ನೆರವು ಸಿಗಲಿದೆ. ಆದಾಯ ತೆರಿಗೆ ಕಟ್ಟುವವರ ಮಾಹಿತಿಯೂ ಸಹ ಲಭ್ಯವಾಗಲಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ರೈತರು ನಾಗರಿಕ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿವಾಗಿ ಇ-ಕೆವೈಸಿಯನ್ನು  ಮಾಡಿಸಬೇಕು. ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿಯೂ ಇ-ಕೆವೈಸಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದ್ದು, ಈ ಕುರಿತು ಗೊಂದಲವಿದ್ದರೂ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು. ಇ-ಕೆವೈಸಿ ಮಾಡಿಸದಿದ್ದಲ್ಲಿ ಫಲಾನುಭವಿಗಳಿಗೆ ಮುಂದಿನ ಕಂತು

ಏನಿದು ಪಿಎಂ ಕಿಸಾನ್ ಯೋಜನೆ?

ಪಿಎಂ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕುಟುಂಬದ ಒಬ್ಬ ಸದಸ್ಯರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೆರವು ನೀಡುವುದಕ್ಕಾಗಿ ಈ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಈಗಾಗಲೇ 15 ಕಂತುಗಳ ಹಣ ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿಯನ್ನು ಪಿಎಂ ಕಿಸಾನ್ ಯೋಜನೆಯ ಫಲಾನುಭವಗಳ ಖಾತೆಗೆ ಜಮೆ ಮಾಡಲಾಗುತ್ತಿದೆ.

why these farmers not receiving pmkisan money ಇ-ಕೆವೈಸಿ ಕಡ್ಡಾಯಗೊಳಿಸಿರುವುದೇಕೆ?

ಪಿಎಂ ಕಿಸಾನ್ ಯೋಜನೆಯಡಿ ಫಲಾನುಭವಿಯಾಗಲು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶವಿದೆ. ಆದರೆ ಇಂದು ಒಂದೇ ಕುಟುಂಬದ ಪತಿ, ಪತ್ನಿ ಹಾಗೂ ಮಕ್ಕಳೂ ಸಹ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ತೆರಿಗೆ ಕಟ್ಟುವವರು, ಸರ್ಕಾರಿ ನೌಕರರು ಸಹ ಈ ಯೋಜನೆಯ ಲಾಭ ಪಡೆಯುತ್ತಿದ್ದರಿಂದ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ.

ಇ-ಕೆವೈಸಿ ಮಾಡಿಸಿದರೆ ಒಂದು ಕುಟುಂಬದಲ್ಲಿ ಯಾವ ಯಾವ ಸದಸ್ಯರು ಲಾಭ ಪಡೆದುಕೊಳ್ಳುತ್ತಿದ್ದಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಒಬ್ಬರಿಗಿಂತ ಹೆಚ್ಚು ಸದಸ್ಯರು ಲಾಭ ಪಡೆಯುತ್ತಿದ್ದರೆ ಅಂತಹವನ್ನು ಕಂಡುಹಿಡಿದು ಮುಂದಿನ  ಕಂತು ತಡೆಹಿಡಿಯಲಾಗುವುದು. ಈ ಉದ್ದೇಶಕ್ಕಾಗಿಯೇ ಇ-ಕೆವೈಸಿಯನ್ನು ಕಡ್ಾಯಗೊಳಿಸಲಾಗಿದೆ. ಇನ್ನೂ ಮುಂದೆ ಒಂದೇ ಕುಟುಂಬದ ಒಬ್ಬರಿಗಿಂತ ಹೆಚ್ಚು ಸದಸ್ಯರು ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯುವುದಕ್ಕಾಗುವುದಿಲ್ಲ.

ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಸ್ಟೇಟಸ್ ಚೆಕ್ ಮಾಡಬೇಕೇ?

ರೈತರು ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು

https://pmkisan.gov.in/BeneficiaryStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಿ ಆಧಾರ್ ಕಾರ್ಡ್ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿ 15ನೇ ಕಂತಿನ ಸ್ಟೇಟಸ್ ಚೆಕ್ ಮಾಡಬಹುದು. ಸ್ಟೇಟಸ್ ನಲ್ಲಿ ಪೇಮೆಂಟ್ ಪ್ರೋಸೆಸ್ಡ್ ಇದ್ದರೆ ಮುಂದಿನ ಕಂತು ನಿಮ್ಮ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ.

Leave a Comment