5, 8, ಹಾಗೂ9 ನೇ ತರಗತಿ ಓದುತ್ತಿರುವ ಮಕ್ಕಳಿಗೆ ಇಲ್ಲಿದೆ ಸಂತಸದ ಸುದ್ದಿ. ಮಾರ್ಚ್ ತಿಂಗಳಲ್ಲಿ ನಡೆಯುವ ಪರೀಕ್ಷೆಯ model question papers ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಬಹುದು.
ಹೌದು, 2023-24ನೇ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಶ್ನೋತ್ತರ ಪತ್ರಿಕೆಗಳನ್ನುಬಿಡುಗಡೆ ಮಾಡಲಾಗಿದೆ.
ವಿದ್ಯಾರ್ಥಿಗಳು ಸರ್ಕಾರಿ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡುವ ಮೂಲಕ ಮಾದರಿ ಪ್ರಶ್ನೋತ್ತರ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯಸಿಸುವಂತೆ ಕ್ರಮವಹಿಸಲು ಸೂಚಿಸಲಾಗಿದೆ. ಈ ವರ್ಷ 50 ಅಂಕಗಳ ಪ್ರಶ್ನೆ ಪತ್ರಿಕೆಯಾಗಿರುತ್ತದೆ. ಪ್ರಶ್ನೆ ಪತ್ರಿಕೆ ಹೇಗಿರುತ್ತದೆ. ಅಂದರೆಮಾದರಿ ಪ್ರಶ್ನೆಪತ್ರಿಕೆಯಲ್ಲಿ ವಿದ್ಯಾರ್ಥಿಗಳು ಯಾವ ಮಾಹಿತಿಯನ್ನು ಭರ್ತಿ ಮಾಡಬೇಕು. ಈ ಪರೀಕ್ಷೆ ಬರೆಯಲು ಎಷ್ಟು ಸಮಯಾವಕಾಶ ಇರುತ್ತದೆ ಯಾವ ಯಾವ ಪ್ರಶ್ನೆಗಳಿಗೆ ಎಷ್ಟು ಅಂಕಗಳು ಇರುತ್ತವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
model question papers ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡುವುದು ಹೇಗೆ?
5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆ ಡೌನ್ಲೋಡ್ ಮಾಡಲು ಈ
https://kseab.karnataka.gov.in/new-page/Class_5_8_9_Assessment_Model_Question_Cum_Answer_Booklets/kn
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ 5ನೇ ತರಗತಿ, 8ನೇ ತಗತಿ ಹಾಗೂ 9 ನೇ ತರಗತಿ ಹೀಗೆ ಮೂರು ಭಾಗಗಳಲ್ಲಿ ವಿಂಗಡಣೆ ಮಾಡಲಾಗಿರುತ್ತದೆ. ಆರಂಭದಲ್ಲಿ ಐದನೇ ತರಗತಿಯ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್ ಮಾಧ್ಯಮದ ಪ್ರಥಮ ಭಾಷೆ ಇಂಗ್ಲೀಷ್, ನಂತರ ಹಿಂದಿ ಭಾಷೆಯ ಪ್ರಶ್ನ ಪತ್ರಿಕೆ ಇರುತ್ತದೆ.
ಇಂಗ್ಲೀಷ್ ಮಾಧ್ಯಮದ ದ್ವಿತೀಯ ಭಾಷೆ ಕನ್ನಡ, ಕನ್ನಡ ಮಾಧ್ಯಮದ ದ್ವಿತೀಯ ಭಾಷೆ ಇಂಗ್ಲೀಷ್ ಪ್ರಶ್ನೆ ಪತ್ರಿಕೆ ಇರುತ್ತದೆ. ಇದರೊಂದಿಗೆ ಗಣಿತ ಕನ್ನಡ ಮಾಧ್ಯ, ಗಣಿತ ಇಂಗ್ಲೀಷ್ ಮಾಧ್ಯಮ ಹಾಗೂ ಇವಿಎಸ್ ಕನ್ನಡ ಮಾಧ್ಯಮ ಮತ್ತು ಇಂಗ್ಲೀಷ್ ಮಾಧ್ಯಮದ ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿರುತ್ತದೆ.
ಇದನ್ನೂ ಓದಿ : ನೀವು ಯಾವ ವಾರ ಹುಟ್ಟಿದ್ದೀರಿ? ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮಗೆ ಯಾವ ಭಾಷೆಯ ಪ್ರಶ್ನೆ ಪತ್ರಿಕೆ ಡೌನ್ಲೋಡ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆ ಮೇಲೆ ಕ್ಲಿಕ್ ಮಾಡಬೇಕು. ಆಗ ಮಾದರಿ ಪ್ರಶ್ನೆ ಪತ್ರಿಕೆ ಓಪನ್ ಆಗುತ್ತದೆ. ಅಲ್ಲಿ ಕೇಳಲಾದ ಪ್ರಶ್ನೆಗಳಿಗೆ ಒಮ್ಮೆ ಚೆಕ್ ಮಾಡಿ. ನಿಮ್ಮ ಸಿಲೆಬಸ್ ಸಂಬಂಧಿಸಿದ ಪ್ರಶ್ನೆಗಳಿವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಆ ಪ್ರಶ್ನೆ ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬಹುದು. ನಂತರ ಮಾದರಿ ಪ್ರಶ್ನೆ ಪತ್ರಿಕೆಗೆ ಒಮ್ಮೆ ಮನೆಯಲ್ಲಿ ಉತ್ತರಿಸಿ ಚೆಕ್ ಮಾಡಿಕೊಳ್ಳಬಹುದು. ಇದೇ ಮಾದರಿದಲ್ಲಿ ನಿಮಗೆ ಮಾರ್ಚ್ ತಿಂಗಳಲ್ಲಿ ನಡೆಯುವ ಪರೀಕ್ಷೆಯಲ್ಲಿ ಪ್ರಶ್ನೆಗಳು ಬರುತ್ತವೆ.
ಪಾಲಕರು ಸಹ ಮಕ್ಕಳಿಗೆ ಪ್ರಶ್ನೆ ಪತ್ರಿಕೆಯಂತೆ ಮಾದಿರ ಪ್ರಶ್ನೆ ಪತ್ರಿಕೆ ತಯಾರಿಸಬಹುದು. ಇದು ಮಕ್ಕಳಿಗೆ ಪ್ರಶ್ನೆ ಬಿಡಿಸಲು ಅನುಕೂಲವಾಗುತ್ತದೆ.
model question papers ಡೌನ್ಲೋಡ್ ಮಾಡಲು ಸಮಸ್ಯೆಯಾಗುತ್ತಿದ್ದರೆ ಅಥವಾ ಅರ್ಥವಾಗುತ್ತಿಲ್ಲವಾದರೆ ತಾವುಗಳು 9731491393 ಗೆ ಕರೆ ಮಾಡಬಹುದು. ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದ ಮಕ್ಕಳಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಈ ಲೇಖನ ಬರೆಯಲಾಗಿದೆ. ನಿಮಗೆ ಈ ಲೇಖನ ಇಷ್ಟವಾದರೆ ನಿಮ್ಮ ಸ್ನೇಹಿತರಿಗೆ ಕಳುಹಿಸಬಹುದು. ಏಕೆಂದರೆ ಬಹುತೇಕ ಮಕ್ಕಳಿಗೆ ಪ್ರಶ್ನೆ ಪತ್ರಿಕೆ ಬಗ್ಗೆ ಗೊತ್ತಿರುವುದಿಲ್ಲ.