ರೈತರು ತಮ್ಮ ಜಮೀನಿನ ಮೂಲ ಸರ್ವೆ ಟಿಪ್ಪಣಿ ಪುಸ್ತಕವನ್ನು ಒಂದೇ ನಿಮಿಷದಲ್ಲಿ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಹೌದು, ರೈತರು ತಮ್ಮ ಜಮೀನಿನ ಈ ದಾಖಲೆ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ, ಮನೆಯಲ್ಲಿಯೇ ಕುಳಿತು ಜಮೀನಿನ ಓರಿಜನಲ್ ಸರ್ವೆ ಟಿಪ್ಪಣಿ ಪುಸ್ತಕವನ್ನು ಮೊಬೈಲ್ ನಲ್ಲಿಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್ ನಲ್ಲಿಮೂಲ ಸರ್ವೆ ಟಿಪ್ಪಣಿ ಪುಸ್ತಕ ಚೆಕ್ ಮಾಡಿ (How to download Mula survey tippani pustaka)

ರೈತರು ತಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲಿ ಮೂಲ ಸರ್ವೆ ಟಿಪ್ಪಣಿ ಪುಸ್ತಕ ಚೆಕ್ ಮಾಡಲು ಈ

https://bhoomojini.karnataka.gov.in/service35/

ಲಿಂಕ್ ಮೇಲೆ  ಕ್ಲಿಕ್ ಮಾಡಬೇಕು.ಆಗ ಸರ್ವೆ ಡಾಕುಮೆಂಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಯ್ಕೆಮಾಡಿದ ಸರ್ವೆ ಸಂಖ್ಯೆಗೆ ದಾಖಲೆಗಳು ಲಭ್ಯವಿದೆ ಕೆಳಗಡೆ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಹೊಬಳಿ ಆಯ್ಕೆ ಮಾಡಿಕೊಳ್ಳಬೇಕು. ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು.ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಸರ್ನೋಕ್ ನಲ್ಲಿ ಸ್ಟಾರ್ ಹಾಗೂ ಹಿಸ್ಸಾ ಕಾಲಂನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹುಡುಕು ಮೇಲೆ ಕ್ಲಿಕ್ ಮಾಡಬೇಕು. ಆಗ ಮೂಲ ಸರ್ವೆ ಟಿಪ್ಪಣಿ ಪುಸ್ತಕ, ಹಿಸ್ಸಾ ಅಟ್ಲಾಸ್, ಹಿಸ್ಸಾ ಸರ್ವೆ ಪೋಡಿ ಟಿಪ್ಪಣಿ ಪುಸ್ತಕ ಹೀಗೆ ನಿಮಗೆ ಕೆಲವು ಆಯ್ಕೆಗಳು ಕಾಣುತ್ತವೆ. ನೀವು ಮೂಲ ಸರ್ವೆ ಟಿಪ್ಪಣಿ ಪುಸ್ತಕ ಡೌನ್ಲೋಡ್ ಮಾಡಿಕೊಳ್ಳುತ್ತಿದ್ದರಿಂದ View Document  ಕೆಳಗಡೆ ಕಾಣುವ ಪಿಡಿಎಫ್ ಪೈಲ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೂಲ ಸರ್ವೆ ಟಿಪ್ಪಣಿ ಪುಸ್ತಕ ಓಪನ್ ಆಗುತ್ತದೆ.

ಮೂಲ ಸರ್ವೆ ಟಿಪ್ಪಣಿ ಪುಸ್ತಕ (mula survery tippani pustaka)

ಮೂಲ  ಸರ್ವೆ ಟಿಪ್ಪಣಿ ಪುಸ್ತಕದಲ್ಲಿ ಸರ್ವೆ ನಂಬರ್ ಕಾಣಿಸುತ್ತದೆ. ಅದರ ಸುತ್ತಮುತ್ತಲಿರುವ ಸರ್ವೆ ನಂಬರ್ ಗಳ ಮ್ಯಾಪ್ ಕಾಣಿಸುತ್ತದೆ. ಇದನ್ನು ರೈತರು ತಮ್ಮ ಮೊಬೈಲ್ ನಲ್ಲಿ ವೀಕ್ಷಿಸಬಹುದು. ಇದೇ ಓರಿಜನಲ್ ಟಿಪ್ಪಣಿ ಡೌನ್ಲೋಡ್ ಮಾಡಿಕೊಳ್ಳಬೇಕಾದರೆ ಶುಲ್ಕ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ : ಈ ಪಟ್ಟಿಯಲ್ಲಿರುವ ರೈತರಿಗಷ್ಟೇ ಪಿಎಂ ಕಿಸಾನ್ ಹಣ ಜಮೆ- ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಚೆಕ್ ಮಾಡಿ

ಆನ್ಲೈನ್ ನಲ್ಲಿಯೂ ಶುಲ್ಕ ಪಾವತಿಸಿ ಡೌನ್ಲೋಡ್ ಮಾಡಿಕೊಳ್ಳಬಹುದು. ಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಸಮಸ್ಯೆಯಾಗುತ್ತಿದ್ದರೆ ಗ್ರಾಮ ಒನ್, ಬೆಂಗಳೂರು ಒನ್, ಸಿಎಸ್.ಸಿ ಕೇಂದ್ರಗಳಲ್ಲಿ ಶುಲ್ಕ ಪಾವತಿಸಿ ಓರಿಜನಲ್ ಮೂಲ ಸರ್ವೆ ಟಿಪ್ಪಣಿ ಪುಸ್ತಕ ಪಡೆದುಕೊಳ್ಳಬಹುದು.

ಆಕಾರ್ ಬಂದ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ (Akarband download in mobile)

ಮೇಲ್ಗಡೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಅಲ್ಲಿ ಓಪನ್ ಆಗುವ ಪೇಜ್ ನಲ್ಲಿ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಸರ್ವೆ ನಂಬರಿನ ಆಕಾರ್ ಬಂದ್ ಡೌನ್ಲೋಡ್ ಮಾಡಿಕೊಳ್ಳಬೇಕೆಂದುಕೊಂಡಿದ್ದೀರೋ ಆ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಹಾಗೂ ಹಿಸ್ಸಾ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಂಡು ಆಕಾರಬಂದ್ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಬೇಕು. ಆಗ ಆಕಾರಬಂದ್ ದಾಖಲೆ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ 29 ಕಾಲಂಗಳ ಆಕಾರಬಂದ್ ಪೇಜ್ ಕಾಣಿಸುತ್ತದೆ. ಅಲ್ಲಿ ರೈತರು ನಮೂದಿಸಿದ ಸರ್ವೆ ನಂಬರಿನಲ್ಲಿ ಎಷ್ಟು ಎಕರೆ ಜಮೀನಿದೆ? ಖರಾಬು ಜಮೀನು ಎಷ್ಟು ಎಖರೆ, ಖುಷ್ಕಿ ಜಮೀನು ಎಷ್ಟಿದೆ? ಎಂಬ ಮಾಹಿತಿ ಕಾಣಿಸುತ್ತದೆ.  ಇದನ್ನು ರೈತರು ಮೊಬೈಲ್ ನಲ್ಲೇ ಡೋನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬಹುದು.

Leave a Reply

Your email address will not be published. Required fields are marked *