ಕೃಷಿ ಸಿಂಚಾಯಿ ಯೋಜನೆ, ಸೂಕ್ಷ್ಮ ನೀರಾವರಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಕಲಬುರಗಿ, ದಾವಣಗೆರೆ ಜಿಲ್ಲೆ ಹಾಗೂ ಹೊಸಪೇಟೆ ತಾಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪ್ರಸಕ್ತ 2023-24ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತಬಳಕೆಗಾಗಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಪ್ರಸಕ್ತ ಸಾಲಿಗೆ ಸಹಾಯಧನ ನೀಡಲು ಅರ್ಜಿ ಆಙ್ವಾನಿಸಲಾಗಿದೆ.ಹೌದು, ಕಲಬುರಗಿ ಹಾಗೂ ಕಮಲಾಪುರ ತಾಲೂಕಿನ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಸಾಮಾನ್ಯ ವರ್ಗದ ರೈತರಿಗೆ ಶೇ. 75 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯದನ ನೀಡಲು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಸಂಬಂಧಪಟ್ಟ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಇದನ್ನೂ ಓದಿ : ಗೃಹಲಕ್ಷ್ಮೀ ಹಣ ಯಾರಿಗೆ ಜಮೆಯಾಗುತ್ತದೆ? ಯಾರಿಗೆ ಜಮೆಯಾಗಲ್ಲ? ಮೊಬೈಲ್ ನಲ್ಲೇ ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ತಾಲೂಕಿನ ರೈತರು ಮೊಬೈಲ್ ಸಂಖ್ಯೆ 9008101303, ಪಟ್ಟಣ 9164835917, ಫರಹತಾಬಾದ್ 9686214111, ಅವರಾದ (ಬಿ) 6366591631, ಮಹಾಗಾಂವ 9738416930 ಹಾಗೂ ಕಮಲಾಪುರ7259866723 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?
ಹನಿ ನೀರಾವರಿ ಸೌಲಭ್ಯ ಪಡೆಯಲು ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಜಮೀನಿನ ಪಹಣಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ಎಫ್ಐಡಿ ಸಂಖ್ಯೆ ಹೊಂದಿರಬೇಕು. ಈ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಯಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸಬೇಕು.
ದಾವಣಗೆರೆ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ದಾವಣಗೆರೆ ಜಿಲ್ಲೆಯ ರೈತರುಗಳಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿ.ಪಂ) ಕಚೇರಿ, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೈತ ಸಂಪರ್ಕ ಕಚೇರಿಗಳಿಗೆ ಅಕ್ಟೋಬರ್31 ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : ಎಫ್ಐಡಿ ಆಗಿರುವ ಈ ರೈತರಿಗೆ ಮಾತ್ರ ಬರ ಪರಿಹಾರ ಜಮೆ- ನಿಮ್ಮ ಎಫ್ಐಡಿ ಆಗಿದೆಯೇ? ಇಲ್ಲೇ ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ಸಂಪರ್ಕ ಕೇಂದ್ರಗಳ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದಾವಣಗೆರೆ, ಚನ್ನಗಿರಿ, ಹೊನ್ನಾಳ್ಳಿ, ಹರಿಹರ ಮತ್ತು ಜಗಳೂರು ಇವರನ್ನು ಸಂಪರ್ಕಿಸಲು ರಾಘವೇಂದ್ರ ಪ್ರಸಾದ ತಿಳಿಸಿದ್ದಾರೆ.
ಹೊಸಪೇಟೆ ತಾಲೂಕಿನಿಂದಲೂ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಹನಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಎಂ. ರಮೇಶ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 8310291867,9611227478,8123465548, 8073719905 ಗೆ ಸಂಪರ್ಕಿಸಲು ಕೋರಲಾಗಿದೆ.
ಹನಿ ನೀರಾವರಿಗೆ ಅರ್ಜಿ ಸಲ್ಲಿಸಿದ ರೈತರಲ್ಲಿ ಯಾರಿಗೆ ನೀಡಲಾಗುವುದು?
ಹನಿ ನೀರಾವರಿಗೆ ಅರ್ಜಿ ಸಲ್ಲಿಸಿದ ರೈತರನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು. ಅಂದರೆ ಈ ಹಿಂದೆ ಹನಿ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆದಿರಬಾರದು, ಅರ್ಜಿ ಸಲ್ಲಿಸುವಾಗ ಕೊನೆಯ ದಿನಾಂಕದೊಳಗೆ ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಲಭ್ಯತೆಯ ಆಧಾರದ ಮೇಲೆ ಹಿರಿತನವನ್ನು ಪರಿಗಣಿಸಿ ರೈತರಿಗೆ ಹನಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಲು ಕೋರಲಾಗಿದೆ.