ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ

Written by By: janajagran

Updated on:

Drip irrigation subsidy to farmers ತೋಟಗಾರಿಕಾ ಇಲಾಖೆಯು 2021-22ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕಗಳಿಗೆ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು  ಕಲಬುರಗಿ (ಜಿಲ್ಲಾ ಪಂಚಾಯತ್) ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಈ ಸೌಲಭ್ಯಕ್ಕಾಗಿ ಕಲಬುರಗಿ ಜಿಲ್ಲೆಯ ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದಾಗಿದ್ದು, ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಹನಿ ನೀರಾವರಿ ಸೌಲಭ್ಯವನ್ನು ಅಳವಡಿಸಿಕೊಳ್ಳಬಹುದಾಗಿದೆ. ಸಣ್ಣ ಮತ್ತು ಅತಿಸಣ್ಣ ರೈತರು/ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರೆಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇ.90ರಷ್ಟು ಸಹಾಯಧನ ನೀಡಲಾಗುತ್ತದೆ. ಇತರೆ ದೊಡ್ಡ ವರ್ಗದ ರೈತರಿಗೆ ಶೇ. 45 ರಷ್ಟು ಸಹಾಯಧನವನ್ನು ವಿತರಿಸಲಾಗುತ್ತದೆ. ವಿಕಲಚೇತನರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಹಾಯಧನ ವಿತರಿಸಲಾಗುತ್ತದೆ.

Drip irrigation subsidy to farmers ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ

ತೋಟಗಾರಿಕಾ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಬೇಕು. ಈ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದರಿಂದ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ರೈತರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗಲಿದೆ.

ಇದನ್ನೂ ಓದಿ : ಮೊಬೈಲ್ ನಲ್ಲಿಯೇ ಓರಿಜಿನಲ್ ಪಹಣಿ (Pahani) ಡೋನ್ಲೋಡ್ ಮಾಡಿಕೊಳ್ಳಬೇಕೇ…. ಇಲ್ಲಿದೆ ಸಂಪೂರ್ಣ ಮಾಹಿತಿ

ಆಸಕ್ತ ರೈತ ಫಲಾನುಭವಿಗಳು ಸಂಬಂಧಿಸಿದ ಆಯಾ ತಾಲೂಕಿನ ತೋಟಗಾರಿಕಾ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ತಾಲ್ಲೂಕು ಮಟ್ಟದ ತೋಟಗಾರಿಕಾ ಅಧಿಕಾರಿಗಳನ್ನು ಅಥವಾ ಅಫಜಲಪೂರ ಮೊಬೈಲ್ ಸಂಖ್ಯೆ 8095143035, ಆಳಂದ-7760969088, ಚಿಂಚೋಳಿ-9480633045,  ಚಿತ್ತಾಪೂರ-9449004777,  ಕಲಬುರಗಿ-9900431657,  ಜೇವರ್ಗಿ-9448651017 ಹಾಗೂ  ಸೇಡಂ-9480633045 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ವಿಕಲಚೇತನ ಬಡ ಜನರಿಗೆ ಗ್ಯಾಸ್ ಸ್ಟೋ ವಿತರಣೆ: ಅರ್ಜಿ ಆಹ್ವಾನ

ಕಲಬುರಗಿ ಮಹಾನಗರ ಪಾಲಿಕೆಯಿಂದ ಶೇ. 5ರ ಯೋಜನೆಯಡಿ ವಿಕಲಚೇತನ ಬಡ ಜನರಿಗೆ ಗ್ಯಾಸ್ ಸ್ಟೋ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಸುಧಾಕರ ಲೋಖಂಡೆ ಅವರು ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳು 2021ರ ನವೆಂಬರ್ 30 ರೊಳಗಾಗಿ ಪ್ರತಿದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ (ರಜಾ ದಿನವನ್ನು ಹೊರತುಪಡಿಸಿ) ಕಲಬುರಗಿ ಮಹಾನಗರ ಪಾಲಿಕೆಯ ರೂಂ. ನಂ 45 ಕ್ಕೆ ಖುದ್ದಾಗಿ ಬಂದು ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ  ಅರ್ಜಿ  ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Leave a Comment