ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 2021-22ನೇ ಸಾಲಿನಲ್ಲಿ ರೈತರಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ರಾಮನಗರ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳಾದ ತೆಂಗು, ಬಾಳೆ, ಮಾವು, ಸಪೋಟಾ, ನಿಂಬೆ, ದಾಳಿಂಬೆ, ಪಪ್ಪಾಯ, ಹೂವಿನ ಬೆಳೆ, ತರಕಾರಿ ಬೆಳೆ ಹಾಗೂ ಇತ್ಯಾದಿ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ನೀಡಲಾಗುತ್ತಿದ್ದು, ಸಣ್ಣ ಅತೀ ಸಣ್ಣ ರೈತರು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ 2 ಹೆಕ್ಟೇರ್ ವರೆಗೆ ಶೇ. 90 ರಷ್ಟು ಸಹಾಯಧನ ಹಾಗೂ 2 ರಿಂದ 5 ಹೆಕ್ಟೇರ್ ವರೆಗಿನ ರೈತರಿಗೆ ಶೇ. 45 ರಷ್ಟು ಸಹಾಯಧನ ನೀಡಲಾಗುತ್ತಿದೆ.

ಇದನ್ನೂ ಓದಿ : ನೀವು ಯಾವ ಯಾವ ಬ್ಯಾಂಕಿನಲ್ಲಿ ಎಷ್ಟೇಷ್ಟು ಸಾಲ ಪಡೆದಿದ್ದೀರಿ ಎಂಬುದನ್ನು ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಆಸಕ್ತ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ್) ಕಚೇರಿ ಕನಕಪುರ, ಇಳ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ ಕಸಬಾ 80730 45893, ಸಹಾಯಕ ತೋಟಗಾರಿಕೆ ಅಧಿಕಾರಿ ಹಾರೋಹಳ್ಳಿ 80951 46220, ಸಹಾಯಕ ತೋಟಗಾರಿಕೆ ಅಧಿಕಾರಿ ಮರಳವಾಡಿ 99808 02729, ಸಹಾಯಕ ತೋಟಗಾರಿಕೆ ಅಧಿಕಾರಿ ಸಾತನೂರ 80730 45893, ಸಹಾಯಕ ತೋಟಗಾರಿಕೆ ಅಧಿಕಾರಿ ಕೋಡಿಹಳ್ಳಿ 95916 74212, ಸಹಾಯಕ ತೋಟಗಾರಿಕೆ ಅಧಿಕಾರಿ ಉಯ್ಯಂಬಳ್ಳಿ 78926 50037 ರವರನ್ನು ಸಂಪರ್ಕಿಸಬಹುದು ಎಂದು ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *