ಬರಗಾಲ ಘೋಷಣೆ: ಬರಗಾಲ ಹಣ ಜಮೆ ಇಲ್ಲೇ ಚೆಕ್ ಮಾಡಿ

Written by Ramlinganna

Updated on:

Drought amount will release ರಾಜ್ಯದಲ್ಲಿ ಘೋಷಣೆಯಾದ 195 ಬರಗಾಲ  ತಾಲೂಕುಗಳಲ್ಲಿ ಯಾವ ಯಾವ ರೈತರಿಗೆ ಬರಗಾಲದ ಹಣ ಜಮೆಯಾಗುತ್ತದೆ? ಯಾರಿಗೆ ಜಮೆಯಾಗಲ್ಲ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಬರಗಾಲ ಘೋಷಣೆಯಾದ ತಾಲೂಕುಗಳ ರೈತರು ತಮಗೆ ಬೆಳೆ ಹಾನಿ ಪರಿಹಾರ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ ರೈತರು ನನ್ನ ಬೆಳೆ ನನ್ನ ಹಕ್ಕು ಆಶಯದಡಿಯಲ್ಲಿ ಸಮೀಕ್ಷೆ ಮಾಡಲು ಕೋರಲಾಗಿತ್ತು. ರೈತರು ಬೆಳೆ ಸಮೀಕ್ಷೆ ಮಾಡಿದರೆ ಮಾತ್ರ ಅವರುಗೆ ಬೆಳೆ ವಿಮೆ, ಬೆಳೆ ಹಾನಿ ಸೇರಿದಂತೆ ಸರ್ಕಾರದ ವತಿಯಿಂದ ಜಮೀನಿನ ಮೇಲೆ ಸೌಲಭ್ಯ ಸಿಗುತ್ತದೆ. ಈಗಾಗಲೇ ಸರ್ಕಾರದ ವತಿಯಿಂದ ರಾಜ್ಯದಲ್ಲಿ 195 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವುದರಿಂದ ತಾಲೂಕುಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಈ ತಾಲೂಕಿನಲ್ಲಿ ಅಧಿಕಾರಿಗಳಿಂದ ಪಾರದರ್ಶಕತೆಯಿಂದ ಸಮೀಕ್ಷೆ ಮಾಡಿ ನೊಂದ ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗಾಗಿ ಸಂಬಂಧಿಸಿದ ಅಧಿಕಾರಿಗಳು ಸಹ ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ.

Drought amount will release ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬೆಳೆ ಸಮೀಕ್ಷೆಯಾದ ರೈತರಿಗೆ ಮಾತ್ರ ಬೆಳೆ ಹಾನಿ ಪರಿಹಾರ ಜಮೆಯಾಗುತ್ತದೆ. ನಿಮಗೆ ಜಮೆಯಾಗುತ್ತೋ ಇಲ್ಲವೋ ಚೆಕ್ ಮಾಡಲು ಈ

https://play.google.com/store/apps/details?id=com.crop.offcskharif_2021

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಏಕೆಂದರೆ ನಿಮ್ಮ ಬೆಳೆ ಸಮೀಕ್ಷೆ ಆದರೆ ಮಾತ್ರ ನಿಮಗೆ ಬರಗಾಲದ ಬೆಳೆಹಾನಿ ಪರಿಹಾರ ಹಣ ಜಮೆಯಾಗುತ್ತದೆ. ಹಾಗಾಗಿ ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನುಚೆಕ್ ಮಾಡಿಕೊಳ್ಳಬೇಕು.  ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಬೆಳೆ ದರ್ಶಕ್ ಎಂಬ ಆ್ಯಪ್ ಕಾಣಿಸುತ್ತದೆ. ಅಲ್ಲಿ ನೀವು Install ಮೇಲೆ ಕ್ಲಿಕ್ ಮಾಡಬೇಕು. ನಂತರ open  ಮೇಲೆ ಕ್ಲಿಕ್ ಮಾಡಬೇಕು.  ನಂತರ ನಿಮಗೆ ಬೆಳೆ ದರ್ಶಕ್ 23-24 ಕಾಣಿಸುತ್ತದೆ.

ಅದರ ಕೆಳಗಡೆ ನಿಮಗೆರಡು ಆಯ್ಕಗಳು ಕಾಣಿಸುತ್ತವೆ. ಅದರಲ್ಲಿ ನೀವುರೈತ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ವೈಲ್ ಯೂಸಿಂಗ್ ದಿಸ್ ಆ್ಯಪ್ ಮೇಲೆ ಕ್ಲಿಕ್ ಮಾಡಿ ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ವರ್ಷ 2023-2024 ಆಯ್ಕೆ ಮಾಡಿಕೊಳ್ಳಬೇಕರು. ನಂತರ ಋತು ಮುಂಗಾರು ಆಯ್ಕೆಮಾಡಿಕೊಳ್ಳಬೇಕು.

ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಸರ್ವೆ ನಂಬರ್ ಹಿಸ್ಸಾ ವಿವರದಲ್ಲಿನಿಮ್ಮ ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಮಾಲಿಕರ ವಿವರಕ್ಕಾಗಿ ಕ್ಲಿಕ್ ಮಾಡಿ ಮೇಲೆ ಕ್ಲಿಕ್ ಮಾಡಿದ ನಂತರ ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿ ಯಾವ ಯಾವ ಮಾಲಿಕರು ಬರುತ್ತಾರೆ ಅವರ ಹೆಸರು ಕಾಣಿಸುತ್ತದೆ.

ಇದನ್ನೂ ಓದಿ 18. 44 ಕೋಟಿ ಬೆಳೆ ವಿಮೆ ಹಣ ಬಿಡುಗಡೆ: ನಿಮ್ಮ ಖಾತೆಗೆ ಜಮೆ ಆಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಅಲ್ಲಿ ನಿಮ್ಮಹೆಸರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಮೀಕ್ಷೆಯ ವಿವರಗಳನ್ನು ಪಡೆಯಿರು ಮೇಲೆ ಕ್ಲಿಕ್ ಮಾಡಿದಾಗ ನಿಮ್ಮಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ. ಅಂದರೆ ನಿಮ್ಮ ಸರ್ವೆ ನಂಬರ್ ಬೆಳೆ ಸಮೀಕ್ಷೆಯನ್ನು ಬಳಕೆದಾರರು ಕೆಳಗೆ ನಮೂದಿಸಿದ್ದಾರೆ ಸೇರಿದಂತೆ ಸಮೀಕ್ಷೆದಾರರ ಹೆಸರು, ಮೊಬೈಲ್ ನಂಬರ್ ಹಾಗೂ ಸಮೀಕ್ಷೆಯ ದಿನಾಂಕ ಕಾಣಿಸುತ್ತದೆ.

ಈ ಆಧಾರದ ಮೇಲೆ  ನಿಮಗೆ ಬರಗಾಲದ ಹಣ ಜಮೆಯಾಗುವುದನ್ನುತಿಳಿದುಕೊಳ್ಳಬಹುದು. ಒಂದು ವೇಳೆ ಸಮೀಕ್ಷೆ ಆಗಿದ್ದಲ್ಲಿ ಕೂಡಲೇ ಸಮೀಕ್ಷೆ ಮಾಡಿಕೊಳ್ಳಬಹುದು.

1 thought on “ಬರಗಾಲ ಘೋಷಣೆ: ಬರಗಾಲ ಹಣ ಜಮೆ ಇಲ್ಲೇ ಚೆಕ್ ಮಾಡಿ”

Leave a Comment