ಬರಗಾಲ ಪರಿಹಾರ ಯಾರಿಗೆ ಜಮೆಯಾಗಿದೆ? ಇಲ್ಲಿದೆ ಮಾಹಿತಿ

Written by Ramlinganna

Updated on:

Drought amount who get : ಬರಗಾಲ ಪರಿಹಾರ ಹಣ ಯಾರಿಗೆ ಜಮೆಯಾಗುತ್ತದೆ? ಯಾರಿಗೆ ಜಮೆಯಾಗುವುದಿಲ್ಲ ಎಂಬುದನ್ನು ರೈತರು ಇಲ್ಲೇ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಪ್ರಸಕ್ತ ವರ್ಷ ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬಹುತೇಕ ರೈತರ ಬೆಳೆ ನಷ್ಟವಾಗಿತ್ತು.  ಕೆಲವು ರೈತರ ಬೆಳೆ ಬಿತ್ತನೆ ಸಂದರ್ಭದಲ್ಲಿಯೇ ಹಾಳಾಗಿತ್ತು.  ಇನ್ನೂ ಕೆಲವು ರೈತರು ಬೆಳೆ ಮೊಳಕೆಯೊಡೆಯದೆ ಹಾಳಾಗಿತ್ತು. ಇನ್ನೂ ಕೆಲು ರೈತರ ಬೆಳೆ ಕೊಯ್ಲು ಸಂದರ್ಭದಲ್ಲಿ ಹಾಳಾಗಿತ್ತು. ಹೀಗಾಗಿ ರಾಜ್ಯ ಸರ್ಕಾರವು 200 ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಯಿತು.

ಕೇಂದ್ರ ಸರ್ಕಾರವು ಬರಗಾಲದ ಹಣ ಬಿಡುಗಡೆ ಮಾಡದೆ ಇರುವುದರಿಂದ ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಎಕರೆಗೆ 2 ಸಾವಿರ ರೂಪಾಯಿ ಹಣವನ್ನು ಜಮೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.ಈಗಾಗಲೇ ಕೆಲವು ರೈತರಿಗೆ ಬರಗಾಲ ಪರಿಹಾರದ ತಾತ್ಕಾಲಿಕ ಹಣವನ್ನು ಜಮೆ ಬಿಡುಗಡೆ ಮಾಡಲಾಗಿದೆ. ಹಾಗಾದರೆ ಯಾವ ರೈತರಿಗೆ ಬರಗಾಲ ಪರಿಹಾರ ಹಣ ಜಮೆಯಾಗುತ್ತದೆ? ಯಾವ ರೈತರಿಗೆ ಬರಗಾಲ ಪರಿಹಾರ ಹಣ ಜಮೆಯಾಗುವುದಿಲ್ಲ ಎಂಬುದರ ಮಾಹಿತಿಯೊಂದಿಗೆ ಸ್ಟೇಟಸ್ ಚೆಕ್ ಮಾಡುವ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

Drought amount who get ಯಾವ ರೈತರಿಗೆ ಬರಗಲಾ ಪರಿಹಾರ ಹಣ ಜಮೆಯಾಗಲಿದೆ?

ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿರುವುದರಿಂದ  ಯಾವ ಯಾವ ರೈತರು ಎಫ್ಐಡಿ ಮಾಡಿಸಿದ್ದಾರೋ ಆ ರೈತರಿಗೆ ಬರಗಾಲ ಪರಿಹಾರ ಹಣ ಜಮೆಯಾಗಲಿದೆ.  ಹೌದು, ಬರಗಾಲ ಪರಿಹಾರ, ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲು ಎಫ್ಐಡಿ ಮಾಡಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ ಸಾಲಮನ್ನಾ ಸ್ಟೇಟಸ್ ಚೆಕ್ ಮಾಡಿ

ಎಫ್ಐಡಿ ಮಾಡಿಸದೆ ಇರುವ ರೈತರಿಗೆಬೆಳೆ ಹಾನಿ, ಬೆಳೆ ವಿಮೆ ಪರಿಹಾರ ಹಣ ಜಮೆಯಾಗುವ ಸಾಧ್ಯತೆ ತುಂಬ ಕಡಿಮೆ ಇರುತ್ತದೆ. ಈಗಲೂ ರೈತರು ಎಫ್ಐಡಿ ಮಾಡಿಸಿಕೊಳ್ಳಬಹುದು.

ರೈತರ ಎಫ್ಐಡಿ ಆಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?

ರೈತರು ತಮ್ಮ ಹೆಸರಿಗೆ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಅಂದರೆ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಒಂದು ವೇಳ ನಿಮ್ಮ ಹೆಸರಿಗೆ ಎಫ್ಐಡಿ ಆಗದೆ ಇದ್ದರೆ ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ನಿಮ್ಮ ಆಧಾರ್ ಕಾರ್ಡ್. ಜಮೀನಿನ ದಾಖಲೆಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ದಾಖಲೆಗಳನ್ನು ಸಲ್ಲಿಸಿ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬಹುದು.

ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ? ಇಲ್ಲೇ ಚೆಕ್ ಮಾಡಿ

ನಿಮಗೆ ಬರಗಲಾ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಇಯರ್ ನಲ್ಲಿ 2023-24  ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ 12 ಅಂಕಿಗಳ ಆಧಾರ್ ಸಂಖ್ಯೆ ನಮೂದಿಸಬೇಕು.  ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು.ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.

Leave a Comment