ರೈತರಿಗೆ ಭರ್ಜರಿ ಗುಡ್ ನ್ಯೂಸ್: ರೈತರ ಖಾತೆಗೆ ಬರ ಪರಿಹಾರ ಜಮೆ

Written by Ramlinganna

Published on:

Drought compensation amount deposit  ಬೆಳೆ ವಿಮೆ ಪರಿಹಾರಕ್ಕೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗೊಳೊಂದಿಗೆ ಈಗಾಗಲೇ ಸಭೆ ನಡೆಸಲಾಗಿದ್ದು, ಅತೀ ಶೀಘ್ರದಲ್ಲಿ ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಹೌದು, ಈ ಕುರಿತು ಮಂಗಳವಾರ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕೋಡಾಲು ಹಾಗೂ ರಾಜಾಪುರ ಗ್ರಾಮಗಳ ವ್ಯಾಪ್ತಿಯ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿ ಮಾತನಾಡಿದ ಅವರು, ಫ್ರಟ್ಸ್ ಐಡಿಯಲ್ಲಿ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನಿನನ್ನು ನೋಂದಣಿ ಮಾಡಿಸಬೇಕು. ಇದರಿಂದ ಬರ ಪರಿಹಾರಕ್ಕೆ ಅನುಕೂಲವಾಗಲಿದೆಎಂದು ರೈತರಿಗೆ ಮನವಿ ಮಾಡಿದರು.

ಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ತಾವು ದೆಹಲಿಗೆ ತೆರಳಿ, ಕೇಂದ್ರದ ಕೃಷಿ ಸಚಿವರ ಜತೆ ಸಭೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ತಿಂಗಳ ಅಂತ್ಯದಲ್ಲಿಕೇಂದ್ರ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಎನ್. ಚೆಲವನಾರಾಯಣ ಸ್ವಾಮಿ ತಿಳಿಸಿದರು.

ಇದನ್ನೂ ಓದಿ :  ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಿ

ಕೇಂದ್ರದಿಂದ ಬರ ಪರಿಹಾರ ಬಂದ ತಕ್ಷಣ, ಸಣ್ಣ ಮತ್ತು ಅತೀ ಸಣ್ಣ ರೈತರ ಭೂಮಿಯನ್ನು ಇಂತಿಷ್ಟು ಹಾನಿ ಎಂದು ಪರಿಗಣಿಸಿ, ಫ್ರೂಟ್ಸ್ ತಂತ್ರಾಂಶದ ಮೂಲಕ ನೇರವಾಗಿ ರೈತರ ಖಾತೆಗೆ ಬರ ಪರಿಹಾರವನ್ನು ನೀಡಲಾಗುತ್ತದೆ ಎಂದರು.

Drought compensation amount deposit  ಫ್ರೂಟ್ಸ್ ಐಡಿಗೆ ಕೂಡಲೇ ನೋಂದಣಿ ಮಾಡಿಸಿ ಬರ ಪರಿಹಾರ ಪಡೆಯಿರಿ

ರೈತರು ಕೂಡಲೇ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಫ್ರೂಟ್ಸ್ ಐಡಿಗೆ ನೋಂದಣಿ ಮಾಡಿಸಿಕೊಳ್ಳಲು ಕೋರಲಾಗುತ್ತಿದೆ. ಆಧಾರ್ ಕಾರ್ಡ್, ಜಮೀನಿನ ದಾಖಲೆಗಳು, ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಸಲ್ಲಿಸಿ ಫ್ರೂಟ್ಸ್ ತಂತ್ರಾಂಶಕ್ಕೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

ಏನಿದು ಫ್ರೂಟ್ಸ್ ತಂತ್ರಾಂಶ?

ರೈತರಿಗೆ ಕೃಷಿ ಸಾಲ ವಿತರಣೆ ಹಾಗೂ ಇನ್ನಿತರ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ರೂಪಿಸಲಾದ ಏಕೀಕೃತ ತಂತ್ರಾಂಶ ವ್ಯವಸ್ಥೆಯೇ ಫ್ರೂಟ್ಸ್ (ರೈತ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ) ಇದರಿಂದಾಗಿ ಒಂದೇ ಪೋರ್ಟಲ್ ವೇದಿಕೆಯಲ್ಲಿ ರೈತರ ಭೂಮಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳು ಹಣಕಾಸು ಸಂಸ್ಥೆಗಳು, ಸಂಬಂಧಿಸಿದ ಇಲಾಖೆಗಳಿಗೆ ಕ್ಷಣಾರ್ಧದಲ್ಲಿ ದೊರೆಯಲಿದೆ. ಇದರಿಂದಾಗಿ ರೈತರಿಗೆ ಸಾಲ, ಕೃಷಿ ಸಬ್ಸಿಡಿ ಹಾಗೂ ಸರ್ಕಾರದ ಇನ್ನಿತರ ಸೌಲಭ್ಯ ಒದಗಿಸಲು ಅನುಕೂಲವಾಗಲಿದೆ.

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದೆಯೇ?

ರೈತರು ಮನೆಯಲ್ಲಿಯೇ ಕುಳತು ತಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಹನ್ನೆರಡು ಅಂಕಿಗಳ ಆಧಾರ್ ಕಾರ್ಡ್ ನ್ನು ನಮೂದಿಸಬೇಕು. ನಂತರ ಸರ್ಚ್ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ನಿಮ್ಮ ಹೆಸರು, ಪಿಎಂಕೆಐಡಿ ಹಾಗೂ ಎಫ್ಐಡಿ ಸಂಖ್ಯೆ ಕಾಣಿಸುತ್ತದೆ. ಅದೇ ನಿಮ್ಮ ಎಫ್ಐಡಿ.

ಒಂದು ವೇಳೆ ನಿಮ್ಮ ಎಫ್ಐಡಿ ಇಲ್ಲದಿದ್ದರೆ ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಕೇಳಲಾದ ದಾಖಲೆಗಳನ್ನು ಸಲ್ಲಿಸಿ ಫ್ರೂಟ್ಸ್ ಐಡಿಯನ್ನು ಮಾಡಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಜನಜಾಗರಣ ವರದಿಗಾರ 9731491393 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment