ನಿಮ್ಮ ಫ್ರೂಟ್ಸ್ ಐಡಿ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

Written by Ramlinganna

Updated on:

Drought compensation is deposited : ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಬೆಳೆಗಳು ದಾಖಲಾದರೆ ಮಾತ್ರ ಬರ ಪರಿಹಾರ ಹಣ ಜಮೆಯಾಗುತ್ತದೆ. ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ ಇದೆಯೋ ಇಲ್ಲವೋ  ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ-ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ ರೈತರು ತಮ್ಮ ಜಮೀನಿನ ನಿಖರ ವಿಸ್ತೀರ್ಣ ಹಾಗೂ ಬೆಳೆಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್ ಪಹಣಿ ಜೋಡಣೆ ಮಾಡಿಸಿಕೊಳೇ್ಳುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾಪ್ರಭು ರೈತರಲ್ಲಿ ಮನವಿ ಮಾಡಿದ್ದಾರೆ.

ಆಯಾ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸರ್ಕಾರ ಈಗಾಗಲೇ ಬರ ಪೀಡಿತ ಪ್ರದೇಶವೆಂದು ಘೋಷಿಸಿದೆ. ಜಿಲ್ಲೆಯಲ್ಲಿ ಒಟ್ಟು 6,10,353 ಕೃಷಿ ಯೋಗ್ಯ ತಾಕುಗಳಿದ್ದು (ಸರ್ವೆ ನಂಬರ್/ ಪೋಡುಗಳು) ಇವುಗಳಲ್ಲಿ ಈಗಾಗಲೇ  4,04,845 ತಾಕುಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿರುತ್ತದೆ. ಇನ್ನೂ 2,05,508 ತಾಕುಗಳ ಜೋಡಣೆ ಕಾರ್ಯ ಬಾಕಿ ಉಳಿದಿರುತ್ತದೆ. ಜಿಲ್ಲೆಯಲ್ಲಿ ಒಟ್ಟು3,07,160 ರೈತರು 4,04,845 ಸರ್ವೆ ನಂಬರ್ ಗಳನ್ನು ಫ್ರೂಟ್ಸ್ ತಂತ್ರಾಂಶದಡಿ ಜೋಡಣೆ ಮಾಡಿಸಿ ವಿಶಿಷ್ಟ ಗುರುತಿನ ಸಂಖ್ಯೆ (ಎಫ್.ಐಡಿ) ಪಡೆದಿದ್ದಾರೆ. ಉಳಿದಂತೆ 2.05,508 ತಾಕುಗಳನ್ನು (ಸರ್ವೆ ನಂಬರ್ / ಪೋಡುಗಳು )ಜೋಡಣೆ ಮಾಡಲುಬಾಕಿ ಇದ್ದು, ರೈತರು ಶೀಘ್ರ ಜೋಡಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಈ ಪಟ್ಟಿಯಲ್ಲಿದ್ದವರಿಗೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಹಣ ಜಮೆ: ನಿಮ್ಮ ಹೆಸರು ಇಲ್ಲೆ ಚೆಕ್ ಮಾಡಿ

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ  ಪರಿಹಾರವನ್ನು ನಮೂದಿಸಿ ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು.ಸರ್ಕಾರವು 2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರೂಟ್ಸ್ ನಲ್ಲಿ ನೋಂದಣಿಯಾಗಿರುವ ಬೆಳೆ ಮತ್ತು ಪ್ರೂಟ್ಸ್  ನಲ್ಲಿ ನೋಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ ಈಗಾಗಲೇ ಫ್ರೂಟ್ಸ್ ನಲ್ಲಿ ನೋಂದಣಿಯಾಗಿರುವ 3,07,160 ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟು ಹೋಗದಂತೆ ಎಲ್ಲಾ ಸರ್ವೆ ನಂಬರ್ ಗಳನ್ನು ನೋಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಇದುವರೆಗೂ ಫ್ರೂಟ್ಸ್ನಲ್ಲಿನೋಂದಣಿ ಆಗದೆ ಇರುವ ರೈತರು ಆಧಾರ್ ಕಾರ್ಡ್, ಪಹಣಿ,  ಜಾತಿ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರೂಟ್ಸ್ ನಲ್ಲಿದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.

ಅತೀವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸಿ ಎಫ್ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ 15 ದಿನಗಳ ಕಾಲ ಫ್ರೂಟ್ಸ್ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೇ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ತಿಳಿಸಿದ್ದಾರೆ.

Drought compensation is deposited ಫ್ರೂಟ್ಸ್ ಐಡಿ ಆಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?

ರೈತರು ತಮ್ಮ ಫ್ರೂಟ್ಸ್ ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು,  ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಅಲ್ಲಿ ನಿಮ್ಮ ಹೆಸರು ಹಾಗೂ ಫ್ರೂಟ್ಸ್ ಐಡಿ ಕಾಣಿಸುತ್ತದೆ. ಇದರೊಂದಿಗೆ ಪಿಎಂ ಕಿಸಾನ್ ಐಡಿ ಸಹ ಕಾಣಿಸುತ್ತದೆ.

Leave a Comment