Drought relief amount deposited ಬರ ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಈಗ ರೈತರು ತಮಗೆ ಬರ ಪರಿಹಾರ ಹಣ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ 216 ಕ್ಕೂ ಹೆಚ್ಚು ತಾಲೂಕುಗಳನ್ನು ರಾಜ್ಯ ಸರ್ಕಾರವು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿದೆ. ಬರ ಪರಿಹಾರ ರೈತರಿಗೆ ಪಾರದರ್ಶಕವಾಗಿ ತಲುಪಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.
Drought relief amount deposited ಯಾರಿಗೆ ಬರಗಾಲ ಪರಿಹಾರ ಜಮೆಯಾಗಲಿದೆ?
ಪ್ರಸಕ್ತ ಸಾಲಿನ ಬರಗಾಲ ಪರಿಹಾರ ಹಣ ಯಾರಿಗೆ ಜಮೆಯಾಗಲಿದೆ ಎಂಬುದನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/GetDetailsByAadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ಐಡಿ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದೆಯೋ ಇಲ್ಲವೋ ಎಂಬುದನ್ನುಚೆಕ್ ಮಾಡಬಹುದು. ಹೌದು, ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಮಾತ್ರ ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗಲಿದೆ. ಇಲ್ಲದಿದ್ದರೆ ಬರಗಾಲ ಪರಿಹಾರ ಹಣ ಜಮೆಯಾಗುವುದಿಲ್ಲ.
ನಿಮ್ಮ ಆಧಾರ್ ಕಾರ್ಡ್ ನಮೂದಿಸಿದ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ನಿಮ್ಮ ಹೆಸರು ಹಾಗೂ ಫ್ರೂಟ್ಸ್ ಐಡಿ ಕಾಣಿಸುತ್ತದೆ. ಫ್ರೂಟ್ಸ್ ಐಡಿ ಆಗಿರದಿದ್ದರೆ ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ದಾಖಲೆಗಳನ್ನು ಸಲ್ಲಿಸಿ ಫ್ರೂಟ್ಸ್ ಐಡಿ ಮಾಡಿಕೊಳ್ಳಬೇಕು.
ನಿಮ್ಮ ಜಮೀನಿನ ಪಹಣಿಗಳು (ಆರ್.ಟಿಸಿ) ಎಲ್ಲಾ ಸರ್ವೆ ನಂಬರ್ ದಾಖಲೆಗಳು, ಬ್ಯಾಂಕ್ ಪಾಸ್ ಬುಕ್, ನಿಮ್ಮ ಆಧಾರ್ ಕಾರ್ಡ್, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಫೋಟೋ ಸಲ್ಲಿಸಿ ಪ್ರೂಟ್ಸ್ ಐಡಿಯನ್ನು ಮಾಡಿಕೊಳ್ಳಬೇಕು.
ಫ್ರೂಟ್ಸ್ ಐಢಿ ಪಡೆಯಲು ಕೃಷಿ ಇಲಾಖೆ ಸೂಚನೆ
ರೈತರು ಕಡ್ಡಾಯವಾಗಿ ತಂತ್ರಾಂಶದಲ್ಲಿ ಕೃಷಿ ಜಮೀನಿನ ನೋಂದಣಿ ಮಾಡಿಸಿ ರೈತರ ಗುರುತಿನ ಚೀಟಿ ಪಡೆಯಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶ ಯಾದವ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ ಪಿಎಂ ಕಿಸಾನ್ ಜಮೆ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ನೋಂದಣಿಗಾಗಿ ತಮ್ಮ ಜಮೀನಿನ ಪಹಣಿ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಮೊಬೈಲ್ ನಂಬರ್ ಹಾಗೂ ಜಾತಿ ಪ್ರಮಾಣ ಪತ್ರ ಮೊಬೈಲ್ ನಂಬರ್ ನ್ನು ಕಡ್ಡಾಯವಾಗಿ ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು.
ತಮಗೆ ಸಂಬಂಧಿಸಿದ ಎಲ್ಲಾ ಜಮೀನುಗಳ ಸರ್ವೆ ನಂಬರ್ ಗಳು ಜೋಡಣೆಯಾಗಿದೆಯೋ ಇಲ್ಲವೋ ಎಂಬುದರ ಕುರಿತು ಸ್ಥಳದಲ್ಲಿಯೇ ಪರಿಶೀಲಿಸಿಕೊಳ್ಳಬೇಕು. ಜಂಟಿ ಖಾತೆದಾರರು ಎಲ್ಲರೂ ಪ್ರತ್ಯೇಕವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಮಾಡಿಸದೆ ಇದ್ದಲ್ಲಿ ನಿಮಗೆ ಸರ್ಕಾರದ ನೀಡಿಂದ ನೀಡಲಾಗುವ ಬೆಳೆ ವಿಮೆ, ಬರ ಪರಿಹಾರ ಸೇರಿದಂತೆ ಯಾವುದೇ ಯೋಜನೆಗಳು ರೈತರಿಗೆ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.
ಫ್ರೂಟ್ಸ್ ಐಡಿ ಇಲ್ಲದಿದ್ದರೆ ರೈತರೇನು ಮಾಡಬೇಕು?
ರೈತರ ಹೆಸರಿಗೆ ಪ್ರೂಟ್ಸ್ ಐಡಿ ಒಂದು ಇನ್ನೂ ಆಗಿರದಿದ್ದರೆ ರೈತರು ಆನ್ಲೈನ್ ಮೂಲಕ ಅಂದರೆ ಮೊಬೈಲ್ ಮೂಲಕವೂ ಫ್ರೂಟ್ಸ್ ಐಡಿಗೆ ಅರ್ಜಿಸಲ್ಲಿಸಬಹುದು. ಹೌದು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆಸಕ್ತಿಯಿರುವ ರೈತರು ಈ
https://fruits.karnataka.gov.in/OnlineUserLogin.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು ಅಲ್ಲಿ citizen Registration ಮೇಲೆ ಕ್ಲಿಕ್ ಮಾಡಬೇಕರು. ನಂತರ ನಿಮ್ಮ ಹೆಸರು, ಆಧಾರ್ ಕಾರ್ಡ್ ನಂಬರ್ ನಮೂದಿಸಿ ಐ ಅಗ್ರಿ ಬಾಕ್ಸ್ ಆಯ್ಕೆ ಮಾಡಿಕೊಂಡು ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು. ನಂತರಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಫ್ರೂಟ್ಸ್ ಐಡಿಗೆ ಅರ್ಜಿ ಸಲ್ಲಿಸಬಹುದು.