ಈ ಅರ್ಹ ರೈತರಿಗೆ ಬರಗಾಲ ಪರಿಹಾರ ಜಮೆ

Written by Ramlinganna

Updated on:

Drought relief farmer’s eligibility : ಬರಗಾಲ ಪರಿಹಾರ ಹಣ ಜಮೆಯಾಗಬೇಕಾದರೆ ಈ ಕೆಳಗಿನ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ಹಣ ಜಮೆಯಾಗುವುದು. ಇಲ್ಲದಿದ್ದರೆ ಬರ ಪರಿಹಾರದಿಂದ ವಂಚಿತರಾಗುವ ಸಾಧ್ಯತೆಯಿದೆ.

ಹೌದು, ಬರಗಾಲ ಪರಿಹಾರ ರೈತರ ಖಾತೆಗೆ ಜಮೆಯಾಗಬೇಕಾದರೆ ಫ್ರೂಟ್ಸ್ ಐಡಿ ಹೊಂದಿರಲೇಕು. ಕೇವಲ ಬರ ಪರಿಹಾರ ಅಷ್ಟೇ ಅಲ್ಲ, ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಹಾಗೂ ಸರ್ಕಾರದ ವತಿಯಿಂದ ರೈತರು ಪಡೆಯುವ ಪ್ರತಿಯೊಂದು ಸೌಲಭ್ಯಕ್ಕೆ ಫ್ರೂಟ್ಸ್ ಐಡಿ ಹೊಂದಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ ಐಡಿ ಇಲ್ಲದಿದ್ದರೆ ನಿಮಗೆ ಬರ ಪರಿಹಾರ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆಯಿದೆ.

ಬರ ಪರಿಹಾರಕ್ಕೆ ಪ್ರೂಟ್ಸ್ ಐಡಿ ಇದೆಯೇ? ಇಲ್ಲೇ ಚೆಕ್ ಮಾಡಿ

ಬರ ಪರಿಹಾರ ಹಣ ಜಮೆಯಾಗಲು ನಿಮ್ಮ ಹೆಸರಿಗೆ ಪ್ರೂಟ್ಸ್ ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ಐಡಿ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ನಿಮ್ಮ ಹೆಸರು ಹಾಗೂ ಫ್ರೂಟ್ಸ್ ಐಡಿ ಕಾಣಿಸುತ್ತದೆ. ಇಲ್ಲಿ ನಿಮ್ಮ ಹೆಸರು ಮ

ಇರಿದಿದ್ದರೆ ನೀವು ಅರ್ಹತೆ ಹೊಂದಿಲ್ಲವೆಂದರ್ಥ. ನಿಮ್ಮ ಬೆಳೆ ಹಾಳಾಗಿದ್ದರೂ ಫ್ರೂಟ್ಸ್ ಐಡಿ ಇರದಿದ್ದರೆ ನಿಮಗೆ ಯಾವುದೇ ಕಾರಣಕ್ಕೂ ಬರಗಾಲ ಪರಿಹಾರ ಹಣ ಜಮೆಯಾಗುವುದಿಲ್ಲ.

Drought relief farmer’s eligibility ಯಾವ  ಬೆಳೆಗೆ ಎಷ್ಟು ಪರಿಹಾರ ಹಣ ಜಮೆಯಾಗಲಿದೆ?

ಕೇಂದ್ರ ಸರ್ಕಾರ ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗೆ 8500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಬಹುವಾರ್ಷಿಕ ಬೆಳೆಗೆ 22500 ಪರಿಹಾರ ನಿಗದಿ ಮಾಡಿದೆ. ಮಾರ್ಗಸೂಚಿ ಅನ್ವಯ ಎರಡು ಹೆಕ್ಟೇರ್ ವರೆಗೆ ಮಾತ್ರ ಬೆಳೆ ಪರಿಹಾರ ನೀಡಲಾಗುತ್ತದೆ.

ಅತೀ ಶೀಘ್ರದಲ್ಲಿ ಬರ ಪರಿಹಾರ ರೈತರ ಖಾತೆಗೆ ಜಮೆ

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ (ಎನ್.ಡಿ.ಆರ್.ಎಫ್)4663 ಕೋಟಿ ಬೆಳೆ ನಷ್ಟ ಪರಿಹಾರ ನೀಡುವಂತೆ ಕೇಂದ್ರಕ್ಕೆಮನವಿ ಸಲ್ಲಿಸಲಾಗಿದೆ ಎಂದರು.

ಇದನ್ನೂ ಓದಿ ಈ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರ ಬಿಡುಗಡೆ- ಸ್ಟೇಟಸ್ ಚೆಕ್ ಮಾಡಿ

ಕೇಂದ್ರ ಸರ್ಕಾರವು ಬರ ಪರಿಹಾರ ಹಣ ಇನ್ನೂ ಬಿಡುಗಡೆ ಮಾಡಿಲ್ಲ. ಹಾಗಾಗಿ ರಾಜ್ಯ ಸರ್ಕಾರವು ರೈತರಿಗೆ ತಲಾ 2 ಸಾವಿರ ರೂಪಾಯಿಯಂತೆ ಪರಿಹಾರ ಹಣ ಜಮೆ ಮಾಡಲು ನಿರ್ಧರಿಸಿದೆ. ಹೌದು, ಈ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸುದ್ದಿಗಾರರೊಂದಿಗೆ ಮಾತನಾಡಿ, ಅತೀ ಶೀಘ್ರದಲ್ಲಿ ಬರಗಾಲ ಹೊಂದಿದ ತಾಲೂಕುಗಳ ರೈತರ ಖಾತೆಗೆ ಬರ ಪರಿಹಾರ ಹಣ ಜಮೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಫ್ರೂಟ್ಸ್ ಐಡಿ ಆಗಿಲ್ಲವೇ? ಇಲ್ಲಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಿ

ಯಾವ ರೈತರು ಇನ್ನೂ ಪ್ರೂಟ್ಸ್ ಐಡಿ ಮಾಡಿಸಿಕೊಂಡಿಲ್ಲವೋ ಕೂಡಲೇ ತಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಸಿ.ಎಸ್.ಸಿ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ಸ್ ಐಡಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿಯೂ ಫ್ರೂಟ್ಸ್ ಐಡಿ ಮಾಡಿಸಬಹುದು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಜಮೀನಿನ ದಾಖಲೆಗಳು ಹಾಗೂ ನಿಮ್ಮ ಫೋಟೋ ತೆಗೆದುಕೊಂಡು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.

Leave a Comment