ಇಂದಿನಿಂದ ಜಿಲ್ಲೆಗಳಲ್ಲಿ ಭಾರಿ ಮಳೆ- ರೆಡ್ ಅಲರ್ಟ್ ಎಚ್ಚರಿಕೆ

Written by Ramlinganna

Published on:

Eight days heavy rain : ಇಂದಿನಿಂದ ಜೂನ್ 15 ರವರೆಗೆ ಎಂಟು ದಿನಗಳ ಕಾಲ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದಿನಿಂದ ಜೂನ್ 15 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಜೂನ್ 15 ರವರೆಗೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಲಿರುವುದರಿಂದ ಈ ಭಾಗಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಈ ಭಾಗದಲ್ಲಿ ಮಳೆ ಅಷ್ಟೇ ಅಲ್ಲ ಮಳೆಯೊಂದಿಗೆ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

Eight days heavy rain ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?

ಕರಾವಳಿ, ಮಲೆನಾಡು ಹಾಗೂ ಬೆಳಗಾವಿ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

ಜೂನ್ 8 ರಂದು ಮಳೆಯ ಅಬ್ಬರ ಹೆಚ್ಚಾಗಲಿರುವುದರಿಂದ ಕರಾವಳಿಯ ಉಡುಪಿ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ

ಈ ಭಾಗಗಳಲ್ಲಿ 204.5 ಮಿ.ಮೀಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಜೂನ್ 9 ರಂದು 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ

ಜೂನ್ 9 ರಂದು ಮಳೆಯ ಅಬ್ಬರ ಹೆಚ್ಚಾಗಲಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ಹೆಚ್ಚು ಮಳೆಯಾಗಲಿದ್ದು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಜೂನ್ 10 ರಂದು ಉತ್ತರ ಕರ್ನಾಟಕದ ಜಿಲ್ಲೆಯಗಳಲ್ಲಿಯೂ ಮಳೆಯಾಗಲಿದೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ತುಮಕೂರು  ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ಬೈಕ್ ಖರೀದಿಗೆ ಶೇ. 60 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment