Ekyc is mandatory for beneficiary ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಜಮೆಯಾಗಲು ಇಕೆವೈಸಿ ಕಡ್ಡಾಯವಾಗಿದೆ. ಇಕೆವೈಸಿ ಆದರೆ ಮಾತ್ರ ಹಣ ಜಮೆಯಾಗಲಿದೆ. ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಇದೇನಪಾ, ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಏಕೆ ಕಡ್ಡಾಯಗೊಳಿಸಲಾಗಿದೆ? ಈಗಾಗಲೇ ಇಕೆವೈಸಿ ಮಾಡಿಸದಿದ್ದರೂ ನಮಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿದೆಯಲ್ಲಾ ಎಂಬ ಭಾವನೆಯಲ್ಲಿದ್ದರೆ ದಯಮಾಡಿ ಈಗಲೇ ಇಕೆವೈಸಿ ಮಾಡಿಸಿಕೊಳ್ಳಿ. ಒಂದು ವೇಳೆ ಇಕೆವೈಸಿ ಮಾಡಿಸಿದ್ದರೂ ಇಕೆವೈಸಿ ಪ್ರಕ್ರಿಯೆ ಸರಿಯಾಗಿದೆ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ರೈತರು ತಮ್ಮ ಇಕೆವೈಸಿ ಪ್ರಕ್ರಿಯೆ ಸಕ್ರೀಯವಾಗಿ ಆಗಿದೆಯೋ ಇಲ್ಲವೋ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಚೆಕ್ ಮಾಡುವ ವಿಧಾನ.
Ekyc is mandatory for beneficiary ಇಕೆವೈಸಿ ಪ್ರಕ್ರಿಯೆ ಸಕ್ಸೆಸಫುಲಿ ಆಗಿದೆಯೋ ಇಲ್ಲವೋ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಮನೆಯಲ್ಲಿಯೇ ಕುಳಿತು ಇಕೆವೈಸಿ ಆಗಿರುವುದನ್ನು ಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿಅಲ್ಲಿ ಆದಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿದಾಗ ನೀವು ಇಕೆವೈಸಿ ಮಾಡಿಸಿದ್ದರೆ ಇಕೆವೈಸಿ ಇಸ್ ಆಲ್ ರಡಿ ಡನ್ ಎಂಬ ಸಂದೇಶ ಕಾಣಿಸುತ್ತದೆ. ಇಕೆವೈಸಿ ಮಾಡಿಸಿಲ್ಲವಾದರೆ ನಿಮ್ಮ ಮೊಬೈಲ್ ನಂಬರ್ ಹಾಕಿದ ನಂತರ ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು.
ಏನಿದು ಪಿಎಂ ಕಿಸಾನ್ ಯೋಜನೆ?
ರೈತರ ಆರ್ಥಿಕ ಅಭಿವೃದ್ಧಿಗಾಗಿ ಪಿಎಂ ಕಿಸಾನ್ ಯೋಜನೆಯನ್ನು ಆರಂಭಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದ 6 ಸಾವಿರ ರೂಪಾಯಿ ಹಾಗೂ ರಾಜ್ಯ ಸರ್ಕಾರದ 4 ಸಾವಿರ ರೂಪಾಯಿ ಆರ್ಥಿಕ ನೆರವು ಪಡೆಯಲು ಇಕೆವೈಸಿ ಮಾಡಿಸುವುದು ಅತ್ಯಂತ ಅವಶ್ಯಕವಾಗಿದೆ.
ಇದನ್ನೂ ಓದಿ : ನೀವು ನಿಂತಿರುವ ಜಮೀನಿನ ಮಾಲಿಕರು ಯಾರಿದ್ದಾರೆ? ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಮುಂದಿನ ದಿನಗಳಲ್ಲಿ ಆರ್ಥಿಕ ನೆರವು ಪಡೆಯಲು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಬೇಕಾದರೆ ಇಕೆವೈಸಿಯನ್ನು ಮಾಡಿಸುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.
ಇಕೆವೈಸಿಯನ್ನು ಎಲ್ಲಿ ಮಾಡಿಸಬೇಕು ಹಾಗೂ ಹೇಗೆ ಮಾಡಿಸಬೇಕು?
ಅರ್ಹ ರೈತ ಫಲಾನುಭವಿ ತಮ್ಮ ಆಧಾರ್ಕಾರ್ಡ್ ಹಾಗೂ ಆಧಾರ್ ಗೆ ಜೋಡಣೆಯಾಗಿರುವ ಮೊಬೈಲ್ ನಂಬರ್ ಹೊಂದಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಪೋಸ್ ಆಫೀಸ್, ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಇಕೆವೈಸಿ ಮಾಡಿಸಬಹುದು.
ಇಕವೆವೈಸಿಯನ್ನು ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ನಲ್ಲಿಯೂ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು. ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ ಸೇವಾ ಕೇಂದ್ರ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಹಾಗೂ ಓಟಿಪಿ ಆಧಾರಿತ ಇಕೆವೈಸಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಪ್ಡೇಟ್ ಮಾಡಿಕೊಳ್ಳಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು.
ಪಿಎಂ ಕಿಸಾನ್ ಯೋಜನೆಯ ರಾಜ್ಯ ಸರ್ಕಾರದ ಹೆಚ್ಚುವರಿ ಹಣವನ್ನುಈಗ ಬಂದಿರುವ ಕಾಂಗ್ರೆಸ್ ಸರ್ಕಾರವು ಜಾರಿಗೆ ತರುತ್ತೋ ಅಥವಾ ಇಲ್ಲವೋ ಎಂಬುದರ ಕುರಿತು ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ. ಇನ್ನೂ ಕೆಲವು ದಿನಗಳಲ್ಲಿ ರಾಜ್ಯ ಸರ್ಕಾರವು ಈ ಕುರಿತು ಮಾಹಿತಿ ನೀಡಲಿದೆ.