ಈ ಮಹಿಳೆಯರ ಖಾತೆಗೆ ಇಂದು ಗೃಹಲಕ್ಷ್ಮೀ ಯೋಜನೆಯ ಹಣ ಜಮೆ

Written by Ramlinganna

Published on:

Gruhalakshmi scheme money ಯೋಜನೆಗೆ ನೋಂದಣಿ ಮಾಡಿಸಿದ ಎಲ್ಲಾ ಮಹಿಳೆಯರಿಗೆ ಜಮೆಯಾಗಿದೆ. ಹೌದು, ಇದೇ ತಿಂಗಳು ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. ಹಾಗಾದರೆ ಯಾವ ಯಾವ ಮಹಿಳೆಯರಿಗೆ ಹಣ ಜಮೆಯಾಗಿದೆ? ಯಾವ ಮಹಿಳೆಯರಿಗೆ ಹಣ ಜಮೆಯಾಗಿಲ್ಲ ಎಂಬುದನ್ನು ಮಹಿಳೆಯರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

 Gruhalakshmi scheme ಯೋಜನೆಯ ಹಣ ಜಮೆಯಾಗಲು ಇರಬೇಕಾದ ಅರ್ಹತೆಗಳು

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಈ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಮಾತ್ರ ಹಣ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು.

ಇದನ್ನೂ ಓದಿ : ಅನ್ನಭಾಗ್ಯ ಹಣ ಬಿಡುಗಡೆ: ನಿಮಗೆಷ್ಟು ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಿರಬೇಕು. ಅರ್ಜಿದಾರರು ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕುಂಡಬಂದಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.

Gruhalakshmi scheme money ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ  Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು.  ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Gruhalakshmi ಯೋಜನೆಯ ಅನರ್ಹತೆಗಳು

ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.

ಅಂತ್ಯೋದಯ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹಳಾಗಿರುತ್ತಾಳೆ.  ರೇಶನ್ ಕಾರ್ಡ್ ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನೇ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ.

Gruhalakshmi scheme ಯೋಜನೆ ಕುರಿತಂತೆ ಯಾರಿಗೆ ಸಂಪರ್ಕಿಸಬೇಕು?

ಗೃಹಲಕ್ಷ್ಮೀ ಯೋಜನೆ ಕುರಿತಂತೆ ಹೆಚ್ಚಿನ ಮಾಹಿತಿ ಬೇಕಾದರೆ 080 22279954, 8792662814 ಹಾಗೂ 8792662816 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment