ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಎಲ್ಲಾಮಹಿಳೆಯರಿಗೆ ಜಮೆಯಾಗುವುದಿಲ್ಲ. ಈ ಯೋಜನೆಗೆ ಕೆಳಗಿನ ಅರ್ಹತೆಗಳಿದ್ದರೆ ಮಾತ್ರ ಹಣ ಜಮೆಯಾಗಲಿದೆ.
ಹೌದು, ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಐದು ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಕೆಲವು ನಿಯಮಗಳು ಹಾಗೂ ಷರತ್ತುಗಳಿವೆ. ಹಾಗಾದರೆ ಯಾವ ಯಾವ ಷರತ್ತುಗಳಿವೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ.
ಗೃಹಲಕ್ಷ್ಮೀ ಯೋಜನೆಯ ಅರ್ಹತೆಗಳು
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಈ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಮಾತ್ರ ಹಣ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು.
ಇದನ್ನೂ ಓದಿ : ಅನ್ನಭಾಗ್ಯ ಹಣ ಬಿಡುಗಡೆ: ನಿಮಗೆಷ್ಟು ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಿರಬೇಕು. ಅರ್ಜಿದಾರರು ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕುಂಡಬಂದಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
ಗೃಹಲಕ್ಷ್ಮೀ ಯೋಜನೆಯ ಅನರ್ಹತೆಗಳು
ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.
ಅಂತ್ಯೋದಯ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹಳಾಗಿರುತ್ತಾಳೆ. ರೇಶನ್ ಕಾರ್ಡ್ ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನೇ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ. ಅರ್ಜಿ ಸಲ್ಲಿಸುವಾಗ ರೇಶನ್ ಕಾರ್ಡ್ ನೊಂದಿಗೆ ಯಜಮಾನಿ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಮತ್ತು ಯೋಜನೆಯ ನಗದು ಸೌಲಭ್ಯ ಪಡೆಯಲು ಇಚ್ಚಿಸುವ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ ಅಗತ್ಯವಿರುತ್ತದೆ. ತಡೆಹಿಡಿಯಲಾದ ಅಥವಾ ರದ್ದು ಗೊಳಿಸಲಾದ ಪಡಿತರ ಚೀಟಿಗಳನ್ನು ಯೋಜನೆಗೆ ಪರಿಗಣಿಸಲಾಗುವುದಿಲ್ಲ.
ಗೃಹಲಕ್ಷ್ಮೀ ಯೋಜನೆ ಕುರಿತಂತೆ ಯಾರಿಗೆ ಸಂಪರ್ಕಿಸಬೇಕು?
ಗೃಹಲಕ್ಷ್ಮೀ ಯೋಜನೆ ಕುರಿತಂತೆ ಹೆಚ್ಚಿನ ಮಾಹಿತಿ ಬೇಕಾದರೆ 080 22279954, 8792662814 ಹಾಗೂ 8792662816 ಗೆ ಸಂಪರ್ಕಿಸಲು ಕೋರಲಾಗಿದೆ.
ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿದವರಿಗೆ ಮೊದಲ ಕಂತಿನ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಡಿಬಿಟಿ ಆ್ಯಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಕಂಡಿಶನ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ನಮೂದಿಸಿದ ನಂತರ ಪಾಸ್ವರ್ಡ್ ನೀವು ಕ್ರಿಯೇಟ್ ಮಾಡಿಕೊಳ್ಳಬೇಕು. ಆಮೇಲೆ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ ಗೃಹಲಕ್ಷ್ಮೀ ಯೋಜನೆಯ ಮೊದಲನೇ ಕಂತಿನ ಹಣ ಜಮೆಯಾಗಿರುವುದನ್ನು ಚೆಕ್ ಮಾಡಬಹುದು.