ಮೊಬೈಲ್ ನಂಬರ್ ಹಾಕಿ ನಿಮಗೆಷ್ಟು ಹಣ ಜಮೆ ಚೆಕ್ ಮಾಡಿ

Written by Ramlinganna

Updated on:

check govt scheme status ರೈತರು ಕೇವಲ ಮೊಬೈಲ್ ನಂಬರ್ ನಮೂದಿಸಿ ಸರ್ಕಾರದ ಯಾವ ಯೋಜನೆಯಿಂದ ಎಷ್ಟು ಹಣ ಜಮಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

ಹೌದು, ಈಗ ತಂತ್ರತ್ರಾನ ಬೆಳೆದಿದ್ದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರಿಗೆ ಎಲ್ಲವೂ ಕುಳಿತಲ್ಲಿಯೇ ಮಾಹಿತಿ ಸಿಗಲೆಂದು ಈ ವ್ಯವಸ್ಥೆಯನ್ನು ಮಾಡಿದೆ. ಇದೇನಮಾ ಮೊಬೈಲ್ ನಂಬರ್ ಹಾಕಿದರೆ, ಸರ್ಕಾರದ ಯೋಜನೆಗಳಿಂದ ಸಿಗುವ ಸೌಲಭ್ಯಗಳ ಮಾಹಿತಿ ಪಡೆಯಬಹುದಾ, ಮೊಬೈಲ್ ನಂಬರ್ ಹಾಕಿ ಯಾವ ಯಾವ ಯೋಜನೆಗಳ ಮಾಹಿತಿ ಪಡೆಯಬಹುದು? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುತ್ತಿದ್ದರೆ, ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ರೈತರು ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲಿ ಯಾರ ಸಹಾಯವೂ ಇಲ್ಲದೆ, ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್, ಬೆಳೆ ವಿಮೆ ಹಾಗೂ ಬೆಳೆಹಾನಿ ಪರಿಹಾರ ಸ್ಟೇಟಸ್ ನ್ನು ಚೆಕ್ ಮಾಡಬಹುದು.

check govt scheme status ಮೊಬೈಲ್ ನಂಬರ್ ಹಾಕಿ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಂಡ ರೈತ ಫಲಾನುಭವಿಗಳು ತಮ್ಮ ಖಾತೆಗೆ ಇಲ್ಲಿಯವರೆಗೆ ಎಷ್ಟು ಕಂತುಗಳ ಜಮೆಯಾಗಿದೆ? ಯಾವ ಖಾತೆಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಹೌದು ರೈತರು, ಈ

https://pmkisan.gov.in/BeneficiaryStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು, ಎಂಟರ್ ವ್ಯಾಲ್ಯು ಕೆಳಗಡೆ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿದ ಮೇಲೆ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು, ಇಲ್ಲಿಯವರೆಗೆ ನಿಮಗೆ ಪಿಎಂ ಕಿಸಾನ್ ಯೋಜನೆಯಡಿ ಎಷ್ಟು ಕಂತುಗಳು ಜಮೆಯಾಗಿದೆ? ಯಾವ ಬ್ಯಾಂಕಿನಿಲ್ಲಿ ಜಮೆಯಾಗಿದೆ? ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

ಮೊಬೈಲ್ ನಂಬರ್ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರು ಮೊಬೈಲ್ ನಂಬರ್ ಹಾಕಿ, ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಬಹುದು. ಬೆಳೆ ವಿಮೆ ಮಾಡಿಸಿದ ನಂತರ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ, ನೀವು ಎಷ್ಟು ಬೆಳೆ ವಿಮೆ ಹಣ ಪಾವತಿಸಿದ್ದೀರಿ, ಅರ್ಜಿಯ ಸ್ಟೇಟಸ್ ಏನಿದೆ ಎಂಬುದನ್ನು ಚೆಕ್ ಮಾಡಬಹುದು.

ಬೆಳೆ ವಿಮೆ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಯಾವ ವರ್ಷದ ಸ್ಟೇಟಸ್ ನೋಡಬೇಕೆಂದುಕೊಂಡಿದ್ದೀರೋ ಆ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂಗಾರು ಬೆಳೆ ವಿಮೆಗೆ ಖಾರೀಪ್ ಹಿಂಗಾರು ಬೆಳೆ ವಿಮೆಯ ಸ್ಟೇಟಸ್ ಗೆ ರಾಬಿ ಆಯ್ಕೆ ಮಾಡಿಕೊಂಡು ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

ಆಧಾರ್ ನಂಬರ್ ಹಾಕಿ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ

ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾನಿಯಾದ ರೈತರಿಗೆ ಸರ್ಕಾರವು ಬೆಳೆ ಹಾನಿ ಪರಿಹಾರ ಹಣ ಘೋಷಿಸಿದೆ. ಬೆಳೆ ಹಾನಿಯಾದ ರೈತರು ತಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನುನೋಡುವುದಲ್ಲದೆ, ಯಾವ ಬ್ಯಾಂಕಿಗೆ ಜಮೆಯಾಗಿದೆ ಎ ಷ್ಟು ಹಣ ಜಮೆಯಾಗಿದೆ ಎಂಬುದನ್ನು ಸಹ ಚೆಕ್ ಮಾಡಬಹುದು. ಹೌದು, ರೈತರು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆಹಾನಿ ಪರಿಹಾರ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಸಂಖ್ಯೆ ಆಯ್ಕೆ ಮಾಡಿದ ನಂತರ ಕಾಲಾಮಿಟಿ ಟೈಪ್ ನಲ್ಲಿ ಫ್ಲಡ್ ಹಾಗೂ ಇಯರ್ ನಲ್ಲಿ ಯಾವ ವರ್ಷದ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ಆ ಮೇಲೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿದ ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬಹುದು.

ಇದನ್ನೂ ಓದಿ ಬೆಳೆ ಹಾನಿಯಾಗಿದೆಯೇ? ಈ ನಂಬರಿಗೆ ಕರೆ ಮಾಡಿ

Leave a Comment