ಶೇ. 50 ರಷ್ಟು ಸಬ್ಸಿಡಿಯಲ್ಲಿ ಕೃಷಿ ಯಂತ್ರೋಪಕರಣ ಪಡೆಯಲು ಇಲ್ಲಿ ಅರ್ಜಿ ಸಲ್ಲಿಸಿ

Written by Ramlinganna

Published on:

farm machinery 50 percentage subsidy : ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ಕೃಷಿ ಯಾಂತ್ರೀಕರಣ ಉಪ ಅಭಿಯಾನ ಸ್ಮಾಮ್  ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ತೋಟಗಾರಿಕೆ ಉಪ ನಿರ್ದೇಶಕ (ಜಿಪಂ) ರಾಘವೇಂದ್ರ ಅವರು ತಿಳಿಸಿದ್ದಾರೆ.

ಕೃಷಿ ಯಾಂತ್ರೀಕರಣ ಉಪ ಅಭಿಯಾನ ಸ್ಮಾಮ್ ರಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆಯಡಿ ಫಲಾನುಭವಿಗಳು ಖರೀದಿಸುವ ವಿವಿಧ ಯಂತ್ರೋಪಕರಣಗಳಿಗೆ ಸಹಾಯಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ಫಲಾನುಭವಿಗಳಿಗೆ ಶೇ. 40 ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳೆ, ಸಣ್ಣ ಮತ್ತು ಅತೀ ಸಣ್ಣ ಫಲಾನುಭವಿಗಳಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.

farm machinery 50 percentage subsidy ಯಾರಿಗೆ ಸಂಪರ್ಕಿಸಬೇಕು?

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ. ಪಂ) ಯಾದಗಿರಿ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಮೊಬೈಲ್ ನಂಬರ್ 9164570011, ಶಹಾಪೂರ ಹಿರಿಯ  ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಮೊಬೈಲ್ ನಂಬರ್ 9901919133, ಸುರಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಮೊಬೈಲ್ ನಂಬರ್ 8217748605 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 23 ರಂದು ನೇರ ಸಂದರ್ಶನ ಆಯೋಜನೆ

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ  ಕಚೇರಿಯಲ್ಲಿ ಇದೇ ಜುಲೈ 23 ರಂದು ಬೆಳಿಗ್ಗೆ  10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ Panchatantra 2.0: ನಿಮ್ಮ ಗ್ರಾಪಂ ಮಾಹಿತಿ Mobileನಲ್ಲೇ ಚೆಕ್ ಮಾಡಿ

ಕಲಬುರಗಿಯ ಪೂರ್ಣಜ್ಞಾನ ಇಂಗ್ಲೀಷ್ ಮೀಡಿಯಂ ಸ್ಕೂಲ್‌ದಲ್ಲಿ   ಪ್ರಾಂಶುಪಾಲರ ಹುದ್ದೆಗೆ ಪಿ.ಜಿ ಜೊತೆಗೆ ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 30 ರಿಂದ 45 ವರ್ಷದೊಳಗಿರಬೇಕು. ಮದರ್ ಟೀಚರ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 25 ರಿಂದ 30 ವರ್ಷದೊಳಗಿರಬೇಕು. ಕಲಬುರಗಿ ಶಹಬಜಾರ ನವೋದಯ ವಿದ್ಯಾಮಂದಿರ (ಇಂಗ್ಲೀಷ್ ಮೀಡಿಯಂ) ದಲ್ಲಿ ಸಮಾಜ ಶಿಕ್ಷಕ, ಇಂಗ್ಲೀಷ್ ಶಿಕ್ಷಕ ಹಾಗೂ ಹಿಂದಿ ಶಿಕ್ಷಕರ ಹುದ್ದೆಗಳಿಗೆ ಪದವಿ ಜೊತೆಗೆ ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 22 ರಿಂದ 35 ವರ್ಷ ದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‌ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment