ಕೃಷಿ ಹೊಂಡ ನಿರ್ಮಾಣಕ್ಕಾಗಿ ಸಹಾಯಧನ

Written by By: janajagran

Updated on:

Farm pond subsidy ತೋಟಗಾರಿಕೆ ಇಲಾಖೆಯಿಂದ 2021-22ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್.ಹೆಚ್.ಎಂ.) ಯೋಜನೆಯಡಿ ಅರ್ಹ ರೈತರಿಗೆ ವಿವಿಧ ಸೌಲಭ್ಯ ನೀಡಲಾಗುತ್ತಿದ್ದು, ಇದಕ್ಕಾಗಿ ಕಲಬುರಗಿ  ಜಿಲ್ಲೆಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Farm pond subsidy ಕೃಷಿ ಹೊಂಡ ನಿರ್ಮಾಣಕ್ಕಾಗಿ ಸಹಾಯಧನ

ಪ್ರದೇಶ ವಿಸ್ತರಣೆ, ವೈಯಕ್ತಿಕ ಕೃಷಿ ಹೊಂಡ, ಸಾಮೂಹಿಕ ಕೃಷಿ ಹೊಂಡ, ಯಾಂತ್ರೀಕರಣ, ಪ್ಯಾಕ್‌ಹೌಸ್, ಒಣದ್ರಾಕ್ಷಿ ಘಟಕ, ತಳ್ಳುವ ಗಾಡಿ, ಈರುಳ್ಳಿ ಶೇಖರಣಾ ಘಟಕ ಹಾಗೂ ಅರಿಶಿಣ ಸಂಸ್ಕರಣಾ ಘಟಕಗಳಿಗೆ ಸಹಾಯಧನ ಸೌಲಭ್ಯಕ್ಕಾಗಿ ಜಿಲ್ಲೆಯ ಆಸಕ್ತ ರೈತರು 2021ರ ಆಗಸ್ಟ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು  ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸಲು ಕೋರಲಾಗಿದೆ.

ತೋಟಗಾರಿಕೆ ಇಲಾಖೆಯಲ್ಲಿ ಟ್ರ್ಯಾಕ್ಟರ್ ಖರೀದಿಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಲ್ಲಿ ಹುಬ್ಬಳ್ಳಿ ತಾಲೂಕು ಹಾಗೂ ಧಾರವಾಡ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ 2021-22ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್ಎಚ್ಎಂ) ಯೋಜನೆಯಡಿಯಲ್ಲಿ ರೈತರಿಗೆ (subsidy for purchase tractor) ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಣ್ಣ ನರ್ಸರಿ ಸ್ಥಾಪನೆ, ಹಣ್ಣು(ಬಾಳೆ), ಹೂ (ಗುಲಾಬಿ, ಬಿಡಿ ಸೇವಂತಿಗೆ, ಚೆಂಡು ಹೂವು) ತರಕಾರಿ ಹೊಸ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕಗಳು, ಸಂರಕ್ಷಿತ ಬೇಸಾಯದಡಿ (ಹಸಿರು ಮನೆ, ನೆರಳು ಪರದೆ, ಪ್ಲಾಸ್ಟಿಕ್ ಮಲ್ಚಿಂಗ್), ಯಾಂತ್ರೀಕರಣ ಘಟಕದಡಿಯಲ್ಲಿ 20 ಪಿಟಿಓ ಹೆಚ್ ಪಿ ಸಾಮರ್ಥ್ಯಕ್ಕಿಂತ ಕಡಿಮೆಯಿರುವ ಟ್ರ್ಯಾಕ್ಟರ್, ಕೋಯ್ಲೋತ್ತರ ನಿರ್ವಹಣೆ ಅಡಿಯಲ್ಲಿ ಪ್ಯಾಕ್ ಹೌಸ್, ಹಣ್ಣು ಮಾಗಿಸುವ ಘಟಕ, ಈರುಳ್ಳಿ ಶೇಖರಣಾ ಘಟಕ, ಮತ್ತು ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗಾಗಿ ತಳ್ಳುವ ಗಾಡಿಗಳ ಸೌಲಭ್ಯಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನವಾಗಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಮ್ಯಾಪ್ mobileನಲ್ಲಿ ಡೌನ್ಲೋಡ್ ಮಾಡಿ

ಇನ್ನೂ ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲಿಚ್ಚಿಸುವ ರೈತರು  ಸ್ವಂತ ಜಮೀನು ಮತ್ತು ನೀರಾವರಿ ಸೌಲಭ್ಯ ಹೊಂದಿರಬೇಕು. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಗಣಕೀಕರಣ ಬೆಳೆ ದೃಢೀಕರಣ ಪತ್ರ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಪಾಸ್ಬುಕ್ ಹೊಂದಿರಬೇಕು.

ಪರಿಶಿಷ್ಟ ಜಾತಿಯವರಿಗೆ ಶೇ. 16.25, ಪರಿಶಿಷ್ಟ ಪಂಗಡ ಶೇ. 6..55, ಮಹಿಳೆಯರಿಗೆ ಶೇ. 33, ಅಲ್ಪಸಂಖ್ಯಾತರಿಗೆ ಶೇ. 5 ಹಾಗೂ ಅಂಗವಿಕಲರಿಗೆ ಶೇ. 3 ರಷ್ಟು ಮೀಸಲಾತಿ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ 0836-2744376 ಗೆ ಸಂಪರ್ಕಿಸಲು ಕೋರಲಾಗಿದೆ. ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.

Leave a Comment