ಇಲ್ಲೇ ಚೆಕ್ ಮಾಡಿ ನಿಮ್ಮ ಪಿಎಂ ಕಿಸಾನ್ ಇಕೆವೈಸಿ ಸ್ಟೇಟಸ್

Written by Ramlinganna

Updated on:

pm kisan Ekyc status ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ರೈತರು ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಕೃಷಿ ಇಲಾಖೆಗೂ ಹೋಗಬೇಕಿಲ್ಲ. ರೈತರ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು, ಮನೆಯಲ್ಲಿಯೇ ಕುಳಿತು ನೋಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ಮಾಹಿತಿ.

ರೈತರ ಆರ್ಥಿಕ ಸಹಾಯಕ್ಕಾಗಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೋಂದಣಿಯಾದ ರೈತ ಫಲಾನುಭವಿಗಳಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿ ನೀಡಲಾಗುವುದು. ಈ ಹಣವನ್ನು ಮೂರು ಕಂತುಗಳಲ್ಲಿ 2 ಸಾವಿರ ರೂಪಾಯಿಯಂತೆ ಪ್ರತಿ ನಾಲ್ಕು ತಿಂಗಳಿಗೆ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಪಿಎಂ ಕಿಸಾನ್ ಯೋಜನೆಯ 16 ಕಂತುಗಳ ಹಣ ಬಿಡುಗಡೆಯಾಗಿ ರೈತರ ಖಾತೆಗೂ ಜಮೆ ಮಾಡಲಾಗಿದೆ. ನಿಜವಾದ ರೈತ ಫಲಾನುಭವಿಗಳಿಗೆ ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಸಿಗಲೆಂಬ ಉದ್ದೇಶದಿಂದಾಗಿ ಇಕೆವೈಸಿ ಕಡ್ಡಾಯಗೊಳಿಸಲಾಗಿತ್ತು. ಸರ್ಕಾರಿ ನೌಕರರು, ಒಂದೇ ಕುಟುಂಬದಲ್ಲಿ ನಾಲ್ಕೈದು ಜನರು ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಪಡೆಯುತ್ತಿದ್ದರಿಂದ ಇಕೆವೈಸಿ ಕಡ್ಡಾಯ ಮಾಡಲಾಗಿತ್ತು.  ಸರ್ಕಾರದ ಸೂಚನೆಯಂತೆ ಹಲವಾರು ರೈತರು ಇಕೆವೈಸಿ ಮಾಡಿಸಿಕೊಂಡಿದ್ದಾರೆ. ಆದರೆ ಇನ್ನೂ ಕೆಲವು ರೈತರ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಯಾವ ರೈತರ ಇಕೆವೈಸಿ ಪೂರ್ಣಗೊಂಡಿಲ್ಲ ಎಂಬುದು ಇನ್ನೂ ಕೆಲವು ರೈತರಿಗೆ ಗೊತ್ತಾಗುತ್ತಿಲ್ಲ. ಹಾಗಾಗಿ ರೈತರು ಮೊಬೈಲ್ ನಲ್ಲೇ ತಮ್ಮ ಇಕೆವೈಸಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.

pm kisan Ekyc status ಇಕೆವೈಸಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ರೈತರು ಮೊಬೈಲ್ ನಲ್ಲೇ ಇಕೆವೈಸಿ ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಇಕೆವೈಸಿ webpage ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ತಮ್ಮ ಆಧಾರ್ ನಂಬರ್ ನಮೂದಿಸಿದ ನಂತರ Search ಮೇಲೆ ಕ್ಲಿಕ್ ಮಾಡಬೇಕು. ನೀವು ಇಕೆವೈಸಿ ಮಾಡಿಸಿದ್ದರೆ Ekyc already done ಎಂಬ ಸಂದೇಶ ಕಾಣುತ್ತದೆ.

ಒಂದು ವೇಳೆ ನಿಮ್ಮ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಬಹುದು.

ಪಿಎಂ ಕಿಸಾನ್ ಯೋಜನೆಯ 17ನೇ ಕಂತು ಈ ಸಲ ಇಕೆವೈಸಿ ಮಾಡಿಸಿದ ರೈತರಿಗೆ ಮಾತ್ರ ಜಮೆಯಾಗುವ ಸಾಧ್ಯತೆಯಿದೆ. ಕಳೆದ 16ನೇ ಕಂತಿನ ಹಣವನ್ನು ಇಕೆವೈಸಿ ಮಾಡಿಸಿದ ಹಾಗೂ ಮಾಡಿಸದೆ ಇರುವ ರೈತರಿಗೂ ಜಮೆ ಮಾಡಲಾಗಿತ್ತು. ಆದರೆ 17ನೇ ಕಂತು ಮಾತ್ರ ಇಕೆವೈಸಿ ಮಾಡಿದ ರೈತರಿಗೆ ಮಾತ್ರ ಜಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

ಪಿಎಂ ಕಿಸಾನ್ ಯೋಜನೆಯ 17ನೇ ಕಂತು ಯಾವ ತಿಂಗಳಲ್ಲಿ ಬರಬುಹುದು?

ಪಿಎಂ ಕಿಸಾನ್ ಯೋಜನೆಯ 17ನೇ ಕಂತು ಜೂನ್ ಕೊನೆಯ ವಾರ ಅಥವಾ ಜುಲೈ ತಿಂಗಳ ಮೊದಲ ವಾರ ರೈತರ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

ಇಕೆವೈಸಿ ಮಾಡಿಸದೆ ಇರುವ ರೈತರಿಗೆ ಆಯಾ ತಾಲೂಕಿನ ವ್ಯಾಪ್ತಿಯಲ್ಲಿ ಇಕೆವೈಸಿ ಮಾಡಿಸಲು ಸಮಯ ನೀಡಲಾಗುತ್ತಿದೆ. ಹಾಗಾಗಿ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಬಹುದು. ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್ ನೊಂದಿಗೆ ಇಕೆವೈಸಿ ಮಾಡಿಸಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತು ಹಣ ಪಡೆಯಬಹುದು.

Leave a Comment