Land podi ನಕ್ಷೆ ಮೊಬೈಲ್ ನಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Written by Ramlinganna

Updated on:

Land podi:  ರೈತರು ತಮ್ಮ ಜಮೀನಿನ ಪೋಡಿ ನಕ್ಷೆಯನ್ನು (ಸ್ಕೆಚ್)  ತಾವೇ ತಯಾರಿಸಿಕೊಳ್ಳುವ ಸ್ವಯಂ ಸೇವೆಯ ಹೊಸ ವ್ಯವಸ್ಥೆಯನ್ನು ಕಂದಾಯ ಇಲಾಖೆ ಸಿದ್ದಪಡಿಸಿದೆ.

ಇದಕ್ಕಾಗಿ ಕಂದಾಯ ಇಲಾಖೆಯು ಸ್ವಾವಲಂಬಿ ಎಂಬ ಹೆಸರಿನ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದೆ.  ಈ ಆ್ಯಪ್ ಸಹಾಯದಿಂದ ರೈತರು ಜಮೀನಿನ ಪೋಡಿಯನ್ನು ಸ್ವತಃ ತಯಾರಿಸಿಕೊಳ್ಳಬಹುದು. ಹಾಗಾದರೆ ಜಮೀನಿನ ಪೋಡಿ ಸ್ಕೆಚ್ ಎಂದರೇನು? ಪೋಡಿ ಯಾವಾಗ ಮಾಡಿಸಬೇಕು? ಪೋಡಿ ಮಾಡುವುದರಿಂದಾಗುವ ಪ್ರಯೋಜನವೇನೆಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Land podi  ಎಂದರೇನು?

ಪೋಡಿ ಎಂದರೆ ಜಮೀನಿನ ಭಾಗ ಮಾಡುವುದು ಎಂದರ್ಥ.  ಅಂದರೆ ಒಂದೇ ಸರ್ವೆ ನಂಬರಿನಲ್ಲಿ ಒಬ್ಬರಿಗಿಂತ ಹೆಚ್ಚು ಜನರ ಹೆಸರಿದ್ದರೆ ಅದನ್ನು ಪ್ರತ್ಯೇಕವಾಗಿ ಎಲ್ಲಾ ಸದಸ್ಯರ ಹೆಸರಿನ ಮೇಲೆ ಸರ್ವೆ ನಂಬರ್ ಮಾಡುವುದನ್ನೇ ಪೋಡಿ ಎಂದು ಕರೆಯುವರು.

ಜಮೀನಿನ ಪೋಡಿ ನಕ್ಷೆ ಏಕೆ ಅಗತ್ಯ?

ಕುಟುಂಬದ ಸದಸ್ಯರ ಪಾಲುಗಾರಿಕೆ, ಭೂ ಆಸ್ತಿಯ ಕೆಲವು ಭಾಗ ಮಾರಾಟ, ದಾನಪತ್ರ, ನಿವೇಶನಕ್ಕೆ ಬಳಕೆ, ಭೂ ಪರಿವರ್ತನೆ ಹೀಗೆ ಹಲವಾರು ಚಟುವಟಿಕೆಗಳಿಗೆ ಪೋಡಿ ನಕ್ಷೆ ತುಂಬಾ ಅವಶ್ಯಕವಾಗಿದೆ.  ಒಂದು ಸರ್ವೆ ನಂಬರಿನಲ್ಲಿ ಹಲವರ ಹೆಸರಿದ್ದರೆ ಮುಂದೆ ಸರ್ಕಾರದಿಂದ ಸೌಲಭ್ಯ ಪಡೆಯುವುದಕ್ಕೆ ತೊಂದರಯಾಗುತ್ತದೆ. ಬ್ಯಾಂಕಿನಲ್ಲಿ ಸಾಲ ಸೌಲಭ್ಯವೂ ಸಿಗುವುದಿಲ್ಲ. ಜಮೀನು ಮಾರಾಟ ಸಂದರ್ಭದಲ್ಲಿಯೂ ತೊಡಕಾಗುವ ಸಾಧ್ಯತೆಯಿರುತ್ತದೆ.

ಸ್ವಾವಲಂಬಿ ಆ್ಯಪ್ ಏಕೆ ಅಭಿವೃದ್ಧಿಪಡಿಸಲಾಯಿತು?

ಪೋಡಿ ನಕ್ಷೆ ಮಾಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನುತಪ್ಪಿಸುವುದಕ್ಕಾಗಿ ಸರ್ಕಾರವು ಈಗ ಆನ್ಲೈನ್ ವ್ಯವಸ್ಥೆಯನ್ನು ಮಾಡಿದೆ. ರೈತರು ಸ್ವತಃ ಅವರೆ ಮೊಬೈಲ್ ನಲ್ಲಿ ಜಮೀನಿನ ಪೋಡಿ ನಕ್ಷೆ ತಯಾರಿಸಿಕೊಳ್ಳಬಹುದು. ಸಹೋದರರು, ಸಂಬಂಧಿಕರು ಮನೆಯಲ್ಲಿಯೇ ಕುಳಿತು ತಮ್ಮ ಜಮೀನಿನಭಾಗ ಮಾಡಿಕೊಳ್ಳಲು ಇದು ಅವಕಾಶ ಕಲ್ಪಿಸಿದೆ.

ಇದನ್ನೂ ಓದಿ Gruhalakshmi Annabhagya bele hani ಸ್ಟೇಟಸ್ ಇಲ್ಲೇ ಚೆಕ್ ಮಾಡಿ

ಉದಾಹರಣೆಗೆ ಮನೆಯಲ್ಲಿ ನಾಲ್ಕು ಜನ ಸದಸ್ಯರಿದ್ದರೆ ತಮ್ಮ ಐದು ಎಕರೆ ಭೂಮಿಯನ್ನು ಯಾರಿಗೆ ಎಶ್ಟು ಭಾಗ ಎಂಬುದನ್ನು ನಿರ್ಧರಿಸಿ ಸ್ಕೆಚ್ ಸಿದ್ದಪಡಿಸಬಹುದು. ಎಲ್ಲರೂ ಒಪ್ಪಿದ ನಂತರ ಸ್ಕೆಚ್ ಅನ್ನು ತಹಶೀಲ್ದಾರ ಕಚೇರಿಯ ಭೂ ದಾಖಲೆಗಳ ವಿಭಾಗಕ್ಕೆ ಅಪ್ಲೋಡ್ ಮಾಡಿದರೆ ಸಾಕು, ನೋಂದಣಿ ಇಲಾಖೆಯಲ್ಲಿ ಆ ಸ್ಕೆಚ್ ನ ಗಡಿಗಳಿಗೆ ಅನುಗುಣವಾಗಿ ನೋಂದಣಿ ಮಾಡಲಾಗುವುದು.

ರೈತರಿಗೆ ಸ್ವಾವಲಂಬಿ ಆ್ಯಪ್ ಕೇವಲ ಪೋಡಿ ನಕ್ಷೆ ಅಷ್ಟೇ ಅಲ್ಲದೆ ಜಮೀನಿನ 11 ಇ, ಭೂ ಪರಿವರ್ತನೆ ಮತ್ತು ವಿಭಾಗ ಮಾಡಿಕೊಳ್ಳಲು ಸಹಾಯವಾಗುತ್ತದೆ.

ರೈತರು ಸ್ವತಃ ಮೊಬೈಲ್ ನಲ್ಲಿ ಪೋಡಿ ನಕ್ಷೆ ಹೇಗೆ ಪಡೆಯಬೇಕು?

ರೈತರು ಆನ್ಲೈನ್ ಮೂಲಕ ಪೋಡಿ ನಕ್ಷೆ ಪಡೆಯಲು ಈ

https://bhoomojini.karnataka.gov.in/Service27/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂ ಕಂದಾಯ ಇಲಾಖೆಯ ಸ್ವಾವಲಂಬಿ ಆ್ಯಪ್ ಪೇಜ್ ಓಪನ್ ಆಗುತ್ತದೆ. ರೈತರು ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. ಆಗ ಮೊಬೈಲಿಗೆ ಓಟಿಪಿ ಕಳಿಸಲು ಸೆಂಡ್ ಓಟಿಪಿ ಮೇಲೆ ಕ್ಲಿಕ್ ಮಾಡಿದ ನಂತರ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಅರ್ಜಿ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್ ಹಾಗೂ ಪಹಣಿಯಲ್ಲಿ ಹೆಸರು ಒಂದೇ ರೀತಿಯಿದ್ದರೆ ಸಮಸ್ಯೆಯಾಗುವುದಿಲ್ಲ. ಆಧಾರ್ ಕಾರ್ಡ್ ನಲ್ಲಿರ ಹೆಸರನ್ನು ನಮೂದಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಬಹುದು

ರೈತರು ತಮ್ಮ ಬಳಿ ಇರುವ ಮೊಬೈಲ್ ನಲ್ಲೇ ಜಮೀನಿನ ಪೋಡಿ ನಕ್ಷೆ ಮಾಡಿಸಲು ಸರ್ಕಾರ ಈ ಆ್ಯಪ್ ಅಭಿವೃದ್ಧಿ ಪಡಿಸಿದೆ.

Leave a Comment