do self crop survey ನನ್ನ ಬೆಳೆ ನನ್ನ ಹಕ್ಕು ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಜ್ಯ ಸರ್ಕಾರ 2022ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದೆ. ರೈತರಿಂದಲೇ ತಮ್ಮ ತೋಟ, ಹೊಲಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಿ ಕೃಷಿ ಇಲಾಖೆ ಚಾಲನೆ ಕೊಟ್ಟಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಎಲ್ಲಾ ಬೆಳೆಗಳ ವಿವರಗಳನ್ನು ತಾವೇ ಸ್ವತಃ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
do self crop survey ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಹೇಗೆ ಮಾಡಬೇಕು?
ರೈತರು ಗೂಗಲ್ ಪ್ಲೇ ಸ್ಟೋರ್ ನಲ್ಲಿ Kharif Farmer Crop 2022-23 ಆ್ಯಪ್ ನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.csk.Khariffarmer22_23.cropsurvey
ಲಿಂಕ್ ಮೇಲೆ ಕ್ಲಿಕ್ ಮಾಡಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮುಂಗಾರು ರೈತರ ಬೆಳೆ ಸಮೀಕ್ಷೆ 2022-23 ಮೆಸೇಜ್ ಕಾಣುತ್ತದೆ ಅಲ್ಲಿ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ 2022-23 ಕೆಳಗಡೆ ಮುಂಗಾರು ಕಾಣುತ್ತದೆ. ಬೆಳೆ ಸಮೀಕ್ಷೆ ಸಹಾಯವಾಣಿ 8448447715 ಕಾಣುತ್ತದೆ. ಸರಿ ಮೇಲೆ ಕ್ಲಿಕ್ ಮಾಡಿದ ನಂತರ ಅಲೋ ಮುಂಗಾರು ರೈತರ ಬೆಳೆ ಸಮೀಕ್ಷೆ 2022-23 ಟು ಟೇಕ್ ಪಿಕ್ಚರ್ ಆ್ಯಂಡ್ ರಿಕಾರ್ಡ್ ವೀಡಿಯೋ ಮೆಸೆಜ್ ಕಾಣುತ್ತದೆ ಅಲ್ಲಿ ವೈಲ್ ಯೂಸಿಂಗ್ ದಿ ಆ್ಯಪ್ ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು.
ಸಮೀಕ್ಷೆ ಕೈಗೊಳ್ಳುತ್ತಿರುವ ಋತು ಮುಂಗಾರು ನಿಮ್ಮ ಆಯ್ಕೆ ಸರಿಯಾಗಿದೆಯೇ ಎಂಬ ಮೆಸೆಜ್ ಕಾಣುತ್ತದೆ ಅಲ್ಲಿ ಹೌದು ಮೇಲೆ ಕ್ಲಿಕ್ ಮಾಡಬೇಕು. ನಂತರ. ಆಧಾರ್ ಸಂಖ್ಯೆ, ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು, ಸಂಬಂಧ, ಹುಟ್ಟಿದ ದಿನಾಂಕ, ವಿಳಾಸ ಮೊಬೈಲ್ ನಂಬರ್ ನಮೂದಿಸಿ ಸಕ್ರೀಯಗೊಳಿಸು ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆರಂಭಿಸು ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಡೌನ್ಲೋಡ್ ಮಾಸ್ಟರ್ ವಿವರ, ಡೌನ್ಲೋಡ್ ಪಹಣಿ ಮತ್ತು ಮಾಲಿಕರ ವಿವರ, ಬೆಳೆ ಸಮೀಕ್ಷೆ ಆರಂಭಿಸು, ಅಪ್ಲೋಡ್ ಮಾಡಿ, ಬೆಳೆ ಸಮೀಕ್ಷೆ ವರದಿ ಕಾಣುತ್ತದೆ. ಡೌನ್ಲೋಡ್ ಪಹಣಿ ಮತ್ತು ಮಾಲೀಕರ ವಿರ ಕ್ಲಿಕ್ ಮಾಡಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿ ಭರ್ತಿ ಮಾಡಿ ಬೆಳೆ ಸಮೀಕ್ಷೆ ಆರಂಭಿಸು ಮೇಲೆ ಕ್ಲಿಕ್ ಮಾಡಿ ಅಪ್ಲೋಡ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು..
ರೈತರೇನು ಮಾಡಬೇಕು?
ರೈತರು ಸರ್ವೆ ನಂಬರ್ ಗಡಿಯೊಳಗೆ ನಿಂತು ಬೆಳೆ ವಿವರ ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್ಲೋಡ್ ಮಾಡಬೇಕು. ಈ ಪ್ರಕಾರ ದಾಖಲಿಸಿರುವ ಮಾಹಿತಿಯನ್ನು ಮೇಲ್ವಿಚಾರಕರ ಪರಿಶೀಲನೆಗೊಳಪಟ್ಟು ಸರಿ ಇದ್ದರೆ ಅನುಮೋದಿಸುತ್ತಾರೆ.
ಬೆಳೆ ಸಮೀಕ್ಷೆ ಏಕೆ ಮಾಡಿಸಬೇಕು?
ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ ಹಾಗೂ ಪಹಣಿಯಲ್ಲಿ ಎಲ್ಲಾ ಬೆಳೆ ವಿವರ ದಾಖಲಿಸಲು ಬಳಸಲಾಗುತ್ತದೆ.
ಇದನ್ನೂ ಓದಿ : ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ
ಷಿ ಹಾಗೂ ಬೆಳೆಗಳ ವಿಚಾರದಲ್ಲಿ ಯಾವುದೇ ನಷ್ಟ ಪರಿಹಾರ, ವಿಮೆ ಹಣ ಪಡೆಯಬೇಕಾದರೆ ಇದೀಗ ರೈತರೇ ತಮ್ಮ ಬೆಳೆಗಳ ವಿವರಗಳನ್ನು ದಾಖಲಿಸಲು ಕಡ್ಡಾಯಗವಾಗಿದೆ. ಇಲ್ಲವಾದರೆ ರೈತರು ಸೌಲಭ್ಯದಿಂದ ವಂಚಿತರಾಗಬೇಕಾಗುತ್ತದೆ.
ಏನಿದು ಬೆಳೆ ಸಮೀಕ್ಷೆ?
ಸರ್ವೆ ನಂಬರ್, ಹಿಸ್ಸಾ ನಂಬರ್ ವಾರು ಬೆಳೆ ಮಾಹಿತಿ ಸಂಗ್ರಹ ಹಾಗೂ ನಿಖರ ದತ್ತಾಂಶದ ಕೊರತೆ ನಿವಾರಿಸಲು ಸರ್ಕಾರವು 2018 ರಲ್ಲಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ರೈತರೇ ಬೆಳೆ ಮಾಹಿತಿಯನ್ನು ಛಾಯಾ ಚಿತ್ರ ಸಹಿತ ದಾಖಲಿಸಿ, ಅಪ್ಲೋಡ್ ಮಾಡಲು ಸರ್ಕಾರ ಅನುಮತಿ ನೀಡಿದೆ.