ರೈತ ಶಕ್ತಿಯೋಜನೆಯಡಿ ಡೀಸೆಲ್ ಖರೀದಿಗೆ ಸಬ್ಸಿಡಿ

Written by By: janajagran

Updated on:

diesel subsidy under RythaShakti scheme ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ನೆರವಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ರೈತರ ಆದಾಯ ದ್ವಿಗುಣಗೊಳಿಸುವುದಕ್ಕಾಗಿ ಸರ್ಕಾರಗಳು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಲೇ ಇವೆ. ಆದರೆ ರೈತರಿಗೆ ಮಾಹಿತಿಯ ಕೊರತೆಯಿಂದಾಗಿ ಸರ್ಕಾರದ ಯೋಜನೆಗಳ ಸೌಲಭ್ಯಗಳು ಸಿಗುವುದಿಲ್ಲ. ರೈತರಿಗೆ ಸಹಾಯಧನ ನೀಡಲು ಸರ್ಕಾರ ಜಾರಿಗೆ ತಂದ ಹಲವಾರು ಯೋಜನೆಗಳಲ್ಲಿ ರೈತಶಕ್ತಿ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಡೀಸೆಲ್ ಖರೀದಿ ಮಾಡಲು ಸಹಾಯಧನ ನೀಡಲಾಗುವುದು. ಡಿಸೆಲ್ ಖರೀದಿಗೆ ರೈತರಿಗೆ ಹೇಗೆ ಸಹಾಯಧನ ಸಿಗುತ್ತದೆ? ರೈತರು ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೃಷಿ ಯಂತ್ರೋಪಕರಣಗಳಿಗೆ ಪ್ರೋತ್ಸಾಹಿಸಲುಹಾಗೂ ಇಂಧನ ವೆಚ್ಚದ ಭಾರ ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂಪಾಯಿಗಳಂತೆ ಗರಿಷ್ಠ ಐದು ಎಕರೆಗೆ ಡಿಬಿಟಿ ಮೂಲಕ ಡೀಸೆಲ್ ಖರೀದಿಗೆ ಸಹಾಯಧನ ನೀಡಲಾಗುವುದು. ಇದರ ಸದುಪಯೋಗಕ್ಕಾಗಿ ಆಯಾ ರೈತ ಸಂಪರ್ಕ ಕೇಂದ್ರಗಳಿಗೆ ರೈತರು ಭೇಟಿ ನೀಡಿ ಎಲ್ಲಾ ಭೂ ಹಿಡುವಳಿ ವಿವರವನ್ನು ಕಡ್ಡಾಯವಾಗಿ ಫ್ರೂಟ್ಸ್ ಪೋರ್ಟಲ್್ ನಲ್ಲಿ ನೋಂದಣಿ ಮಾಡಿಸಿ ಅಪಡೇಟ್ ಮಾಡಿಕೊಳ್ಳಬೇಕೆಂದು ಕೃಷಿ ಇಲಾಖೆ ಮನವಿ ಮಾಡಿದೆ.

diesel subsidy under RythaShakti scheme ಏನಿದು ರೈತ ಶಕ್ತಿ ಸಬ್ಸಿಡಿ?

ಡಿಸೇಲ್ ಗೆ ಸಹಾಯಧನ ನೀಡಲು ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಮುಖ್ಯಮಂತ್ರಿಗಳು 2022-23 ರ ಬಜೆಟ್ ನಲ್ಲಿ ಘೋಷಿಸಿದ್ದು, ಈ ಯೋಜನೆಯಡಿ ಸೌಲಭ್ಯ ಪಡೆಯುವ ಯಾವುದೇ ರೈತರು ಪ್ರತ್ಯೇಕ ವೈಯಕ್ತಿಕ ಅರ್ಜಿ ಸಲ್ಲಿಸಲು ಅವಶ್ಯಕತೆಯಿಲ್ಲ. ರೈತರು ಹೊಂದಿರುವ ಹಿಡುವಳಿ ಆಧಾರದ ಮೇಲೆ ಪ್ರತಿ ರೈತರಿಗೆ ಎಕರೆಗೆ 250 ರೂಪಾಯಿಗಳಂತೆ ಗರಿಷ್ಠ ಐದು ಎಕರೆಗೆ 1250 ರೂಪಾಯಿಯವರೆಗೆ ಡೀಸೆಲ್ ಸಹಾಯಧನ ನೀಡಲಾಗುವುದು. ಫ್ರೂಟ್ಸ್ ಪೋರ್ಟಲ್ ನಲ್ಲಿ ಇಲ್ಲಿಯವರೆಗೆ ಎಲ್ಲಾ ಲ್ಯಾಂಡ್ ಪಾರ್ಸಲ್ಸ್ ಗಳು ನೋಂದಣಿಯಾಗಿಲ್ಲ.

ಇದನ್ನೂ ಓದಿ ನಿಮ್ಮ ಮಕ್ಕಳಿಗೆ ಎಷ್ಟು ಸ್ಕಾಲರ್ ಶಿಪ್ ಬರುತ್ತಿದೆ? ಇಲ್ಲೇ ಚೆಕ್ ಮಾಡಿ

ಪ್ರತಿಯೊಬ್ಬ ರೈತರು ಫ್ರೂಟ್ಸ್ (ಫಾರ್ಮರ್ ರಿಜಿಸ್ಟ್ರೇಷನ್ ಆ್ಯಂಡ್ ಯೂನಿಫೈಡ್ ಬೆನಿಫಿಶಿಯರಿ ಇನ್ಫಾರ್ಮೇಷನ್  ಸಿಸ್ಟಂ) ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಾಯಾಗಿರಬೇಕು. ಫ್ರೂಟ್ಸ್ ಪೋರ್ಟಲ್ ನಲ್ಲಿ ನಮೂದಿಸಿರುವ ಭೂ ಹಿಡುವಳಿ ಆಧಾರದ ಮೇಲೆ ಎಕರೆಗೆ 250 ರೂಪಾಯಿ ಗರಿಷ್ಠ 1250 ರೂಪಾಯಿಯವರೆಗೆ ಡೀಸೆಲ್ ಸಹಾಯಧನ ನೀಡಲಾಗುವುದು. ಫ್ರೂಟ್ಸ್ ಪೋರ್ಟಲ್ ನಲ್ಲಿ ರೈತರು ಹೊಂದಿರುವ ಎಲ್ಲಾ ಭೂ ಹಿಡುವಳಿಗಳನ್ನು ನೋಂದಾಯಿಸಿಕೊಳ್ಳಲು ಹಾಗೂ ಲ್ಯಾಂಡ್ ಪಾರ್ಸಲ್ಸ್  ಬರುವಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ರಾಜ್ಯದ ರೈತರು ಆಯಾ ಆಯಾ ಹೋಬಳಿಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ರೈತರು ಎಲ್ಲಾ ಭೂ ಹಿಡುವಳಿ ವಿವರ ಕಡ್ಡಾಯವಾಗಿ ಫ್ರೂಟ್ಸ್ ಪೋರ್ಟಲ್ ನಲ್ಲಿ ನೋಂದಣಿ, ಅಪಡೇಟ್ ಮಾಡುವುದು ಕಡ್ಡಾಯವಾಗಿದೆ.

ಏನಿದು ಫ್ರೂಟ್ಸ್ ತಂತ್ರಾಂಶ?

ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ ಪಶುಸಂಗೋಪನೆ ಇಲಾಖೆಯ ಯೋಜನೆಯಡಿ ರೈತರು, ಸರ್ಕಾರದಿಂದ ಸೌಲಭ್ಯ ಪಡೆಯಬೇಕಾದರೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡುವುದು ಕಡ್ಡಾಯವಾಗಿದೆ. ರೈತರು ಸರ್ಕಾರದ ಯಾವುದೇ ಸೌಲಭ್ಯ ಸಿಗಬೇಕಾದರೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡುವುದು ಅಗತ್ಯವಾಗಿದೆ. ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡಿಸಿದ ನಂತರ ರೈತರಿಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ನಂತೆ ಎಫ್ಐಡಿ ಸಂಖ್ಯೆ ನೀಡಲಾಗುವುದು.

ರೈತರು ಆನ್ಲೈನ್ ನಲ್ಲಿ ಫ್ರೂಟ್ಸ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಸುವುದು ಹೇಗೆ?

ರೈತರು ಆನ್ಲೈನ್ ನಲ್ಲಿ ತಮ್ಮ ಹೆಸರು ನೋಂದಣಿ ಮಾಡಬೇಕಾದರೆ ಈ

https://fruits.karnataka.gov.in/OnlineUserRegistration.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ತಂತ್ರಾಂಶದ ಪೇಜ್ ಓಪನ್ ಆಗುತ್ತದೆ. ಆಧಾರ್ ಕಾರ್ಡ್ ನಂಬರ್ ಹಾಗೂ ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು ಭರ್ತಿ ಮಾಡಿ ವೆರಿಫೈ ಮೇಲೆ ಕ್ಲಿಕ್ ಮಾಡಿ  ಟೇಕ್ ಮಿ ಟು ದ ಲಾಗಿನ್ ಪೇಜ್ ಮೇಲೆ ಕ್ಲಿಕ್ ಮಾಡಿಮಾಡಿದ ನಂತರ ಮೊಬೈಲಿಗೆ ಓಟಿಪಿಬರುತ್ತದೆ. ಓಟಿಪಿ ನಮೂದಿಸಿ ಅಲ್ಲಿ ಕೇಳದಾಗ ಮಾಹಿತಿಗಳನ್ನು ಭರ್ತಿ ಮಾಡಿ ರೈತರು ತಮ್ಮಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

Leave a Comment