ವಿದ್ಯಾರ್ಥಿನಿಯರಿಗೂ ರೈತ ವಿದ್ಯಾನಿಧಿ ಯೋಜನೆಯಡಿ ಶಿಷ್ಯವೇತನ

Written by By: janajagran

Updated on:

Farmer child Scholarship Scheme ಮುಂದಿನ ಶೈಕ್ಷಣಿಕ ವರ್ಷದಿಂದ 8, 9 ಹಾಗೂ 10ನೇ ತರಗತಿಯ ಗ್ರಾಮೀಣ ಭಾಗದ ರೈತರ ಹೆಣ್ಣುಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಘೋಷಣೆ ಮಾಡಿದ್ದಾರೆ.

ವಿಜಯಪುರದಲ್ಲಿ ನೂತನ ಜಿಲ್ಲಾಡಳಿತ ಭವನ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಈ ಕುರಿತು ಮಾತನಾಡಿದ್ದಾರೆ. ಗ್ರಾಮೀಣ ಭಾಗದ ಬಡ ರೈತರ ಹೆಣ್ಣುಮಕ್ಕಳು ಅರ್ಧಕ್ಕೆ ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಇಂತಹ ರೈತರಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಅತೀ ಶೀಘ್ರದಲ್ಲಿ ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣ ಪಿಯು, ಪದವಿ ಓದುತ್ತಿರುವ ರೈತರ ಮಕ್ಕಳಿಗೆ   ವಿದ್ಯಾನಿಧಿ ಯೋಜನೆ ಘೋಷಣೆ ಮಾಡಿದ್ದರು. ಇದೀಗ ಈ ಯೋಜನೆಯನ್ನು 8-9-10ನೇ ತರಗತಿ ಹೆಣ್ಮಕ್ಕಳಿಗೂ ವಿಸ್ತರಿಸಲು ನಿರ್ಧರಿಸಿದ್ದಾರೆ.

Farmer child Scholarship Scheme ಏನಿದು ರೈತವಿದ್ಯಾನಿಧಿ ಯೋಜನೆ?

ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ರೈತವಿದ್ಯಾನಿಧಿ ಯೋಜನೆ ಘೋಷಣೆ ಮಾಡಲಾಗಿದೆ.ರೈತರ  ಮಕ್ಕಳಿಗೆ ಸರ್ಕಾರವು ಕೋರ್ಸ್ ಗಳಿಗನುಸಾರವಾಗಿ ವಿದ್ಯಾರ್ಥಿವೇತನ ನೀಡಲಾಗುವುದು.

ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 10ನೇ ತರಗತಿಯನ್ನು ಪೂರ್ಣಗೊಳಿಸಿ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಪ್ರವೇಶವನ್ನು ಪಡೆದಿರುವ ಪಿಯುಸಿ, ಪದವಿ, ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ಪಡೆದ ರೈತರ ಎಲ್ಲಾ ಮಕ್ಕಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುವುದು. 2500 ರೂಪಾಯಿಯಿಂದ 11 ಸಾವಿರ ರೂಪಾಯಿಯವರೆಗೆ ಶಿಷ್ಯವೇತನ ನೀಡಲಾಗುವುದು.

Farmer child Scholarship Scheme ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ 2500 ರೂಪಾಯಿ, ವಿದ್ಯಾರ್ಥಿನಿಯರಿಗೆ 3 ಸಾವಿರ ರೂಪಾಯಿ, ಪದವಿ ವಿದ್ಯಾರ್ಥಿಗಳಿಗೆ 5 ಸಾವಿರ, ವಿದ್ಯಾರ್ಥಿನಿಯರಿಗೆ 5500 ರೂಪಾಯಿ, ಎಲ್ಎಲ್ಬಿ, ಪ್ಯಾರಾಮೆಡಿಕಲ್ , ಬಿಫಾರ್ಮ್, ನರ್ಸಿಂಗ್, ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ 7500 ರೂಪಾಯಿ ನೀಡಿದರೆ ವಿದ್ಯಾರ್ಥಿನಿಯರಿಗೆ 8 ಸಾವಿರ ರೂಪಾಯಿ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : ರೈತರಿಗೆ ಸಂತಸದ ಸುದ್ದಿ. ಜನವರಿ 1 ರಂದು ಪಿಎಂ ಕಿಸಾನ್ 10ಕಂತಿನ ಹಣ ಬಿಡುಗಡೆ, ಮೊಬೈಲ್ ನಲ್ಲೇ ನಿಮ್ಮ ಹೆಸರು ಚೆಕ್ ಮಾಡಿ

ಎಂಬಿಬಿಎಸ್, ಬಿ, ಬಿಟೆಕ್, ಸ್ನಾತಕೋತ್ತರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 10 ಸಾವಿರ, ವಿದ್ಯಾರ್ಥಿನಿಯರಿಗೆ 11 ಸಾವಿರ ರೂಪಾಯಿ  ಶಿಷ್ಯವೇತನ ನೀಡಲು ವಿದ್ಯಾನಿಧಿ ಯೋಜನೆ ಘೋಷಣೆ ಮಾಡಲಾಗಿದೆ.

ಇತ್ತೀಚೆಗೆ ರಾಜ್ಯ ಸರ್ಕಾರವು ರೈತ ಮಕ್ಕಳಿಗಷ್ಟೇ ವಿದ್ಯಾನಿಧಿ ಮಿತಿಗೊಳಿಸಿದ ಯೋಜನೆಯ ಆದೇಶವನ್ನು ಮಾರ್ಪಡಿಸಿ ರೈತ ಕುಟುಂಬದ ಎಲ್ಲಾ ಮಕ್ಕಳಿಗೆ ವಿದ್ಯಾನಿಧಿ ನೀಡಲು ಆದೇಶಿಸಿದೆ. ಇದಕ್ಕಿಂತ ಮುಂಚಿತವಾಗಿ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ್ದರೆ ವಿದ್ಯಾನಿಧಿ ಯೋಜನೆಯಡಿ ಸೌಲಭ್ಯ ಸಿಗುತ್ತಿರಲಿಲ್ಲ. ಈಗ ಬೇರೆ ಇಲಾಖೆಯಿಂದ ಯಾವುದೇ ರೀತಿಯ ವಿದ್ಯಾರ್ಥಇ ವೇತನ ಪಡೆಯುತ್ತಿದ್ದರೂ ವಿದ್ಯಾನಿಧಿ ಯೋಜನೆಯಡಿ ರೈತ ಕುಟುಂಬದ ಮಕ್ಕಳು ಅರ್ಹರಾಗಿರುತ್ತಾರೆ.

Leave a Comment