ಪಶುಪಾಲನಾ ಇಲಾಖೆಯ ವತಿಯಿಂದ 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹಾಗೂ 2022-23ನೇ ಸಾಲಿನಲ್ಲಿ ಅನುಸೂಚಿತ ಜಾತಿಗಳ ಉಪಯೋಜನೆಯಡಿ ಕೌಮ್ಯಾಟ್ (ರಬ್ಬರ್ ನೆಲಹಾಸು) ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೆಲಹಾಸುಗಳನ್ನು ವಿತರಿಸಲು ಯೋಜನೆಯಡಿಯಲ್ಲಿ ಆಯ್ಕೆಯಾಗುವ ಪ್ರತಿ ಫಲಾನುಭವಿಗಳಿಗೆ ಎರಡು ನೆಲಹಾಸುಗಳನ್ನು ವಿತರಣೆ ಮಾಡಲಾಗುವುದು. ಈ ಕಾರ್ಯಕ್ರಮದಡಿ ಘಟಕದ ವೆಚ್ಚ (ಎರಡು ಕೌಮ್ಯಾಟ್ ಗಳಿಗೆ) 6190 ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 50 ರಷ್ಟು ಅಂದರೆ 3095 ರೂಪಾಯಿ ಸಹಾಯಧನ  ಮತ್ತು ಶೇ. 50 ರಷ್ಟು ಅಂದರೆ 3095 ರೂಪಾಯಿ ಫಲಾನುಭವಿಗಳ ವಂತಿಗೆಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

2022-23ನೇ ಸಾಲಿನಲ್ಲಿ ಅನುಸೂಚಿತ ಜಾತಿಗಳ ಉಪಯೋಜನೆ ಕಾಯ್ದೆ 2013ರಡಿ ಬಳಕೆಯಾಗದೆ ಇರುವ ಮೊತ್ತದಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರತಿ ಫಲಾನುಭವಿಗಳಿಗೆ ಎರಡು ನೆಲಹಾಸರುಗಳನ್ನು ಶೇ. 90 ರಷ್ಟು ಅಂದರೆ 5571 ಸಹಾಯಧನ ಹಾಗೂ ಶೇ. 10 ರಷ್ಟು ಅಂದರೆ 619 ರೂಪಾಯಿ ಫಲಾನುಭವಿ ವಂತಿಕೆಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲಾಗುವುದು.

ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ವರ್ಗವಾರು ಗುರಿಗಳನ್ನು ನಿಗದಿಪಡಿಸಲಾಗಿದೆ. ಹಾವೇರಿ ಜಿಲ್ಲೆಯ ರೈತರು  ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ರೈತರು ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಅಥವಾ ಹತ್ತಿರದ ಪಶುವೈದ್ಯ ಸಂಸ್ಥೆಗಳಿಗೆ ಸಂಪರ್ಕಿಸಲು ಮತ್ತು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ

ಬೆಳಗಾವಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ 2021022ನೇ ಸಾಲಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ರಬ್ಬರ್ ನೆಲಹಾಸುಗಳನ್ನು ವಿತರಿಸಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಎರಡು ನೆಲಹಾಸುಗಳಿಗೆ  6190 ರೂಪಾಯಿ ಇದ್ದು,  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 50 ರಷ್ಟು ಅಂದರೆ 3095 ರೂಪಾಯಿ ಸಹಾಯಧನ  ಮತ್ತು ಶೇ. 50 ರಷ್ಟು ಅಂದರೆ 3095 ರೂಪಾಯಿ ಫಲಾನುಭವಿಗಳ ವಂತಿಗೆಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಇದನ್ನೂ ಓದಿ : ರೈತರು ತಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲೇ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಜಾನುವಾರು ಫಲಾನುಭವಿ ಬಳಿ ರಾಸು ಇರುವ ಕುರಿತು ಪಶುವೈದ್ಯಾಧಿಕಾರಿಗಳಿಂದ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅಂಗವಿಕಲರಾಗಿದ್ದಲ್ಲಿ ಪ್ರಮಾಣಪತ್ರ ಇರಬೇಕು.  ಆಸಕ್ತ ರೈತರು ಜುಲೈ 5 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ತಾಲೂಕುಮಟ್ಟದ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಲು ಬೆಳಗಾವಿ ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ನಿರ್ದೇಶಕಡಾ. ರಾಜೀವ್ ಎನ್. ಕೂಲೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಶುಪಾಲಕರಿಗೆ ಆರಂಭವಾಗಿದೆ ಸಹಾಯವಾಣಿ

ರೈತರಿಗೆ ಪಶುಪಾಲನೆ ಕುರಿತು ದಿನದ 24 ಗಂಟೆ ಉಚಿತವಾಗಿ ಮಾಹಿತಿ ನೀಡಲು ಸರ್ಕಾರದ ವತಿಯಿಂದ ಸಹಾಯವಾಣಿ ಆರಂಭವಾಗಿದೆ.  ರೈತರು 8277 100 200 ನಂಬರಿಗೆ ಕರೆ ಮಾಡಿ ರೈತರು ಮನೆಯಲ್ಲಿಯೇ ಕುಳಿತು ಪಶುಪಾಲನೆ ಕುರಿತಂತೆ ಎಲ್ಲಾ ಮಾಹಿತಿ ಪಡೆಯಬಹುದು.

Leave a Reply

Your email address will not be published. Required fields are marked *