ಸಿರಿಧಾನ್ಯ ಬೆಳೆದ ರೈತರ ಖಾತೆಗೆ 10 ಸಾವಿರ ಪ್ರೋತ್ಸಾಹಧನ ಇಲ್ಲಿದೆ ಮಾಹಿತಿ

Written by By: janajagran

Updated on:

2021-22ನೇ ಸಾಲಿನಲ್ಲಿ ರೈತ ಸಿರಿ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ 27,888 ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆದ  13,758 ರೈತರಿಗೆ 9.85 ಕೋಟಿ ರೂಪಾಯಿ ಪ್ರೋತ್ಸಾಹಧನ ಪಾವತಿಸಲಾಗಿದೆ. ಉಳಿದ ರೈತರಿಗೆ ಪಾವತಿ ನೀಡಿಕೆ ಪ್ರಗತಿಯಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶ ವಿಸ್ತರಿಸುವ ನಿಟ್ಟಿನಲ್ಲಿ ರೈತಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದಿದ್ದಾರೆ.

ಏನಿದು ಸಿರಿಧಾನ್ಯ ಯೋಜನೆ ?

ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವದನ್ನು ಕಡಿಮೆ ಮಾಡಿದ್ದರಿಂದ ರೈತರಿಗೆ ಪ್ರೋತ್ಸಾಹ ನೀಡಲು ರಾಷ್ಟ್ರೀಯ ವಿಕಾಸ್ ಯೋಜನೆಯಡಿಯಲ್ಲಿ ಸಿರಿಧಾನ್ಯ ಬೆಳೆಯುವಂತೆ ಉತ್ತೇಜಿಸಲು ರೈತ ಸಿರಿ ಯೋಜನೆಯನ್ನು ಆರಂಭಿಸಲಾಗಿದೆ. ಹೇರಳವಾಗಿ ಪೌಷ್ಟಿಕಾಂಶ ಹೊಂದಿರುವ ಸಿರಿಧಾನ್ಯಗಳಾದ ಊದಲು, ನವಣೆ, ಕೊರಲೆ,ಹಾರಕ, ಅರ್ಕ, ಬರಗು ಹಾಗೂ ಸಾಮೆಗಳ ಉತ್ಪಾದನೆ ಹೆಚ್ಚಿಸುವ ನಿಲುವು ಕೃಷಿ ಇಲಾಖೆ ಕೈಗೊಂಡಿದೆ. ಯಾವುದೇ ರಾಸಾಯನಿಕವಿಲ್ಲದೆ ಬೆಳೆಯುವ ಸಿರಿಧಾನ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ.

ಇದನ್ನೂ ಓದಿ ರೈತರ ಖಾತೆಗೆ ಜಮೆಯಾಯಿತು ಪರಿಹಾರದ ಹೆಚ್ಚುವರಿ ಹಣಃ ಸ್ಟೇಟಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ

2021-22ನೇ ಸಾಲಿನಲ್ಲಿ ಸಿರಿಧಾನ್ಯಗಳಾದ ನವಣೆ,ಹಾರಕ, ಸಾಮೆ, ಕೊರಲೆ ಹಾಗೂ ಬರಗು ಬೆಳೆಗಳನ್ನು ಬೆಳೆದ ರೈತರುಗಳಿಗೆ ಬೆಳೆ ಸಮೀಕ್ಷೆ ಆಧಾರದ ಮೇರೆಗೆ ಪರಿಶೀಲಿಸಿ ಒಟ್ಟು 10 ಸಾವಿರ ರೂಪಾಯಿ ಪ್ರತಿ ಹೆಕ್ಟೇರ್ ನಂತೆ ಗರಿಷ್ಟ ಎರಡು ಹೆಕ್ಟೇರಿಗೆ ಸೀಮಿತವಾಗುವಂತೆ ಫಲಾನುಭವಿಗಳಿಗೆ ನೇರ ಸೌಲಭ್ಯ ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.

ರೈತಸಿರಿ ಯೋಜನೆಯ ಲಾಭ ಪಡೆಯಲು ರೈತರೇನು ಮಾಡಬೇಕು?

ಸಿರಿಧಾನ್ಯಗಳನ್ನು ಬೆಳೆದ ರೈತರು ಬೆಳೆ ಸಮೀಕ್ಷೆಯನ್ನು ಕಡ್ಡಾಯವಾಗಿದೆ.  ತಮ್ಮ ವ್ಯಾಪ್ತಿಗೆ ಬರುವ ರೈತ ಸಂಪರ್ಕ ಕೇಂದ್ರದಲ್ಲಿ ದಾಖಲೆಗಳೊಂದಿಗೆ ಅರ್ಜಿಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ಪರಿಶಿಷ್ಟ  ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಹಿಂದುಳಿದ ವರ್ಗದ ರೈತರಿಗೆ ಆದ್ಯತೆ ನೀಡಲಾಗುವುದು.

ಬಿತ್ತನೆಯಾದ ನಂತರ ರೈತ ಸಂಪರ್ಕ ಕೇಂದ್ರದಸಹಾಯಕ ಕೃಷಿ ಅಧಿಕಾರಿ ಹೊಲಕ್ಕೆ ಭೇಟಿ ನೀಡಿ ಜಿಪಿಎಸ್ ಆಧಾರಿತ ಫೋಟೊ ತೆಗೆದು ಯೋಜನೆಯ ವೆಬ್ ಸೈಟಿಗೆ ಅಳವಡಿಸುತ್ತಾರೆ.ನಂತರ ಸರ್ಕಾರ ಡಿಬಿಟಿ ಮೂಲಕ ರೈತರ ಖಾತೆಗೆ ನೇರವಾಗಿ ಪ್ರೋತ್ಸಾಹ ಹಣವನ್ನು ಎರಡು ಕಂತುಗಳನ್ನು ಜಮೆ ಮಾಡುತ್ತದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

Leave a Comment