2022-23ನೇ ಸಾಲಿನಲ್ಲಿ ಜಮೀನು ಇಲ್ಲದ ರೈತ ಮಹಿಳಿಯರಿಗೆ ಭೂ ಒಡೆತನ ಯೋಜನೆಯಡಿಯಲ್ಲಿ ಜಮೀನು ಖರೀದಿಗೆ 7.50 ಲಕ್ಷ ರೂಪಾಯಿ ಸಹಾಯಧನ ನೀಡಲು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಕನಿಷ್ಠ 2 ಎಕರೆ ಖುಷ್ಕಿ ಅಥವಾ ಒಂದು ಎಕರೆ ತರಿ ಅಥವಾ ಕನಿಷ್ಟ ½ ಎಕರೆ (20 ಗುಂಟೆ) ಭಾಗಾಯ್ತು ಜಮೀನನ್ನು ಅಥವಾ ಘಟಕ ವೆಚ್ಚಕ್ಕೆ ಲಭ್ಯವಾಗುವಷ್ಟು ಜಮೀನನ್ನುಖರೀದಿಸಿ ನೋಂದಣಿ ಮಾಡಿಕೊಡಲಾಗುವುದು.
ನಿಗಮದಿಂದ ಸಹಾಯಧನದೊಂದಿಗೆ ಸಾಲವನ್ನು ಮಂಜೂರು ಮಾಡಿ ಭೂರಹಿತ ಕೃಷಿ ಕಾರ್ಮಿಕ ಮಹಿಳೆಯರಿಗೆ ಜಮೀನನ್ನು ಖರೀದಿಸಿ ಕೊಡಲಾಗುವುದು. ಘಟಕ ವೆಚ್ಚ 15 ಲಕ್ಷ ರೂಪಾಯಿಗಳಾಗಿದ್ದು, ಈ ಪೈಕಿ 7.50 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಉಳಿದ 7.50 ಲಕ್ಷ ರೂಪಾಯಿಯನ್ನು ಸಾಲ ನೀಡಲಾಗುವುದು. ಈ ಸಾಲದ ಮೊತ್ತಕ್ಕೆ ಶೇ. 6 ರ ಬಡ್ಡಿ ದರದಲ್ಲಿ 20 ಅರ್ಧ ವಾರ್ಷಿಕ ಕಂತುಗಳಲ್ಲಿ ಮರುಪಾವತಿಸಬೇಕಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ 20 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಭೂ ಒಡೆತನ ಯೋಜನೆಯಡಿ ನಿಗಮಗಳಿಂದ ನಿಮಗಕ್ಕೆ ಘಟಕವೆಚ್ಚ ಅಲ್ಪ ಬದಲಾವಣೆ ಇರಲಿದೆ. ಇದರ ಕುರಿತು ರೈತರು ಆಯಾ ನಿಗಮದಲ್ಲಿ ವಿಚಾರಿಸಬಹುದು.
ಅರ್ಹತೆಗಳು
ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರು ಭೂ ರಹಿತ ಕೃಷಿ ಕಾರ್ಮಿಕ ಕುಟುಂಬದವರಾಗಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು/ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಸರ್ಕಾರಿ ಅರೆ ಸರ್ಕಾರಿ ನೌಕರಿಯಲ್ಲಿರಬಾರದು.
ಯಾರು ಅರ್ಜಿ ಸಲ್ಲಿಸಲು ಅರ್ಹರು?
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಮಗ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಭೂ ಒಡೆತನ ಯೋಜನೆಯೊಂದಿಗೆ ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆ ನಿಯಮಗಳು
ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ 1.50 ಲಕ್ಷ ಹಾಗೂ ನಗರ ಪ್ರದೇಶಗಳಿಗೆ 2 ಲಕ್ಷ ಮಿತಿಯೊಳಗಿರಬೇಕು. ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡುಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದುಪಡಿಸಲಾಗುತ್ತದೆ.
ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು ಯಾವುವು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಆಧಾರ್ ಕಾರ್ಡ್ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು) ಕೃಷಿ ಕಾರ್ಮಿಕರ ದೃಢೀಕರಣ ಪತ್ರ ಹೊಂದಿರಬೇಕು.
ಅರ್ಜಿ ಎಲ್ಲಿ ಲಭ್ಯವಿರುತ್ತದೆ?
ಅರ್ಜಿಗಳು ಸೇವಾ ಸಿಂಧು ಪೋರ್ಟಲ್
https://sevasindhu.karnataka.gov.in/sevasindhu/Kannada
ನಲ್ಲಿ ಲಭ್ಯವಿರುತ್ತದೆ. ಅರ್ಜಿದಾರರು ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಎಲ್ಲಿ ಸಂಪರ್ಕಿಸಬೇಕು?
ಆಯಾ ನಿಗಮದ ಅಡಿಯಲ್ಲಿ ಬರುವವರು ಅಂದರೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಆಯಾ ನಿಗಮದ ಕಚೇರಿಗೆ ಸಂಪರ್ಕಿಸಬಹುದು. ಅಥವಾ ಕಲ್ಯಾಣ ಮಿತ್ರ ಎಸ್.ಸಿ. ಎಸ್.ಟಿ ಸಹಾಯವಾಣಿ 9482300400 ಗೆ ಸಂಪರ್ಕಿಸಬಹುದು.
ಇದನ್ನೂ ಓದಿ : ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಜಮೆ: ಇಲ್ಲಿದೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಲಾಗಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕಾಗುತ್ತದೆ.