ಬೆಳೆ ವಿಮೆ ಮಾಡಿಸಿದ ನಂತರ ರೇತರೇನು ಮಾಡಬೇಕು?

Written by Ramlinganna

Updated on:

Farmer What to do after crop insurance ಬೆಳೆ ವಿಮೆ ಮಾಡಿಸುವ ರೈತರಿಗೆ ಕೆಲವು ಮಾಹಿತಿ ಗೊತ್ತಿರಲೇಬೇಕು. ಕೇವಲ ಬೆಳೆ ವಿಮೆ ಮಾಡಿಸುವುದರಿಂದ ಬೆಳೆ ವಿಮೆ ಹಣ ಜಮೆಯಾಗುವುದಿಲ್ಲ. ಬೆಳೆ ವಿಮೆ ಮಾಡಿಸುವ ರೈತರಿಗೆ ಯಾವ ಯಾವ ಮಾಹಿತಿ ಗೊತ್ತಿರಬೇಕು? ಬೆಳೆ ವಿಮೆ ಮಾಡಿಸಿದ ನಂತರ ರೈತರೇನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

Farmer What to do after crop insurance ಬೆಳೆ ವಿಮೆ ಮಾಡಿಸಿದ ನಂತರ ರೈತರೇನು ಮಾಡಬೇಕು?

ಬೆಳೆ ವಿಮೆ ಮಾಡಿಸಿದ ರೈತರು ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾಳಾದರೆ ಯಾವ ವಿಮಾ ಕಂಪನಿಗಳಿಗೆ ಬೆಳೆ ವಿಮೆ ಮಾಡಿಸಿದ್ದಾರೋ ಆ ವಿಮಾ ಕಂಪನಿಗೆ 72 ಗಂಟೆಯೊಳಗೆ ಕರೆ ಮಾಡಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಹಾಳಾದ ಕುರಿತು ಪರಿಶೀಲನೆ ನಡೆಸುತ್ತಾರೆ. ಯಾವ ಪ್ರಮಾಣದಲ್ಲಿ ಬೆಳೆ ಹಾಳಾಗಿದೆಯೋ ಎಂಬುದನ್ನು ಪರಿಶೀಲಿಸಿ ರೈತರಿಗೆ ಪರಿಹಾರ ನೀಡಲು ಮೇಲಧಿಕಾರಿಗಳ ಗಮನಕ್ಕೆ ತರುತ್ತಾರೆ. ಮೇಲಧಿಕಾರಿಗಳು  ಕೆಲವು ದಿನಗಳ ನಂತರ ರೈತರ ಖಾತೆಗೆ ಬೆಳೆ ವಿಮೆ ಹಣ ಜಮೆ ಮಾಡುತ್ತಾರೆ.

ಬೆಳೆ ವಿಮೆ ಯಾವ ಕಂಪನಿಗೆ ಪಾವತಿಸಿದ್ದಾರೆ ಚೆಕ್ ಮಾಡಿ

ರೈತರು ಬೆಳೆ ವಿಮೆ ಮಾಡಿಸುತ್ತಾರೆ. ಆದರೆ ಯಾವ ಕಂಪನಿಗೆ ಬೆಳೆ ವಿಮೆ ಹಣ ಪಾವತಿಸಿರುತ್ತಾರೋ ಎಂಬ ಬಗ್ಗೆಮಾಹಿತಿ ಇರುವುದಿಲ್ಲ. ಅಂತಹ ರೈತರು ಈ ಲಿಂಕ್ ಮೇಲೆ

https://www.samrakshane.karnataka.gov.in/HomePages/frmKnowYourInsCompany.aspx

ಕ್ಲಿಕ್ ಮಾಡಬೇಕು. ಆಗ ಕರ್ನಾಟಕ ರಾಜ್ಯದಲ್ಲಿ ಯಾವ ಜಿಲ್ಲೆಗೆ ಯಾವ ಬೆಳೆ ವಿಮಾ ಕಂಪನಿಯನ್ನು ನಿಯೋಜಿಸಲಾಗಿದೆ ಎಂಬ ಪಟ್ಟಿ ಕಾಣುತ್ತದೆ.

ಉಚಿತ ಸಹಾವಾಣಿ ನಂಬರಿಗೆ ಕರೆ ಮಾಡಿ

ಬೆಳೆ ವಿಮೆ ಮಾಹಿತಿ ಪಡೆಯಲು ಹಾಗೂ ತಮ್ಮ ಜಿಲ್ಲೆಯ ಬೆಳೆ ವಿಮಾ ಕಂಪನಿಯ ಸಿಬ್ಬಂದಿ ಮೊಬೈಲ್ ನಂಬರ್ ಬೇಕಾದರೆ 1800180 1551 ಉಚಿತ ಸಹಾವಾಣಿ ನಂಬರಿಗೆ ಕರೆ ಮಾಡಬಹುದು.

ಬೆಳೆ ವಿಮೆ ಮಾಡಿಸಿದ ಮಾತ್ರಕ್ಕೆ ಬೆಳೆ ವಿಮೆ ಹಣ ಜಮೆಯಾಗಲ್ಲ

ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಕಂತು ಕಟ್ಟಿದ ಮಾತ್ರಕ್ಕೆ ಬೆಳೆ ವಿಮೆ ಹಣ ಜಮೆಯಾಗುವುದಿಲ್ಲ. ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆಯು ಪ್ರಕೃತಿ ವಿಕೋಪದಿಂದಾಗಿ ಅಂದರೆ ಅತೀವೃಷ್ಟಿ, ಅಕಾಲಿಕ ಮಳೆ, ಆಲಿಕಲ್ಲು ಮಳೆ, ಭೂ ಕುಸಿತ, ಪ್ರವಾಹದಿಂದಾಗಿ ಬೆಳೆ ಮುಳುಗಡೆಯಾದಲ್ಲಿ ನಷ್ಟಕ್ಕನುಗುಣವಾಗಿ ಬೆಳೆ ವಿಮಾ ನಷ್ಟ ಪರಿಹಾರ ನೀಡಲಾಗುವುದು.

ಇದನ್ನೂ ಓದಿ ಯಾವ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗುತ್ತದೆ? ಯಾರಿಗೆ ಜಮೆಯಾಗಲ್ಲ?

ಬೆಳೆ ಕಟಾವಿನ ನಂತರ ಬೆಳೆ ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಚಂಡಮಾರುತ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದಾಗಿ ಬೆಳೆ ಹಾಳಾದರೆ ಪ್ರತ್ಯೇಕವಾಗಿ ನಷ್ಟ ನಿರ್ಧಾರ ಮಾಡಿ ಪರಿಹಾರ ನೀಡಲಾಗುವುದು.

ಬೆಳೆ ಸಮೀಕ್ಷೆ ಮಾಡಿಸಬೇಕು

ರೈತರು ಬೆಳೆ ವಿಮೆ ಮಾಡಿಸಿದ ನಂತರ ಹಿಂಗಾರು ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ಮಾಹಿತಿ ಅಪ್ಲೋಡ್ ಮಾಡಬೇಕು. ಒಂದು ವೇಳೆ ನೀವು ಮೊಬೈಲ್ ನಲ್ಲಿ ಮಾಹಿತಿ ಅಪ್ಲೋಡ್ ಮಾಡಲು ಸಮಸ್ಯೆಯಾಗುತ್ತಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮಾಡಿಸಬಹುದು.

ಬೆಳೆ ವಿಮೆ ಎಲ್ಲಿ ಮಾಡಿಸಬೇಕು?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಹಿಂಗಾರು ಬೆಳೆಗಳ ವಿಮೆ ಮಾಡಿಸಲು ಈಗಾಗಲೇ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.  ಬೆಳೆ ಸಾಲ ಪಡೆಯದೆ ಇರುವ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಲು ಹತ್ತಿರದ ಬ್ಯಾಂಕುಗಳಾಗಲಿ, ಗ್ರಾಮ ಒನ್ ಕೇಂದ್ರಗಳಾಗಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬೇಕು.   ವಿಮೆ ಮಾಡಿಸಲು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ ನೀಡಬೇಕು. ಬ್ಯಾಂಕ್ ಪಾಸ್ ಬುಕ್ ಪ್ರತಿ ನೀಡಬೇಕು ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿಯೊಂದಿಗೆ ನೀವು ಯಾವ ಬೆಳೆಗೆ ವಿಮೆ ಮಾಡಿಸುತ್ತಿದ್ದೀರೋ ಆ ಬೆಳೆ ವಿಮೆಯ ಕಂತನ್ನು  ಪಾವತಿಸಬೇಕು.

Leave a Comment