ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ

Written by By: janajagran

Updated on:

PradhanMantri Matyasa Sampada Yojana ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ 2021-22ನೇ ಸಾಲಿನ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಡಿ ಬಾಕಿ ಉಳಿದಿರುವ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಮೈಸೂರು ಜಿಲ್ಲೆಯ ರೈತರಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಶೇ. 40  ರಷ್ಟು , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶೇ 60 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮೀನುಮರಿ ಪಾಲನಾ ಕೊಳಗಳ ನಿರ್ಮಾಣ, ಬಯೋಫ್ಲಾಕ್ ಕೊಳಗಳ ನಿರ್ಮಾಣ, ಮಧ್ಯಮ ಆರ್.ಎ.ಎಸ್ ಘಟಕ ಸ್ಥಾಪನೆ, ಸಣ್ಣ ಆರ್.ಎ.ಎಸ್ ಘಟಕ ಸ್ಥಾಪನೆ, 10 ಟನ್ ಸಂಗ್ರಹ ಸಾಮರ್ಥ್ಯದ ಶಾಖ ನಿರೋಧಕ ವಾಹನ ಪೆಟ್ಟಿಗೆಯೊಂದಿಗೆ ಸೈಕಲ್ ಮತ್ತು ಜೀವಂತ ಮೀನು ಮಾರಾಟ ಕೇಂದ್ರ ಇತರ ಯೋಜನೆಗಳಿಗೆ ಸಾಮಾನ್ಯವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ. 40 ರಷ್ಟು ಹಾಗೂ ಎಸ್.ಸಿ ಅಥವಾ ಎಸ್.ಟಿ ಅಥವಾ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ. 60 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತರು ಇದೇ ಮೇ 31 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೈಸೂರಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮೊ. 94485 00695, ನಂಜನಗೂಡು 97313 57199. ನರಸಿಪುರ 94482 73093, ಹುಣಸೂರು 99022 03684, ಪಿರಿಯಾಪಟ್ಟಣ 78920 28415, ಎಚ್.ಡಿ ಕೋಟೆ 94485 02697, ಕೆ.ಆರ್.ನಗರ 78290 28415 ಮೀನುಗಾರಿಕೆ ಉಪನಿರ್ದೇಶಕರು 98809 23401 ಅನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PradhanMantri Matyasa Sampada Yojana ಏನಿದು ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ?

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಮಗ್ರ ಮೀನುಗಾರಿಕೆ ಅಭಿವೃದ್ಧಿ ಮತ್ತು ನಿರ್ವಹಣೆ ಎಂಬ ಮಹತ್ವಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಮೀನುಗಾರಿಕೆ ವಲಯದ ಮತ್ತು ಮೀನುಗಾರರ ಸಾಮಾಜಿಕ ಮತ್ತು ಆರ್ಥಿಕ ಸರ್ವತೋಮುಖ ಅಭಿವೃದ್ಧಿಗಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಕರಾವಳಿ ಮೀನುಗಾರಿಕೆ ಮೂಲಭೂತ ಸೌಲಭ್ಯ ಮತ್ತು ಹಿಡುವಳಿ ನಂತರದ ಕಾರ್ಯಚರಣೆ ಅಭಿವೃದ್ಧಿ, ಮೀನಗಾರಿಕೆ ವಲಯದ ದತ್ತಾಂಶ ಹಾಗೂ ಭೂಶಾಸ್ತ್ರ ಮಾಹಿತಿ ವ್ಯವಸ್ಥೆಯನ್ನು ಬಲಪಡಿಸುವುದು.

ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಂದಲೂ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿಘಟಕಗಳ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ಈ ರೈತರೇಕೆ ಪಿಎಂ ಕಿಸಾನ್ ಯೋಜನೆಯ ಪಟ್ಟಿಯಿಂದ ಹೊರಗುಳಿಯಲಿದ್ದಾರೆ? ಇಲ್ಲಿದೆ ಮಾಹಿತಿ

ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರ ಮತ್ತು ಮನೋರಂಜನೆ ಮೀನುಗಾರಿಕೆ ಅಭಿವೃದ್ಧಿ  ಮತ್ತು ಮೀನುಗಾರಿಕೆ ನಿರ್ವಹಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರನ್ನುಸಂಪರ್ಕಿಸಲು  ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಬಳಿ ಆಧಾರ್ ಕಾರ್ಡ್ ಇರಬೇಕು. ಮೊಬೈಲ್ ನಂಬರ್ ಹಾಗೂ ಜಮೀನಿನ ಪಹಣಿ ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿಯ ಜೊತೆ ಇನ್ನಿತರ ದಾಖಲೆಗಳನ್ನು ಸಲ್ಲಿಸಬೇಕು.

Leave a Comment