ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ.
ಹೌದು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಅಲೆಮಾರಿ ಅರೆ ಅಲೆಮಾರಿ ಸೂಕ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಅನುಷ್ಠಾನ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಐ.ಎಸ್.ಬಿ ಯೋಜನೆ ಎಂಸಿಎಫ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಮತ್ತು ಭೂ ಒಡೆತನ ಯೋಜನೆಗಳಡಿ 2022-23ನೇ ಸಾಲಿನ ಗುರಿ ಅರ್ಹ ಫಲಾಫೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಎಲ್ಲಿ ಸಲ್ಲಿಸಬೇಕು?
ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಫೇಕ್ಷಿಗಳು ಗ್ರಾಮ-1, ಕರ್ನಾಟಕ ಒನ್, ಸೇವಾ ಸಿಂಧುವಿನಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.
ಆನಲೈನ್ ನಲ್ಲಿ ಅರ್ಜಿ ಸಲ್ಲಿಸಲಿಚ್ಚಿಸುವವರು ಈ
https://sevasindhu.karnataka.gov.in/sevasindhu/Kannada
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸೇವಾ ಸಿಂಧು ಪೋರ್ಟಲ್ ಓಪನ್ ಆಗುತ್ತದೆ. ಅಲ್ಲಿ ಅರ್ಜಿ ಸಲ್ಲಿಸಬಹುದು.
ಯಾವ ಯೋಜನೆಗೆ ಎಷ್ಟು ಸಬ್ಸಿಡಿ?
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ ಸಣ್ಣ ಆದಾಯಗಳಿಸುವ ಆರ್ಥಿಕ ಚಟುವಟಿಕೆಗಳಿಗಾಗಿ ಘಟಕ ವೆಚ್ಚ ಗರಿಷ್ಠ 1 ಲಕ್ಷ ರೂಪಾಯಿಯರವಗೆ ಸಾಲ ಸೌಲಭ್ಯ ನೀಡಲಾಗುವುದು. ಇದರದಲ್ಲಿ 50 ಸಾವಿರ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.
ಐ.ಎಸ್.ಬಿ ಚುಟವಟಿಕೆಗಳಿಗಾಗಿ ಗರಿಷ್ಠ 2 ಲಕ್ಷ ರೂಪಾಯಿಯವರೆಗೆ ಸಹಾಯಧನನೀಡಲಾಗುವುದು.ಉಳಿದ ಹಣವನ್ನು ಬ್ಯಾಂಕಿನಿಂದ ಸಾಲ ನೀಡಲಾಗುವುದು.
ಸರಕು ಸಾಗಾಣಿಕೆ ವಾಹನ ಖರೀದಿಗೆ ಗರಿಷ್ಠ 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಉಳಿದ ಮೊತ್ತವನ್ನು ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲಾಗುವುದು.
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣಮತ್ತು ಅತೀ ಸಣ್ಣ ರೈತರು ಹೊಂದಿರುವ ಖುಷ್ಕಿ, ಒಣ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.
ಭೂ ಒಡೆತನ ಯೋಜನೆಯಡಿ ಮಹಿಳಾ ಕಾರ್ಮಿಕರಿಗೆ ಕನಿಷ್ಠ ಖುಷ್ಕಿ 2.00 ತರಿ, 1.00 ಹಾಗೂ ಭಾಗಾಯ್ತು 0.20 ಎಕರೆ ಜಮೀನನ್ನು ಅಥವಾ ಘಟಕ ವೆಚ್ಚದಲ್ಲಿ ಗರಿಷ್ಠ ಎಷ್ಟು ಎಕರ ವಿಸ್ತೀರ್ಣ ಬರುತ್ತದೆಯೋ ಅಷ್ಟು ಜಮೀನನ್ನು ಖರೀದಿಸಿ ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳು ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ ಎಸ್.ಟಿ ಸಹಾಯವಾಣಿ 9482 300 400 ಗೆ ಸಂಪರ್ಕಿಸಬಹುದು.
ಅರ್ಹತೆಗಳು
ಫಲಾನುಭವಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಫಲಾಪೇಕ್ಷಿಯ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ 1.50 ಲಕ್ಷ ಹಾಗೂ ನಗರ ಪ್ರದೇಶವಾದಲ್ಲಿ 2 ಲಕ್ಷ ಮಿತಿಯೊಳಗಿರಬೇಕು. ಫಲಾಫೇಕ್ಷಿಯು ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಅರೆ ,ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
ಇದನ್ನೂ ಓದಿ : ಬೆಳೆ ವಿಮೆ ಪರಿಹಾರ 2022 ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ಈ ಹಿಂದೆ ನಿಗಮದ ವತಿಯಿಂದ ಸೌಲಭ್ಯ ಪಡೆದಿರಬಾರದು. ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಸಣ್ಣ ಮತ್ತುಅತೀ ಸಣ್ಣ ರೈತರಾಗಿರಬೇಕು. ವಾಹನ ಖರೀದಿಗಾಗಿ ಆರ್ಥಿಕ ನೆರವು ಬಯಸುವ ಫಲಾಪೇಕ್ಷಿಯು ಡ್ರೈವಿಂಗ್ ಲೈಸನ್ಸ್ ನೊಂದಿಗೆ ಬ್ಯಾಡ್ಜ್ ಹೊಂದಿರಬೇಕು. ಸ್ವಯಂ ಉದ್ಯೋಗ ಯೋಜನೆಯಡಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸುವವರು 21 ರಿಂದ 50 ವರ್ಷದೊಳಗಿರಬೇಕು. ಭೂ ಒಡೆತನ ಯೋಜನೆಯಡಿ ಅರ್ಜಿ ಸಲ್ಲಿಸುವವರು 18 ರಿಂದ 50 ವರ್ಷದೊಳಗಿರಬೇಕು.ಗಂಗಾ ಕಲ್ಯಾಣ, ವಾಹನ ಖರೀದಿಗೆ ಅರ್ಜಿ ಸಲ್ಲಿಸುವವರು 18 ರಿಂದ 80 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಈ ದಾಖಲೆ ಬೇಕು?
ಆಧಾರ್ ಕಾರ್ಡ್ ಹೊಂದಿರಬೇಕು. ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಇರಬೇಕು. ಜಾತಿ ಪ್ರಮಾಣ ಪತ್ರದ ದೃಢೀಕರಣ ಪ್ರತಿ, ಕುಟುಂಬದ ವಾರ್ಷಿಕ ವರಮಾನ ಪತ್ರದ ದೃಢೀಕರಣ ಪ್ರತಿ ಸೇರಿದಂತೆ ಇನ್ನಿತರ ದಾಖಲೆ ಹೊಂದರಿಬೇಕು.