ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯ ವತಿಯಿಂಂದ ಸೋಲಾರ ಪಂಪ್, ನೀರು ಸಂಗ್ರಹಣ ಘಟಕ ಸೇರಿದಂತೆ ಇನ್ನಿತರ ಚಟುವಟಿಕೆಗೆ ಶೇ. 50 ರವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2022-23ನೇ ಸಾಲಿನ ತೋಟಗಾರಿಕೆ ಇಲಾಖೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು ಮತ್ತು ತೋಟಗಾರಿಕೆ ಬೆಳೆಗಳ ರೋಗ ಮತ್ತು ಕೀಟ ನಿಯಂತ್ರಣ ಯೋಜನೆಯಡಿ ಸಸ್ಯ ಸಂರಕ್ಷಣಾ ಔಷಧಿ ಖರೀದಿ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಗುಡಿಬಂಡೆ ತೋಟಗಾರಿಕೆ ಕಚೇರಿಯಲ್ಲಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗ ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಇತರೆ ರೈತರಿಗೆ ಶೇ. 40 ರಷ್ಟು ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ದೂರವಾಣಿ ಸಂಖ್ಯೆಗಳಾದ ಹಿರಿಯ ಸಹಾಯಕ ನಿರ್ದೇಶಕರು, ಗುಡಿಬಂಡೆ 8147464177, ಸಹಾಯಕ ತೋಟಗಾರಿಕೆ ನಿರ್ದೇಶಕರು, ಗುಡಿಬಂಡೆ 9844864957, ಸಹಾಯಕ ತೋಟಗಾರಿಕೆ ಅಧಿಕಾರಿ ಕಸಬಾ, ಸೋಮೇನಹಳ್ಳಿ ಹಾಗೂ ರೈತ ಸಂಪರ್ಕ ಕೇಂದ್ರ ಗುಡಿಬಂಡೆ 9108909416, 9008794259 ಗೆ ಸಂಪರ್ಕಿಸಬಹುದೆಂದು ಗುಡಿಬಂಡೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅರ್ಜಿ ಆಹ್ವಾನ
ಪ್ರಸಕ್ತ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳಾದ ನೀರು ಸಂಗ್ರಹಣಾ ಘಟಕ, ಸೋಲಾರ್ ಪಂಪ್ ಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಬೆಳಗಾವಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೋಹಕ ಕೀಟ ಬಲೆಗಳು, ಜಿಗುಟಾದ ಬಲೆಗಳ ಖರೀದಿಗೆ ಸಹಾಯಧನ ನೀಡಲಾಗುವುದು. ಇದರೊಂದಿಗೆ ತೋಟಗಾರಿಕೆ ಬೆಳೆಗಳ ಬೇಸಾಯದಲ್ಲಿ ಉಪಯೋಗಿಸುವ ಅನುಮೋದಿತ ಯಂತ್ರೋಪಕರಣ ಖರೀದಿಗೆ ಸಹಾಯಧನ ಕಾರ್ಯಕ್ರಮಗಳು ಅನುಮೋದನೆ ಆಗಿರುತ್ತದೆ. ಆಸಕ್ತ ತೋಟಗಾರಿಕೆ ಬೆಳೆಗಾರರು ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕೆಂದು ಬೆಳಗಾವಿ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೋಟಗಾರಿಕೆ ಇಲಾಖೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ಯೋಜನೆಯಡಿ ಮೋಹಕ ಕೀಟ ಬಲೆಗಳು, ಜಿಗೋಟಾದ ಬಲೆಗಳು, ಸೌರಶಕ್ತಿ ಆಧಾರಿತ ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಪ್ಲಾಸ್ಟಿಕ್ ಕ್ರೇಟ್ಸ್, ಪುನೇಟ್ ಬಾಕ್ಸ್, ಕೋರ್ ಗೇಟೆಡ್ ಬಾಕ್ಸ್, ಬೆಳೆ, ಹಣ್ಣು, ಹೂ ಹೊದಿಕೆ, ಮೇಲಾವರಣ ನಿರ್ಮಾಣ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಮೇಲೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಅರ್ಜಿಗಳನ್ನು ಡಿಸೆಂಬರ್15 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ರೈತರು ಹೋಬಳಿ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಾದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾಪಂಚಾಯತ) ಗುಡಿಬಂಡೆ 8147464177, ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ) ಗುಡಿಬಂಡೆ 9844864957 ಗೆ ಸಂಪರ್ಕಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಏನೇನು ದಾಖಲೆ ಬೇಕು?
ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಪಡೆಯಲು ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಆರ್.ಡಿ. ಸಂಖ್ಯೆಯಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ರೈತರ ಸ್ವಂತ ಜಮೀನು ಇರುವ ಪಹಣಿ (ಆರ್.ಟಿಸಿ) ಇರಬೇಕು. ಬ್ಯಾಂಕ್ ಪಾಸ್ ಬುಕ್ ಪ್ರತಿ ಇರಬೇಕು. ಇನ್ನೂ ಅಗತ್ಯ ದಾಖಲೆಗಳನ್ನು ಹತ್ತಿರದ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಹಿರಿತನದ ಆಧಾರದ ಮೇಲೆ ಲಭ್ಯತೆಗನುಗುಣವಾಗಿ ರೈತರಿಗೆ ಸಹಾಯಧನ ನೀಡಲಾಗುವುದು.