krishi sinschayi scheme 2023-24 ನೇ ಸಾಲಿನ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತೂರು ನೀರಾವರಿ ಘಟಕಗಳನ್ನು ಅಳವಡಿಸಲು ಬಯಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರೈತರು ಆಧಾರ್ ಕಾರ್ಡ್, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ಲಗತ್ತಿಸಬೇಕು. 20 ರೂಪಾಯಿ ಛಾಪಾ ಕಾಗದ (ನೋಟರಿಯೊಂದಿಗೆ) ಬ್ಯಾಂಕ್ ಪಾಸ್ ಬುಕ್, ಆರ್.ಟಿಜಿಎಸ್ ಪತ್ರಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ರೈತ ಬಾಂಧವರಲ್ಲಿಕೋರಲಾಗಿದೆ. ಲಾಭ ಪಡೆಯಲು ರೈತರು ಕಡ್ಡಾಯವಾಗಿ ಫ್ರೂಟ್ಸ್ ಐಡಿಯನ್ನು ಹೊಂದಿರಬೇಕು.ರೈತರು ಈಗಾಗಲೇ ಫ್ರೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಫ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.
krishi sinschayi scheme ತುಂತುರು ನೀರಾವರಿ ಘಟಕಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರೈತರಿಂದ ತುಂತುರು ನೀರಾವರಿ ಘಟಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : ಗ್ರಾಮ ಪಂಚಾಯತ್ ನ ಮಾಹಿತಿ ಮೊಬೈಲ್ ನಲ್ಲೇ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಕೃಷಿ ಇಲಾಖೆಯಲ್ಲಿ ಅಟಲ್ ಭೂಜಲ ಯೋಜನೆಯಡಿ ಸಾಮಾನ್ಯ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಹಾಗೂ ಪ್ರಧಾನ ಮಂತ್ರಿ ಕೃಷಿ ಸಿಂಚನ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗಕ್ಕೆ ಶೇ. 90 ರಷ್ಟು ಸಹಾಯಧನದಲ್ಲಿ ತುಂತುರು ನೀರಾವರಿ ಘಟಕ (ಸ್ಪಿಂಕ್ಲರ್ ಸೆಟ್) ದೊರೆಯುತ್ತದೆ. ಈ ಸೌಲಭ್ಯ ಪಡೆಯಲು ರೈತರು ಅರ್ಜಿ, ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, 2 ಪಾಸ್ ಪೋರ್ಟ್ ಸೈಜ್ ಫೋಟೋ,20 ರೂಪಾಯಿ ಛಾಪಾ ಕಾಗದ ದೊಂದಿಗೆ ಅರ್ಜಿ ಸಲ್ಲಿಸಿ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರ ಎಸ್. ಶಶಿಧರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸೂಕ್ಷ್ಮ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ
ರೋಣ ಮತ್ತು ಗಜೇಂದ್ರಗಡ ತಾಲೂಕಿನ ರೈತ ಬಾಂಧವರಿಗೆ 2023-24ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ ಕೃಷಿ ಇಲಾಖೆಯಿಂದ ತುಂತುರು ನೀರಾವರಿ ಹಾಗೂ ಹನಿ ನೀರಾವರಿ ಘಟಕಗಳ್ನು ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಘಟಕಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಶೇ. 90 ರಷ್ಟು ಸಹಾಯಧನದಡಿ (ಪ್ರತಿ ಹೆಕ್ಟೇರ್ ಗೆ ರೈತರು ವಂತಿಕೆ 63 ಎಂಎಂಗೆ 4139 ಹಾಗೂ 75 ಎಂಎಂಗೆ 4667) ನೀರಾವರಿ ಘಟಕ ವಿತರಣೆಗೆ ಅರ್ಜಿ ಕರೆಯಲಾಗಿದೆ.
ಇದನ್ನೂ ಓದಿ : ಬರ ಪರಿಹಾರ 2 ಸಾವಿರ ರೂಪಾಯಿ ಬಿಡುಗಡೆ: ಯಾವ ಬೆಳೆಗೆ ಎಷ್ಟು ಜಮೆ? ಇಲ್ಲಿದೆ ಮಾಹಿತಿ
ಆದ್ದರಿಂದ ಆಸಕ್ತ ರೈತರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬೇಕು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ರವೀಂದ್ರಗೌಡ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಂತುರು ನೀರಾವರಿ ಪೈಪುಗಳ ವಿತರಣೆ
ಚಾಮರಾಜನಗರಜಿಲ್ಲೆಯ ಯಳಂದೂರು ತಾಲೂಕಿನ ರೈತರಿಂದಲೂ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ನೀರಿನ ಸಮರ್ಥ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಕೃಷಿ ಇಲಾಖೆ ವತಿಯಿಂದ ತುಂತುರು ನೀರಾವರಿ ಘಟಕದಡಿ ಎಲ್ಲಾ ವರ್ಗದ ರೈತರುಗಳಿಗೆ ಶೇ. 90 ರಷ್ಟು ಸಹಾಯಧನದಲ್ಲಿ ಎಚ್.ಡಿಪಿಇ ಪೈಪುಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಕೃಷಿ ಸಯಾಕ ನಿರ್ದೇಶಕ ಅಮೃತೇಶ್ ತಿಳಿಸಿದ್ದಾರೆ.
2.5 ಇಂಚು ಪೈಪು 1 ಹೆಕ್ಟೇರ್ ವರೆಗೂ 4667 ರೂಪಾಯಿ , 2 ಹೆಕ್ಟೇರ್ ವರೆಗೆ 6580 ರೂಪಾಯಿ ಹಾಗೂ 2 ಇಂಚು ಪೈಪು 1 ಎಕರೆ 2496 ರೂಪಾಯಿ 1 ಹೆಕ್ಟರ್ ವರೆಗೆ 4139ರೂಪಾಯಿ 2 ಹೆಕ್ಟೇರ್ ವರೆಗೂ 5772 ರೂಪಾಯಿ ರೈತರ ವಂತಿಕೆಯನ್ನು ನಿಗದಿಪಡಿಸಲಾಗಿದೆ. ಆದಕ್ಕಾರಣ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ಅರ್ಜಿ ಪಡೆದು ದಾಖಲಾತಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.