ಬಗರ್ ಹುಕುಂ ಅಡಿ ಈ ರೈತರಿಗೆ ನೀಡಲಾಗುವುದು ಸಾಗುವಳಿ ಚೀಟಿ

Written by Ramlinganna

Published on:

Farmers Bagar  hokum land : ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಪೈಕಿ ಕನಿಷ್ಠ 5000 ಜನರ ಅರ್ಜಿಗಳನ್ನಾದರೂ ಕಮಿಟಿ ಎದುರು ಮಂಡಿಸಿ ಡಿಸೆಂಬರ್ 15 ರೊಳಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದು ಕೃಷ್ಣ ಭೈರೇಗೌಡ ಭರವಸೆ ನೀಡಿದ್ದಾರೆ.

ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಕೃಷಿ ಮಾಹಿತಿ ಪಡೆಯಿರಿ

ರಾಜ್ಯಾದ್ಯಂತ ಲಕ್ಷಾಂತರ ಜನ ರೈತರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಪೈಕಿ 1,26,000 ಅರ್ಜಿಗಳನ್ನು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ. ಕೆಲ ಜಿಲ್ಲೆಗಳ ಅರ್ಜಿಗಳನ್ನು ಈಗಾಗಲೇ ಬಗರ್ ಹುಕುಂ ಸಮಿತಿ ಎದುರು ಇಡಲಾಗಿದೆ. ಆದರೆ ಆ ಸಂಖ್ಯೆ ಸಮಾಧಾನಕರವಾಗಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಗುರಿ ನಿಗದಿಪಡಿಸಲಾಗಿದೆ ಎಂದರು.

ಬಗರ್ ಹುಕುಂ ಫಲಾನುಭವಿಗಳಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡಲಾಗುವುದು.ಯೋಜನೆಯಡಿ ರೈತರಿಗೆ ಮಂಜೂರಾಗುವ ಜಮೀನಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಕಿಂಚಿತ್ತೂ ತಕರಾರು ಬರಬಾರದು. ಕಡತ ಕಳೆದು ಹೋಯ್ತು ಎಂದು ರೈತರು ಮತ್ತೆ ಸರ್ಕಾರಿ ಕಚೇರಿಗೆ ಅಲೆಯಬಾರದು ಎಂಬ ಉದ್ದೇಶದಿಂದ ಅರ್ಹ ಫಲಾನುಭವಿಗಳ ಅರ್ಜಿಗಳು ಮಂಜೂರಾದ ಜಮೀನಿಗೆ ಪೋಡಿಯೂ ಮಾಡಿ ಪಹಣಿಯಲ್ಲಿ ಹೆಸರನ್ನು ನಮೂದಿಸಿ ಸ್ವತ ತಹಶೀಲ್ದಾರರು ನೋಂದಣಿ ಕಚೇರಿಯಲ್ಲಿ ಜಮೀನಿನ ನೋಂದಣಿ ಮಾಡಿಸಿ ರೈತರಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಮೊದಲು ಗ್ರಾಮ ಆಡಳಿತ ಅಧಿಕಾರಿ ಅರ್ಜಿದಾರರ ಸ್ಥಳ ಪರಿಶೀಲಿಸಬೇಕು. ನಂತರ ಕಂದಾಯ ನಿರೀಕ್ಷಕರು ಹಾಗೂ ತಹಶೀಲ್ದಾರ ವರದಿ ಸಲ್ಲಿಸಬೇಕು. ಈ ಎಲ್ಲಾ ಪ್ರಕ್ರಿಯೆಗಳ ನಂತರವೇ ಅರ್ಜಿಗಳನ್ನುಬಗರ್ ಹುಕುಂ ಸಮಿತಿ ಎದರು ಮಂಡಿಸಲು ಸಾಧ್ಯ. ಈ ಕೆಲಸಗಳು ಸಮಯಾವಕಾಶ ಬೇಡುವಂತಹದ್ದಾಗಿದ್ದು, ಅಧಿಕಾರಿಗಳಿಗೆಮೊದಲ ಹಂತದಲ್ಲಿ 5000 ಅರ್ಜಿಗಳ ಗುರಿ ನೀಡಿದ್ದು, ಈ ಗುರಿ 15 ರಿಂದ 20 ಸಾವಿರಕ್ಕೆ ಏರಿಕೆಯಾಗಲಿದೆ.

Farmers Bagar  hokum land ಅಭಿಯಾನ ಮಾದರಿಯಲ್ಲಿ ಪೋಡಿ ದುರಸ್ತಿ

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೆ ನಂಬರ್ ಇದ್ದು, ನಾನಾ ಸರ್ಕಾರಿಯೋಜನೆಗಳಡಿ ಕಳೆದ 30 ರಿಂದ 40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನುಮಂಜೂರಾಗಿದೆ. ಆದರೆ 30 ರಿಂದ 40 ವರ್ಷವಾಗಿದ್ದರೂಜಮೀನಿಗೆ ಪೋಡಿ ದುರಸ್ತಿ ಆಗಿಲ್ಲ. ದಾಖಲೆಪಕ್ಕಾ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿ ಷ್ಠ 25 ಲಕ್ಷ ಇರಬಹುದು. ಪಕ್ಕಾ ಪೋಡಿ ದುರಸ್ತಿ ಮಾಡಲು ನಮೂನೆ 1ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರಲಭ್ಯವಾಗಿಲ್ಲ ಎಂದು ವಿಷಾಧಿಸಿದರು.

ಒಂದು ವರ್ಷಗಳಿಂದ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸತತ ಸಭೆ ನಡೆಸಿ, ಚರ್ಚಿಸಿ ಕೊನೆಗೂ ನಮೂನೆ 1 ರಿಂದ 5 ಪೋಡಿ ದುರಸ್ತಿ ಕೆಲಸವನ್ನು ಸರಳೀಕರಣಗೊಳಿಸಿ ಇದೀಗ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಆನ್ಲೈನ್ ನಲ್ಲಿ ಡಿಜಿಟಲ್ ಪ್ರಕ್ರಿಯೆಗಾಗಿ ಆ್ಯಪ್ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ನಿಮ್ಮ ಜಮೀನಿನ ಪಹಣಿಯಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ

ನಿಮ್ಮ ಪಹಣಿಯಲ್ಲಿ ನಿಮ್ಮ ಹೆಸರಿದೆಯೇ  ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://landrecords.karnataka.gov.in/Service2/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಕಂದಾಯ ಇಲಾಖೆಯ ಭೂಮಿ ಆನ್ಲೈನ್ ಲ್ಯಾಂಡ್ ರಿಕಾರ್ಡ್ ಪೇಜ್ ಕಾಣಿಸುತ್ತದೆ.  ಅಲ್ಲಿ ನಿಮಗೆ ಕಾಣುವ ಪೇಜ್ ನಲ್ಲಿ close ಮೇಲೆ ಕ್ಲಿಕ್ ಮಾಡಬೇಕು ಆಗ ನಿಮಗೆ ಪಹಣಿಯಲ್ಲಿ ನಿಮ್ಮಪೇಜ್ ಕಾಣಿಸುತ್ತದೆ.  ನಿಮಗೆ current year, Old year, MR, Mutation Status, Khata Extract, Survey Document ಹಾಗೂ akarband ಹೀಗೆ ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು current year   ನಲ್ಲಿ ನಿಮ್ಮ ಜಿಲ್ಲೆ ನಿಮ್ಮ ತಾಲೂಕು ನಿಮ್ಮ ಹೋಬಳಿ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಆ ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು.  ನಂತರ Go  ಮೇಲೆ ಕ್ಲಿಕ್ ಮಾಡಬೇಕು. ಸರ್ನೋಕ್ ನಲ್ಲಿ ಸ್ಟಾರ್ * ಆಯ್ಕೆ ಮಾಡಿಕೊಳ್ಳಬೇಕು. ಹಿಸ್ಸಾ ನಂಬರ್ ನಲ್ಲಿ ನಿಮ್ಮ ಹಿಸ್ಸಾ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಿಮಗೆ ಹಿಸ್ಸಾ ನಂಬರ್ ಗೊತ್ತಿಲ್ಲದಿದ್ದರೆ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Period ನಲ್ಲಿ ನೀವು ಯಾವ ವರ್ಷದಿಂದ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಅದನ್ನುಆಯ್ಕೆ ಮಾಡಿಕೊಳ್ಳಬೇಕು. ನಂತರ  Year ನಲ್ಲಿಯೂ ಯಾವ ವರ್ಷದಿಂದ  ಹಳೆಯ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಆ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ Fetch details ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ಬೆಳೆ ಹಾನಿಯಾದ ಈ ರೈತರ ಖಾತೆಗೆ ವಾರದೊಳಗೆ ಪರಿಹಾರ ಜಮೆ

ಆಗ ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿ ಯಾವ ಯಾವ ಜಮೀನಿನ ಮಾಲಿಕರು ಇದ್ದಾರೆ ಅವರ ಹೆಸರು ಕಾಣಿಸುತ್ತದೆ. ಅದರ ಎದುರುಗಡೆ ಖಾತಾ ನಂಬರ್ ಸಹ ಇರುತ್ತದೆ.  ಅದರ ಮುಂದುಗಡೆ  View ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅದೇ ನಿಮ್ಮ ಪಹಣಿಯಾಗಿರುತ್ತದೆ.

Leave a Comment