farmers children reservation increase 2021-2022ನೇ ಸಾಲಿನ ಬಜೆಟ್ ನಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತ ಮಕ್ಕಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ. 40 ರಿಂದ ಶೇ. 5೦ಕ್ಕೆ ಹೆಚ್ಚಿಸಲಾಗಿದೆ. ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಕೃಷಿ ಪದವಿ ಪಡೆಯಲು ಈವರೆಗೆ ಶೇಕಡಾ 40ರಷ್ಟು ಸೀಟುಗಳನ್ನು ಮಾತ್ರ ನೀಡಲಾಗುತ್ತಿತ್ತು. ಈ ಬಾರಿಯ ಬಜೆಟ್ನಲ್ಲಿ ಈ ಮಿತಿಯನ್ನು ಶೇಕಡಾ 50ಕ್ಕೆ ಹೆಚ್ಚಳ (Farmer’s children reservation Increase to 50) ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.
farmers children reservation increase ಸಾವಯವ ಕೃಷಿಗೆ 500 ಕೋಟಿ
ಸಾವಯವ ಕೃಷಿಗೆ 500 ಕೋಟಿ ರೂಪಾಯಿ ಯೋಜನೆಯನ್ನು ರೂಪಿಸಲು ಮುಂದಾಗಿದ್ದಾರೆ. ಜನರಿಗೆ ಆರೋಗ್ಯಕರ ಮತ್ತು ರಾಸಾಯನಿಕಮುಕ್ತ ಉತ್ಪನ್ನಗಳನ್ನು ದೊರಕಿಸಿಕೊಡಲು ಸಹಕಾರಿಯಾಗಲಿದೆ. ಸಾವಯವ ಮತ್ತು ಸಿರಿಧಾನ್ಯಗಳನ್ನು ವೈಜ್ಞಾನಿಕ ಬೆಲೆಯಲ್ಲಿ ಮಾರಾಟ ಮಾಡಲು ಹಾಗೂ ರೈತರಿಗೆ ಗರಿಷ್ಠ ಬೆಲೆ ದೊರಕಿಸಿಕೊಡಲು ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ
ಮಹಿಳೆಯರಿಗೆ ಬಂಪರ್ ಕೊಡುಗೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಡಿಸಿದ 2021-2022ನೇ ಸಾಲಿನ ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ಇದನ್ನೂ ಓದಿ ನಿಮ್ಮ ಜಮೀನಿನ ಹಳೆಯ ಪಹಣಿ ಇಲ್ಲೇ ಚೆಕ್ ಮಾಡಿ
ವಾ ವಲಯದ ಮಹಿಳಾ ಉದ್ಯಮಿಗಳಿಗೆ ಶೇ. 4 ರ ರಿಯಾಯಿತಿ ಬಡ್ಡಿದರದಲ್ಲಿ ಸಾಲ, ಮಹಿಳಾ ಅಭಿವೃದ್ಧಿ ನಿಗಮ, ಕರ್ನಾಟಕ ಹಣಕಾಸು ಸಂಸ್ಥೆಯಿಂದ 2 ಕೋಟಿ ರೂಪಾಯಿಯವರೆಗೆ ಸಾಲ ಸೌಲಭ್ಯ ನೀಡಲಾಗುವುದು ಎಂದು ಬಜೆಟ್ನಲ್ಲಿ ಮಂಡನೆಯಲ್ಲಿ ತಿಳಿಸಿದ್ದಾರೆ.
ಟ್ರ್ಯಾಕ್ಟರ್ ಸಹಾಯಧನ ಹೆಚ್ಚಳ
ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ನೀಡುವ ಸಹಾಯಧನವನ್ನು 25-45 ಪಿಟಿಒ ಎಚ್.ಪಿ ಟ್ರ್ಯಾಕ್ಟರಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.
ಮೀನುಗಾರಿಕೆಗೆ ಬೈಕ್ ಖರೀದಿಗೆ ಸಹಾಯಧ ನೀಡಲು ಅರ್ಜಿ ಆಹ್ವಾನ
ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಯ್ಸ ಸಂಪದ ಯೋಜನೆಯಡಿ ಮೀನು ಕೃಷಿ ಕೊಳ ನಿರ್ಮಿಸಲು ಮತ್ತು ಮೀನು ಕೃಷಿ ಹೂಡಿಕೆ ವೆಚ್ಚಗಳಿಗೆ ಉಪ ನಿರ್ಮಿಸಿ ಕಾರ್ಯರೂಪಕ್ಕೆ ತರಲು ಆಸಕ್ತಿ ಹೊಂದಿರುವ ವ್ಯಕ್ತಿಗಳಿಂದ ಸಹಾಯಧನ ಪಡೆಯಲು ಧಾರವಾಡ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ ವರ್ಗಕ್ಕೆ ಸಹಾಯಧನ ಪ್ಮಾಣ ಯೋಜನಾ ವೆಚ್ಚದಶೇ. 40 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳಾ ವರ್ಗಕ್ಕೆ ಶೇ. 60 ರಷ್ಟಿದೆ. ಜಿಲ್ಲಾ ವಲಯ ಮತ್ತು ರಾಜ್ಯ ವಲಯದ ಯೋಜನೆಗಳಾದ ಮೀನುಗಾರಿಕೆ ಸಲಕರಣೆಗಳ ಕಿಟ್, ಹರಿಗೋಲು ವಿತರಿಸುವ ಯೋಜನೆ, ಮೀನು ಮಾರಾಟಕ್ಕೆ ಅಗತ್ಯವಿರುವ ದ್ವಿಚಕ್ರ ವಾಹನ ಮತ್ತು ಶಾಖ ನಿರೋಧಕ ಪೆಟ್ಟಿಗೆ ಖರೀದಿಸಲು ಸಹಾಯಧನ ಯೋಜನೆ, ಮೀನು ಮರಿ ಖರೀದಿಗೆ ಸಹಾಯಧನ ನೀಡಲಾಗುವುದು. ಕೃಷಿ ಹೊಂಡಗಳಿಗೆ ಮೀನುಮರಿ ಪೂರೈಕೆ, ಹುಲ್ಲುಗೆಂಡೆ, ಮೀನುಮರಿ ಪೂರೈಕೆ, ಮೀನುಗಾರಿಕೆ ತರಬೇತಿ ಮುಂತಾದ ಯೋಜನೆಗಳಡಿಯಲ್ಲಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836 2447416, 984367267, 9448907603 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.