2021-2022ನೇ ಸಾಲಿನ ಬಜೆಟ್ ನಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತ ಮಕ್ಕಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ. 40 ರಿಂದ ಶೇ. 5೦ಕ್ಕೆ ಹೆಚ್ಚಿಸಲಾಗಿದೆ. ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಕೃಷಿ ಪದವಿ ಪಡೆಯಲು ಈವರೆಗೆ ಶೇಕಡಾ 40ರಷ್ಟು ಸೀಟುಗಳನ್ನು ಮಾತ್ರ ನೀಡಲಾಗುತ್ತಿತ್ತು. ಈ ಬಾರಿಯ ಬಜೆಟ್‌ನಲ್ಲಿ ಈ ಮಿತಿಯನ್ನು ಶೇಕಡಾ 50ಕ್ಕೆ ಹೆಚ್ಚಳ (Farmer’s children reservation Increase to 50) ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಸಾವಯವ ಕೃಷಿಗೆ 500 ಕೋಟಿ

ಸಾವಯವ ಕೃಷಿಗೆ 500 ಕೋಟಿ ರೂಪಾಯಿ ಯೋಜನೆಯನ್ನು ರೂಪಿಸಲು ಮುಂದಾಗಿದ್ದಾರೆ. ಜನರಿಗೆ ಆರೋಗ್ಯಕರ ಮತ್ತು ರಾಸಾಯನಿಕಮುಕ್ತ ಉತ್ಪನ್ನಗಳನ್ನು ದೊರಕಿಸಿಕೊಡಲು ಸಹಕಾರಿಯಾಗಲಿದೆ. ಸಾವಯವ ಮತ್ತು ಸಿರಿಧಾನ್ಯಗಳನ್ನು ವೈಜ್ಞಾನಿಕ ಬೆಲೆಯಲ್ಲಿ ಮಾರಾಟ ಮಾಡಲು ಹಾಗೂ ರೈತರಿಗೆ ಗರಿಷ್ಠ ಬೆಲೆ ದೊರಕಿಸಿಕೊಡಲು ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ

ಮಹಿಳೆಯರಿಗೆ ಬಂಪರ್ ಕೊಡುಗೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಡಿಸಿದ 2021-2022ನೇ ಸಾಲಿನ ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸೇವಾ ವಲಯದ ಮಹಿಳಾ ಉದ್ಯಮಿಗಳಿಗೆ ಶೇ. 4 ರ ರಿಯಾಯಿತಿ ಬಡ್ಡಿದರದಲ್ಲಿ ಸಾಲ, ಮಹಿಳಾ ಅಭಿವೃದ್ಧಿ ನಿಗಮ, ಕರ್ನಾಟಕ ಹಣಕಾಸು ಸಂಸ್ಥೆಯಿಂದ 2 ಕೋಟಿ ರೂಪಾಯಿಯವರೆಗೆ ಸಾಲ ಸೌಲಭ್ಯ ನೀಡಲಾಗುವುದು ಎಂದು ಬಜೆಟ್ನಲ್ಲಿ ಮಂಡನೆಯಲ್ಲಿ ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಸಹಾಯಧನ ಹೆಚ್ಚಳ

ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ನೀಡುವ ಸಹಾಯಧನವನ್ನು 25-45 ಪಿಟಿಒ ಎಚ್.ಪಿ ಟ್ರ್ಯಾಕ್ಟರಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *