ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ಹೇಗೆ ನಿರ್ಧರಿಸುತ್ತಾರೆ? ಬೆಳೆ ಯಾವ ಪ್ರಮಾಣದಲ್ಲಿ ನಷ್ಟವಾಗಿದೆ ಎಂಬುದನ್ನು ಗಮನಿಸಿ ಎಷ್ಟು ಪರಿಹಾರ ನೀಡಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ರೈತರು ತಮ್ಮ ಬೆಳೆಗೆ ವಿಮೆ ಮಾಡಿಸಿದ ನಂತರ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲ ಶೇ. 75 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮೆ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮೆ ನಷ್ಟ ಪರಿಹಾರ ನೀಡಲಾಗುವುದು. ಒಂದು ವೇಳೆ ಬೆಳೆ ಬಿತ್ತನೆ ನಂತರ ಕಟಾವು ಹಂತದವರೆಗಿನ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲೆ ಬೆಳೆ ನಷ್ಟವಾದರೆ ಮುಂಚಿತವಾಗಿ ಅಂದಾಜಿಸಲಾದ ನಷ್ಟ ಪರಿಹಾರದಲ್ಲಿ ಶೇ. 25 ರಷ್ಟು ಪರಿಹಾರ ಹಣ ನೀಡಲಾಗುವುದು.
ಬೆಳೆ ಯಾವುದರಿಂದ ಹಾನಿಯಾದರೆ ಪರಿಹಾರ ನೀಡಲಾಗುವುದು?
ಬೆಳೆ ವಿಮೆ ಮಾಡಿಸಿದ ರೈತರ ಬೆಳೆಯು ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಗುಡುಗು ಮಿಂಚಿನಿಂದಾಗಿ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ವೈಯಕ್ತಿಕ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.
ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟವಾದರೆ ಬೆಳೆ ವಿಮೆ ಮಾಡಿಸಿರುವ ರೈತರುಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು. ಮತ್ತು ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರವನ್ನು ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.
ಇದನ್ನೂಓದಿ : ರೈತರು ತಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲೇ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ (ಹದಿನಾಲ್ಕು ದಿನ) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮೆ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನುಇತ್ಯರ್ಥಪಡಿಸಲಾಗುವುದು. ಇಂತಹ ಸ್ಥಳೀಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟವಾದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮಾ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.
ಯಾವ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿದೆ?
ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುವುದು. ತದನಂತರ ಬೆಳೆ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೆ ಇದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ವಿಮಾ ಯೋಜನೆಯಿಂದ ಕೈಬಿಡಲಾಗುವುದು.
ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಬೆಳೆ ವಿಮೆ ಮಾಡಿಸಬಹುದು.
ನಿಮ್ಮ ಜಿಲ್ಲೆಗೆ ಯಾವ ಇನ್ಸುರೆನ್ಸ್ ಕಂಪನಿಯಿದೆ ಹಾಗೂ ಅವರ ಮೊಬೈಲ್ ನಂಬರ್ ತಿಳಿದುಕೊಳ್ಳಬೇಕಾದರೆ ರೈತರು 1800 180 1551 ಗೆ ಕರೆ ಮಾಡಿ ವಿಚಾರಿಸಬಹುದು. ಈ ಉಚಿತ ಸಹಾವಾಣಗೆ ರೈತರು ಬೆಳಗ್ಗೆ 9 ರಿಂದ ಸಾಯಂಕಾಲ 5ರೊಳಗೆ ಕರೆ ಮಾಡಬಹುದು.
ಕಲಬುರಗಿ ಜಿಲ್ಲೆಯ ರೈತರು ಬೆಳೆ ವಿಮಾ ಕುರಿತು ವಿಚಾರಿಸಲು ಮೊ. 9535557509, 8867508750, 8147603315, ಅಫಜಲ್ಪೂರ ತಾಲೂಕಿನ ರೈತರು 9902356434, ಆಳಂದ ತಾಲೂಕಿನ ರೈತರು 9702944943, ಚಿಂಚೋಳಿ ತಾಲೂಕಿನರೈತರು 8095384057, ಕಮಲಾಪೂರ ತಾಲೂಕಿನ ರೈತರು 7259754689, ಯಡ್ರಾಮಿ ತಾಲೂಕಿನ ರೈತರು 9880222988, ಚಿತ್ತಾಪೂರ ತಾಲೂಕಿನ ರೈತರು 7996369510, ಜೇವರ್ಗಿ ತಾಲೂಕಿನ ರೈತರು 9845661193, ಸೇಡಂ ತಾಲೂಕಿನ ರೈತರು 7204579007 ಹಾಗೂ ಕಾಳಗಿ ತಾಲೂಕಿನ ರೈತರು 9000481448 ಗೆ ಕರೆ ಮಾಡಬಹುದು.