ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ.
ಹೌದು ಈ ಯೋಜನೆಯಡಿಯಲ್ಲಿ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 3 ಲಕ್ಷ ರೂಪಾಯಿಯವರೆಗೆ ಅತೀ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬಹುದು. ಈ ಸಾಲದ ಹಣವನ್ನು ರೈತರು ಕೃಷಿಗೆ ಸಂಬಂಧಿಸಿದ ಸಾಮಾಗ್ರಿಗಳು ಅಂದರೆ ಬೀಜ, ಗೊಬ್ಬರ ಸೇರಿದಂತೆ ಇನ್ನತಿರ ಉಪಕರಣಗಳ ಖರೀದಿಗೆ ಅತೀ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಕಿಸಾನ್ ಕ್ರೆಡಿಟ್ ಕಾರ್ಡ್ ಯಾವ ರೈತರಿಗೆ ಹೇಗೆ ನಿಡಲಾಗುವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಯಾವ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬಹುದು?
ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಂಡ ಎಲ್ಲಾ ರೈತ ಫಲಾನುಭವಿಗಳು ಅರ್ಹರಾಗಿರುತ್ತಾರೆ. ಇದರೊಂದಿಗೆ ಹಿಡುವಳಿ ರೈತರು, ರೈತ ಸ್ವಸಹಾಯ ಗುಂಪುಗಳು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 3 ಲಕ್ಷ ರೂಪಾಯಿಯವರೆಗೆ ಸಾಲ ಪಡೆಯಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ರೈತರು 1.60 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿಯವರೆಗೆ ಸಾಲ ಪಡೆಯಬಹುದು. ಸಾಲದ ಹಣದಲ್ಲಿ ರೈತರು ಬೀಜ, ರಾಸಾಯನಿಕಗಳಉ ಹಾಗೂ ಕೃಷಿ ಉಪಕರಣಗಳನ್ನು ಖರೀದಿಸಬಹುದು. ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಸಾಲ ನೀಡಲಾಗುವುದು. ನೀಡಲಾಗುವುದು.ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಬಡ್ಡಿದರಗಳ ಮೇಲೆ ಸಬ್ಸಿಡಿ ನೀಡಲಾಗುವುದು. ಸಾಲ ಮೂರು ವರ್ಷಗಳ ಅವಧಿಗೆ ಲಭ್ಯವಿರುತ್ತದೆ.
ಇದನ್ನೂ ಓದಿ : ಸರ್ವೆ ನಂಬರ್ ಹಾಕಿ ನಿಮ್ಮ ಜಮೀನಿನ ಈ ದಾಖಲೆಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ? ಇಲ್ಲಿದೆ ಮಾಹಿತಿ
ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅಱ್ಜಿ ಸಲ್ಲಿಸಿದ ನಂತರ ಕಾರ್ಡ್ ನ್ನು ಎರಡರಿಂದ ನಾಲ್ಕು ವಾರಗಳಲ್ಲಿ ಕ್ರೆಡಿಟ್ ಕಾರ್ಡ್ ಅನುಮೋದಿಸಲಾಗುವುದು. ಉತ್ತಮ ಕ್ರೆಡಿಟ್ ಸ್ಕೋರ್ ಇದ್ದ ರೈತರಿಗೆ 3 ಲಕ್ಷ ರೂಪಾಯಿಯವರೆಗೆ ಸಾಲ ನೀಡಲಾಗುವುದು. ಬಡ್ಡಿ ದರವು ಬ್ಯಾಂಕಿನಿಂದ ಬ್ಯಾಂಕಿಗೆ ಬದಲಾಗುತ್ತದೆ. ಕನಿಷ್ಟ ಬಡ್ಡಿ ದರವು ಕೇವಲ 7 ಪ್ರತಿಶತವಾಗಿರುತ್ತದೆ. ಇದಕ್ಕೆ ಶೇ. 3 ರಷ್ಟು ಬಡ್ಡಿ ರಿಯಾಯಿತಿ ಲಭ್ಯವಿದೆ. ಐದು ವರ್ಷಗಳಲ್ಲಿ ಸಾಲ ಮರುಪಾವತಿ ಮಾಡಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಸಹಾಯದಿಂದ ರೈತರು ಕೃಷಿ, ಪಶುಸಂಗೋಪನೆ, ಹೈನುಗಾರಿಕೆ, ಮತ್ತು ಮೀನುಗಾರರು ಸಾಲ ಪಡೆಯಬಹುದು.
ಅರ್ಜಿದಾರರು ಕೆಸಿಸಿ ಅರ್ಜಿ ಆನ್ಲೈನ್ ನಲ್ಲಿ ಪಡೆಯುವುದು ಹೇಗೆ?
ಅರ್ಜಿದಾರರು ಆನ್ಲೈನ್ ನಲ್ಲಿ ಕೆಸಿಸಿ ಅರ್ಜಿ ಪಡೆಯಲು ಈ
https://pmkisan.gov.in/Documents/Kcc.pdf
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕೆಸಿಸಿ ಪಾರ್ಮ್ ಓಪನ್ ಆಗುತ್ತದೆ. ಅದನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಹತ್ತಿರದ ಬ್ಯಾಂಕಿನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ದೇಶದಲ್ಲಿ ಈಗಾಗಲೇ ಹಲವಾರು ರೈತರು ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಅಂತಹ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಸಹ ಪಡೆಯಬಹುದು. ಈ ಯೋಜನೆಯಡಿಯಲ್ಲಿ ಲಭ್ಯವಿರುವ ಸಾಲದ ಬಡ್ಡಿ ದರವು ಇತರ ಸಾಲಗಳ ಬಡ್ಡಿ ದರಕ್ಕಿಂತ ತುಂಬಾ ಕಡಿಮೆ ಇರುತ್ತದೆ.
ಯಾವ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಅರ್ಹರು?
ಅರ್ಜಿದಾರರು ಭಾರತದ ನಿವಾಸಿಯಾಗಿರಬೇಕು. ಬೇರೆಯವರ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರೂ ಈ ಕಾರ್ಡ್ ದಿಂದ ಸಾಲ ಪಡೆಯಬಹುದು. ಈ ಕಾರ್ಡ್ ಪಡೆಯಲು ಅರ್ಜಿದಾರರ ವಯಸ್ಸು 18 ರಿಂದ 75 ವಯೋಮಾನದೊಳಗಿರಬೇಕು.
ರೈತರ ಬಳಿ ಈ ದಾಖಲೆ ಇರಬೇಕು
ರೈತರು ಸಾಗುವಳಿ ಮಾಡುವ ಜಮೀನಿನ ದಾಖಲೆಗಳನ್ನು ಹೊಂದಿರಬೇಕು. ಗುರುತಿನ ಚೀಟಿ ಅಂದರೆ ಆಧಾರ್ ಕಾರ್ಡ್ ಅಥವಾ ಚುನಾವಣಾ ಗುರುತಿನ ಚೀಟಿ ಹೊಂದಿರಬೇಕು. ಜಮೀನಿನ ಆರ್.ಟಿ.ಸಿ ಪ್ರತಿ ಇರಬೇಕು. ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಪಾಸ್ ಪೋರ್ಟ್ ಸೈಜಿನ ಫೋಟೋ ಇರಬೇಕು. ಬ್ಯಾಂಕ್ ಪಾಸ್ ಬುಕ್ ಪ್ರತಿ ಇರಬೇಕು. ಅರ್ಜಿದಾರರು ಯಾವುದೇ ಬ್ಯಾಂಕಿನಲ್ಲಿ ಸಾಲ ಪಡೆದಿಲ್ಲವೆಂದು ಅಫಿಡಿವೆಟ್ ಪಡೆದುಕೊಳ್ಳಬೇಕು.