ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲೆಂದು  ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣಗಳನ್ನು ನೀಡಲು ರಾಜ್ಯ ಸರ್ಕಾರವು ರೈತರಿಗಾಗಿ ಕೃಷಿ ಯಾಂತ್ರಿಕರಣ ಯೋಜನೆಯನ್ನು ಆರಂಭಿಸಿದೆ.

ಕಾರ್ಮಿಕರ ಸಮಸ್ಯೆಯನ್ನು ನೀಗಿಸಿ, ಕೃಷಿ ಚಟುವಟಿಕೆಗಳ ಶ್ರಮದಾಯಕ ದುಡಿಮೆಯನ್ನು ತಗ್ಗಿಸಿ, ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಈ ಯೋಜನೆಯಡಿ ಸಾಮಾನ್ಯ ರೈತರಿಗೆ ಶೇ. 50 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಉಳಿಮೆಯಿಂದ ಕೊಯ್ಲುವರೆಗೆ ಉಪಯುಕ್ತವಿರುವ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ರೈತರಿಗೆ ನೀಡಲಾಗುವುದು.

ಕೃಷಿಯಲ್ಲಿ ತೊಡಗಿರುವ ರೈತರಿಗೆ ಆರ್ಥಿಕ ಸಮಸ್ಯೆಯಿಂದಾಗಿ ದುಬಾರಿ ಬೆಲೆಯ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಸರ್ಕಾರವು ರೈತರ ಆರ್ಥಿಕ ಸಹಾಯಕ್ಕಾಗಿ ಈ ಯೋಜನೆ ಆರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಸಾಮಾನ್ಯ ರೈತರಿಗೆ ಸಣ್ಣ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಭೂಮಿ ಸಿದ್ದತೆ ಉಪಕರಣಗಳು, ನಾಟಿ/ಬಿತ್ತನೆ ಉಪಕರಣಗಳು, ಕುಯ್ಲು ಮತ್ತು ಉಪಕರಣಗಳು, ಡಿಸೆಲ್ ಪಂಪ್ ಸೆಟ್ ಹಾಗೂ ಅಂತರ ಬೇಸಾಯ ಉಪಕರಣಗಳನ್ನು ಸಹಾಯಧನದಲ್ಲಿ ನೀಡಲಾಗುವುದು. ಈ ಯೋಜನೆಯಡಿಯಲ್ಲಿ 2 ಲಕ್ಷ ರೂಪಾಯಿಯವರೆಗೆ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗುವುದು.

ಎಷ್ಟು ರೂಪಾಯಿಯವರೆಗೆ ಸಬ್ಸಿಡಿ ಸಿಗುತ್ತದೆ?

ಸಾಮಾನ್ಯ ವರ್ಗದ ರೈತರಿಗೆ ಶೇ. 50 ರಷ್ಟು ಸಹಾಯಧನವನ್ನು ಗರಿಷ್ಠ ಮಿತಿ 1 ಲಕ್ಷ ರೂಪಾಯಿಯವರೆಗೆ ಸಣ್ಣ ಟ್ರ್ಯಾಕ್ಟರ್ ಗಳಿಗೆ 75 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. 5 ಲಕ್ಷ ರೂಪಾಯಿಯವರೆಗೆ ಕೃಷಿ ಉಪಕರಣಗಳನ್ನು ನೋಂದಾಯಿತ ರೈತ ಗುಂಪುಗಳಿಗೆ ಹಾಗೂ ಎಲ್ಲಾ ತರಹದ ಉಪಕರಣಗಳನ್ನು ಬಾಡಿಗೆ ಆಧಾರಿತ ಸೇವಾ ಕೇಂದ್ರಗಳಿಗೆ ಒದಗಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಸಣ್ಣ ಟ್ರ್ಯಾಕ್ಟರ್ ಗಳಿಗೆ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ಹಾಗೂ ಉಳಿದ ಕೃಷಿ ಉಪಕರಣಗಳಿಗೆ ಶೇ. 90 ರಷ್ಟು ಸಹಾಯಧನವನ್ನು ಗರಿಷ್ಠ 1 ಲಕ್ಷ ರೂಪಾಯಿಯವರೆಗೆ ನೀಡಲಾಗುತ್ತಿದೆ.

ಇದನ್ನೂ ಓದಿ :ಕೃಷಿ ಇಲಾಖೆಯಿಂದ ರೈತರಿಗೆ ಯಾವ ಯಾವ ಸೌಲಭ್ಯಗಳು ಸಿಗುತ್ತದೆ ನಿಮಗೆ ಗೊತ್ತೇ..? ಇಲ್ಲಿದೆ ಸಂಪೂರ್ಣ ಮಾಹಿತಿ

ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲಿಚ್ಚಿಸುವ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿರುವ ಯಂತ್ರೋಪಕರಣಗಳ ಸೌಲಭ್ಯ ಪಡೆಯಬಹುದು. ಜೇಷ್ಠತನ ಆಧಾರದ ಮೇಲೆ ಅನುದಾನ ಲಭ್ಯತೆ ಮೇರೆಗೆ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗುವುದು.

ಬೇಕಾಗುವ ದಾಖಲೆಗಳು

ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲೆಂದು ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ನೀಡಲು ರಾಜ್ಯ ಸರ್ಕಾರವು ರೈತರಿಗಾಗಿ ಕೃಷಿ ಯಾಂತ್ರಿಕರಣ ಯೋಜನೆಯನ್ನು ಆರಂಭಿಸಲಾಗಿದೆ.

ರೈತರು ಯಾವ ಕೃಷಿ ಯಂತ್ರೋಪಕರಣಕ್ಕೆ ಅರ್ಜಿ ಸಲ್ಲಿಸಬಯಸುತ್ತೀರೋ ಎಂಬುದರ ಕುರಿತು ಅರ್ಜಿ ಸಲ್ಲಿಸಬೇಕು.  ಕೆ-ಕಿಸಾನ್ ನಲ್ಲಿ ಆನ್ ಲೈನ್ ನಲ್ಲಿ ನೋಂದಣಿ ಪ್ರತಿ (ಎಫ್ ಐಡಿ  ಸಂಖ್ಯೆಯೊಂದಿಗೆ) ರೈತರು ಆಧಾರ್ ಕಾರ್ಡ್ ಹೊಂದಿರಬೇಕು. ಜಮೀನಿ ಪಹಣಿ ಸೇರಿದಂತೆ ಜಮೀನಿನ ಜಮಾಬಂಧಿ, ಬ್ಯಾಂಕ್ ಖಾತೆ ವಿವರ, ಪಾಸ್ ಪೋರ್ಟ್ ಅಳತೆಯ ಫೋಟೋ ಇರಬೇಕು. ರೈತರ ಬ್ಯಾಂಕ್ ಪಾಸ್ ಬುಕ್ ನಲ್ಲಿ ರೈತರ ವಂತಿಕೆ ಸರಬರಾಜು ಸಂಸ್ಥೆಗೆ  ಆರ್.ಟಿ.ಜಿ.ಎಸ್  ಜಮವಾಣೆಯಾದ ಝಾರಾಕ್ಸ್ ಪ್ರತಿ,  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸೇರಿದಂತೆ ಅಗತ್ಯ ದಾಖಲೆಗಳನ್ನು ರೈತ ಸಂಪರ್ಕ ಕೇಂದ್ರ ಕಚೇರಿಯಲ್ಲಿ ವಿಚಾರಿಸಿ ನೀಡಬೇಕು.

ಯಾವ ಯಾವ ಉಪಕರಣಗಳು ಸಿಗುತ್ತವೆ?

ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಸಣ್ಣ ಟ್ರ್ಯಾಕ್ಟರ್, ಟಿಲ್ಲರ್, ಟ್ರ್ಯಾಕ್ಟರ್ ಟ್ರ್ಯಾಲಿ, ಕ್ರಾಪ್ ರೀಪರ್, ಪೋಸ್ಟ ಹೋಲ್ ಡಿಗ್ಗರ್, ಪಾವರ್ ವೀಡರ್, ರೈಸ್ ಟ್ರಾನ್ಸ್ ಪ್ಲೆಟರ್,  ಕೊಯ್ಲು ಒಕ್ಕಣೆಗಳು, ಅಂತರ ಬೇಸಾಯ ಉಪಕರಣಗಳು ಸೇರಿದಂತೆ ಇನ್ನಿತರ ಉಪಕರಣಗಳು ಸಿಗುತ್ತವೆ,

ಇದನ್ನೂ ಓದಿ ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ, ಎತ್ತಿನಬಂಡಿ ದಾರಿ, ಸರ್ವೆನಂಬರ್, ಊರಿನ ಮ್ಯಾಪ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹೋಬಳಿಯಲ್ಲಿ ಲಭ್ಯವಿರುವ ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆಯಲು ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು. ಲಭ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ಪಡೆಯಬಹುದು.

Leave a Reply

Your email address will not be published. Required fields are marked *