ರೈತರಿಗಿಲ್ಲಿದೆ ಸಂತಸದ ಸುದ್ದಿ. ನೀರಾವರಿ ಮಾಡಲಿಚ್ಚಿಸುವ ರೈತರಿಗೆ ಬೋರ್ವೆಲ್ ಕೊರೆದು ಪೈಪ್ ಲೈನ್ ಅಳವಡಿಸಲು ಸಹಾಯಧನ ನೀಡುವುದಕ್ಕಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸಣ್ಣ ಮತ್ತು ಅತೀ ಸಣ್ಣರೈತರು ತಮ್ಮಜಮೀನಿನಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಸಬ್ಸಿಡಿ ಪಡೆಯಬಹುದು. ಹಾಗಾದೆ ಯಾವ ರೈತರು ಅರ್ಜಿ ಸಲ್ಲಿಸಬೇಕು? ರೈತರು ಅರ್ಜಿ ಎಲ್ಲಿ ಸಲ್ಲಿಸಬೇಕು? ರೈತರಿಗೆ ಏನೇನು ಸೌಲಭ್ಯ ನೀಡಲಾಗುವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೊಳವೆ ಬಾವಿ ಕೊರೆಯಲು ಎಷ್ಟು ಸಬ್ಸಿಡಿ ನೀಡಲಾಗುವುದು?

ಕೊಳವೆ ಬಾವಿ ಕೊರೆಯಲು ಘಟಕ ವೆಚ್ಚ 4 ಲಕ್ಷ ರೂಪಾಯಿಯಾಗಿದ್ದರೆ ಇದರಲ್ಲಿ 3.50 ಲಕ್ಷ ರೂಪಾಯಿ ರೈತರಿಗೆ ಸಬ್ಸಿಡಿ ನೀಡಲಾಗುವುದು. ಉಳಿದ ಹಣ ಅಂದರೆ 50 ಸಾವಿರ ರೂಪಾಯಿಯನ್ನು ಶೇ. 4 ರ ಬಡ್ಡಿ ದರದಲ್ಲಿ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲಾಗುವುದು. ಕೊಳವೆ ಬಾವಿ ಕೊರೆಯಲು ಘಟಕ ವೆಚ್ಚ 2.50 ಲಕ್ಷ ರೂಪಾಯಿಗಳಾಗಿದ್ದರೆ ಇದರಲ್ಲಿ 2 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುವುದು.ಉಳಿದ 50 ಸಾವಿರ ರೂಪಾಯಿಯನ್ನು ಬ್ಯಾಂಕಿನಿಂದ ಸಾಲ ನೀಡಲಾಗುವುದು.

ರೈತರು ಅರ್ಜಿ ಎಲ್ಲಿ ಸಲ್ಲಿಸಬೇಕು?

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲಿಚ್ಚಿಸುವ ರೈತರು ಸೇವಾಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಸೇವಾ ಕೇಂದ್ರ, ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ : ನಿಮ್ಮ ಜಮೀನಿನ ಎಲ್ಲಾ ದಾಖಲೆಗಳು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ -ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯ ಡಿ. ಹಿಂದುಳಿದ ವರ್ಗಗಳ ಪ್ರವರ್ಗ-2 ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮಾರ್ಚ್ 3 ರವರೆಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 080-22374832 ಗೆ ಸಂಪರ್ಕಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲಿಚ್ಚಿಸುವ ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಜಮೀನಿನ ಪಹಣ (ಆರ್.ಟಿಸಿ) ಇರಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರ ಇರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ರೈತರಿಗೆ 18 ರಿಂದ 55 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗ 98 ಸಾವಿರ, ನಗರ ಪ್ರದೇಶದವರಿಗೆ 1,20,000 ದೊಳಗಿರಬೇಕು.  ಸಣ್ಣ ಮತ್ತು ಅತೀ ಸಣ್ಣ ರೈತರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಇದರೊಂದಿಗೆ ಈ ಯೋಜನೆಯಡಿಯಲ್ಲಿ ಒಂದು ಬಾರಿ ಪ್ರಯೋಜನೆ ಪಡೆದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಮಡಿವಾಳ ಸಮುದಾಯದ ಪ್ರವರ್ಗ 2 ಎಗೆ ಸೇರಿದಮಡಿವಾಳ ಮತ್ತು ಇದರ ಉಪಜಾತಿಗಳಾದ ಅಗಸ, ಚಕಲ, ಧೋಬಿ, ಮಡಿವಾಳ ಮನ್ನನ, ಪರಿತ್, ರಾಜಕ, ಸಕಲ, ವೆಲ್ಲುತೆಡನ್, ಸಾಕಲವಾಡು ವರ್ಗದವರು ಈ ಸೌಲಭ್ಯ್ಕಕೆ ಅರ್ಜಿ ಸ್ಲಲಿಸಬಹುದು.

ಸವಿತಾ ಮತ್ತು ಅದರ ಉಪಜಾತಿಗೆ ಸೇರಿದ ರೈತರು ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.

Leave a Reply

Your email address will not be published. Required fields are marked *