Baragala parihara jame ಜಮೆಯಾಗಬೇಕಾದರೆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿರಬೇಕು. ನಿಮ್ಮ ಹೆಸರು ನೋಂದಣಿಯಾಗಿದೇಯೇ? ಇಲ್ಲಿ ಚೆಕ್ ಮಾಡಿ
ಸರ್ಕಾರವು ರೈತರ ಅನುಕೂಲಕ್ಕಾಗಿ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಮೂಲಕ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಈ ಯೋಜನೆಯ ಸವಲತ್ತು ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿರಬೇಕು.ಈ ರೀತಿ ನೋಂದಣಿಯಾದ ವಿವರಗಳನ್ನು ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬೆಳೆ ಸಾಲ ಹಾಗೂ ಬೆಳೆ ನಷ್ಟಪರಿಹಾರ ಇತ್ಯಾದಿ ಸವಲತ್ತು ನೀಡಲು ಬಳಸಲಾಗುತ್ತದೆ.
ರಾಜ್ಯದಲ್ಲಿ 200 ಕ್ಕೂಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದರಿಂದ ರೈತರಿಗೆ ಬೆಳೆ ನಷ್ಟ ಪರಿಹಾರ ಇನ್ಪುಟ್ ಸಬ್ಸಿಡಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ನಷ್ಟ ಪರಿಹಾರವನ್ನುವಿತರಿಸಲಾಗುವುದರಿಂದ ರೈತರು ತಾವು ಹೊಂದಿರುವ ಎಲ್ಲಾ ಸರ್ವೆನಂಬರ್ ಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.
ಇದನ್ನೂ ಓದಿ : Aadhaar Number ಹಾಕಿ ಮೊಬೈಲ್ ನಲ್ಲಿ FRUITS ಐಡಿ ಹೀಗೆ ಚೆಕ್ ಮಾಡಿ
ಫ್ರೂಟ್ಸ್ ಐಡಿಯೊಂದಿಗೆ ಸೇರ್ಪಡೆಯಾಗದೆ ಇರುವ ಸರ್ವೆ ನಂಬರ್ ಗಳನ್ನು ಸೇರ್ಪಡೆಗೊಳಿಸಲು ಆಧಾರ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಪಹಣಿ ಪ್ರತಿಯೊಂದಿಗೆ ತಮ್ಮ ವ್ಯಾಪ್ತಿಯರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಮುಂದುವರೆದು ಸಂಬಂಧಿಸಿದ ಬ್ಯಾಂಕುಗಳಿಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳಲು ಕೋರಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ನೋಂದಣಿಗೆ ಕರೆ ನೀಡಿದ್ದು, ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿ ಎಫ್ಐಡಿ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ರೈತರು ಪಿಎಂ ಕಿಸಾನ್ ಯೋಜನೆಯಡಿ ನೋಂದಣಿಯಾಗದಿದ್ದಲ್ಲಿ ಈ ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿನೀಡಿ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.
Baragala parihara jame ಆಗಲು ಫ್ರೂಟ್ಸ್ ತಂತ್ರಾಂಶದಲ್ಲಿ ಮೊಬೈಲ್ ನಲ್ಲಿ ನೋಂದಣಿ ಮಾಡಿ?
ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಲು ಈ
https://fruits.karnataka.gov.in/OnlineUserLogin.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಕಾಣುವ citizen Registration ಮೇಲೆ ಕ್ಲಿಕ್ ಮಾಡಬೇಕು. ನಂತರ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು. ಆಧಾರ್ ಕಾರ್ಡ್ ಹಾಕಬೇಕು. ನಂತರ I Agree to share my Aadhaar details ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಲ್ಲಿಸಿ / Submit ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.
ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು.ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ, ಜಾತಿ ದೃಡೀಕರಣ ಪತ್ರ, ಫೋಟೋ ಹಾಗೂ ಜಮೀನಿನ ಪಹಣಿ ದಾಖಲೆಗಳೊಂದಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿದ ನಂತರ ಏನು ಮಾಡಬೇಕು?
ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡ ನಂತರ ಹತ್ತಿರದ ಗ್ರಾಮ ಪಂಚಾಯತ್ ನಲ್ಲಿ ಬರಗಾಲದಿಂದಾಗಿ ಬೆಳೆ ಹಾಳಾಗಿರುವ ಕುರಿತು ಅರ್ಜಿ ಸಲ್ಲಿಸಬೇಕು. ಅಲ್ಲಿ ನಿಮ್ಮ ಜಮೀನಿನ ದಾಖಲೆಗಳು, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯನ್ನು ಸಲ್ಲಿಸಿ ತಮ್ಮ ಹೆಸರು ಪರಿಹಾರಕ್ಕಾಗಿ ನೋಂದಣಿ ಮಾಡಿಸಬೇಕು.