2022 – 2023ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಇ ಕಾಮರ್ಸ್ ನಡಿಯಲ್ಲಿ ಕಂಪನಿಗಳಿಂದ ಗ್ರಾಹಕರಿಗೆ ಸರಕು ತಲುಪಿಸಲು ಇ.ವಿ ಮತ್ತು ಇತರೆ ದ್ವಿಚಕ್ರ ವಾಹನ ಖರೀದಿಗೆ ಗರಿ ಗರಿಷ್ಠ 50 ಸಾವಿರ ರೂಪಾಯಿಯವರೆಗೆ ಸಹಾಯಧನ ಉಳಿದ ಮೊತ್ತವನ್ನು ಕಡಿಮೆ ಬಡ್ಡಿದರದಲ್ಲಿ ಬ್ಯಾಂಕ್ ಸಾಲ ನೀಡಲಾಗುವುದು.
ಸರಕು ಸಾಗಾಣಿಕೆ ವಾಹನ ಖರೀದಿಗೆ ಗರಿಷ್ಠ 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ಹಾಗೂ ಉಳಿದ ಮೊತ್ತವನ್ನು ಕಡಿಮೆ ದರದಲ್ಲಿ ಬ್ಯಾಂಕ್ ಸಾಲ ನೀಡಲಾಗುವುದು.
ನೇರ ಸಾಲ ಯೋಜನೆಯಡಿ ಸಣ್ಣ ಆದಾಯ ಗಳಿಸುವ ಆರ್ಥಿಕ ಚಟುವಟಿಕೆಗಾಗಿ ಘಟಕ ವೆಚ್ಚಕ್ಕೆ ಗರಿಷ್ಟ 1 ಲಕ್ಷ ರೂಪಾಯಿ ಇದರಲ್ಲಿ ಶೇ. 50 ರಷ್ಟು ಸಾಲ ಮತ್ತು ಶೇ. 50 ರಷ್ಟು ಸಹಾಯಧನ ನೀಡಲಾಗುವುದು.
ಅರ್ಹ ಫಲಾನುಭವಿಗಳು ಆಗಸ್ಟ್ 20 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಈ ಯೋಜನೆಯ ಲಾಭ ಪಡೆಯಬಹುದು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ಫಲಾನುಭವಿಗಳು ಆಯಾ ನಿಗಮದಲ್ಲಿ ಅರ್ಜಿ ಸಲ್ಲಿಸಬಹುದು.
ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು
https://suvidha.karnataka.gov.in
ಈ ವೆಬ್ ಸೈಟ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ,ಎಸ್.ಟಿ ಸಹಾಯವಾಣಿ 9482300400 ಗೆ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು ಅರ್ಹತೆಗಳು
ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿರಬಾರದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 1,50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2 ಲಕ್ಷ ಮಿತಿಯೊಳಗಿರಬೇಕು.
ಇದನ್ನೂ ಓದಿ : ಟ್ಯಾಕ್ಸಿ ಹಾಗೂ ಸರಕು ಸಾಗಾಣಿಕೆ ವಾಹನ ಖರೀದಿಗೆ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ
ಅರ್ಜಿದಾರರು 21 ವರ್ಷದಿಂದ 50 ವರ್ಷದೊಳಗಿರಬೇಕು.ಫಲಾನುಭವಿಯ ಹೆಸರಿನಲ್ಲಿ ಸಹಾಯಧನ ನೇರವಾಗಿ ಬ್ಯಾಂಕಿಗೆ ಬಿಡುಗಡೆ ಮಾಡಲಾಗುವುದು.
ಅರ್ಜಿಯೊಂದಿಗೆ ಸಲ್ಲಿಸಬೇಕಾಗುವ ದಾಖಲೆಗಳು
ಅರ್ಜಿ, ಭಾವಚಿತ್ರ, ಜಾತಿ ಪ್ರಮಾಣ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆದಾಯ ಪ್ರಮಾಣ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆಧಾರ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ವಾಹನ ಪರವಾನಗಿ ಸೇರಿದಂತೆ ಇನ್ನಿತರ ದಾಖಲೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ಸುವಿಧಾ ತಂತ್ರಾಂಶದ ಮೂಲಕ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ನಿಮ್ಮ ಹತ್ತಿರದ ಸಿ.ಎಸ್.ಸಿ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಅಭಿವೃದ್ಧಿ ನಿಗಮದಲ್ಲಿ ವಿಚಾರಿಸಬಹುದು. ಅಥವಾ ಕಲ್ಯಾಣಮಿತ್ರ ಸಹಾಯವಾಣಿ 9482300 400 ನಂಬರಿಗೆ ಕರೆ ಮಾಡಿದರೆ ಸಾಕು, ನಿಮಗೆ ಸಂಪೂರ್ಣ ಮಾಹಿತಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 20 ಆಗಿದ್ದು, ಕೊನೆಯ ದಿನಾಂಕ ಮುಗಿದ ನಂತರ ಅರ್ಜಿ ಸ್ವೀಕರಿಸಲಾಗುವುದಿಲ್ಲ.