ಮೀನು ಮರಿ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Fish equipment subsidy get : ಮೀನು ಮರಿ ಹಾಗೂ ಮೀನುಗಾರಿಕೆ ಸಲಕರಣೆ ವಿತರಣೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ರಾಜ್ಯ ವಲಯ ಯೋಜನೆಯಡಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬಾಕಿ ಉಳಿದ ಗುರಿಗಳಂತೆ ಮೀನು ಕೃಷಿ ಕೊಳಗಳ ನಿರ್ಮಾಣ, ಸರ್ಕಾರಿ ಕೆರೆಗಳಲ್ಲಿ ಬಿತ್ತನೆ ಮಾಡಲು ಖರೀದಿಸಿದ ಮೀನುಮರಿ ಖರೀದಿಗೆ ಸಹಾಯಧನ ನೀಡಲಾಗುವುದು.

ಸರ್ಕಾರಿ ಕೆರೆಗಳನ್ನು ಗುತ್ತಿಗೆ ಟೆಂಡರ್ ನಲ್ಲಿ ಪೆಡದ ಫಲಾನುಭವಿಗಳಿಗೆ ಕೆರೆ ಅಂಚಿನಲ್ಲಿ ಮೀನು ಕೃಷಿ ಕೊಳ ನಿರ್ಮಾಣಕ್ಕಾಗಿ ಸಹಾಯಧನ ನೀಡಲಾಗುವುದು.

ನದಿ ಭಾಗಗಳಲ್ಲಿ ಮೀನು ಹಿಡಿಯಲು ಮೀನುಗಾರಿಕೆ ಇಲಾಖೆಯಿಂದ ಅಧಿಕೃತ ಪರವಾನಿಗೆ ಪಡೆದ ಫಲಾನುಭವಿಗಳಿಗೆ ಹಾಗೂ ಮೀನುಗಾರರ ಸಹಕಾರ ಸಂಘಗಳ ಸದಸ್ಯರುಗಳಿಗೆ ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ ಯೋಜನೆ ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ರಾಯಚೂರು 8050196667 ಹಾಗೂ ಸಿಂಧನೂರು, ಲಿಂಗಸೂಗುರು 9110878145 ಅಥವಾ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದು.

Fish equipment subsidy get ಕಿಸಾನ್ ಕ್ರೆಡಿಟ್ ಕಾರ್ಡ್ ಗಳ ವಿತರಣೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ರಾಯಚೂರು, ಮಾನ್ವಿ, ದೇವದುರ್ಗ, ಸಿರವಾರ ಹಾಗೂ ಅರಕೇರಾ ತಾಲೂಕು ಸಂಘಗಳ ಸದಸ್ಯರಿಂದ, ವೃತ್ತಿಪರ ಮೀನುಗಾರರಿಂದ ಹಾಗೂ ಆಸಕ್ತ ಮೀನು ಕೃಷಿಕರಿಂದ ಮೀನು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬ್ಯಾಂಕುಗಳ ಮೂಲಕ ಸಾಲದ ಸೌಲಭ್ಯ ಒದಗಿಸಿ, ಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲು ಆಸಕ್ತ ಮೀನುಗಾರರು ಮೀನು ಕೃಷಿಕರು ಆಗಸ್ಟ್ 14 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರಾಯಚೂರು ಜಿಲ್ಲೆಯ ಆಯಾ ತಾಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಯನ್ನು ಸಂಪರ್ಕ ಮಾಡಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರೇ ಕಡ್ಡಾಯವಾಗೀ ಇಕೆವೈಸಿ ಮಾಡಿಸಿ

ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಿಸಿದ ಯೋಜನೆಗಳ ಪ್ರಯೋಜನ ಪಡೆಯಲು ತಾಲೂಕಿನ ಎಲ್ಲಾ ರೈತರು ಕಡ್ಡಾಯವಾಗಿ ಇಕೆವೈಸಿ ನೋಂದಣಿ ಮಾಡಿಸುವ ಮೂಲಕ ಕೇಂದ್ರದ ಗುರುತು ಸೆಂಟ್ರಲ್ ಐಡಿಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ.

ಇದನ್ನೂ ಓದಿ  : ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು? ಮೊಬೈಲ್ ನಲ್ಲಿ ಚೆಕ್ ಮಾಡಿ

ಇಕೆವೈಸಿ ಮಾಡಿಸದ ರೈತರು ಪ್ರಧಾನಮಂತ್ರಿಗಳ ಕಿಸಾನ್ ಯೋಜನೆ ಸೇರಿದಂತೆ ಮತ್ತಿತರ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ರೈತರು ಈ ಕೂಡಲೇ ಕೃಷಿ ಇಲಾಖೆ, ತೋಟಗಾರಿಕೆ ಮತ್ತು ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಪಹಣಿ, ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ನೀಡಿ ಸೆಂಟ್ರಲ್ ಐಡಿ ನೋಂದಣಿ ಮಾಡಿಸಿಕೊಳ್ಳುವ ಮೂಲಕ ಇಕೆವೈಸಿ ಪೂರ್ಣಗೊಳಿಸಿಕೊಳ್ಳುವಂತೆ ಕೃಷಿ ಅಧಿಕಾರಿಗಳು ತಿಳಇಸಿದ್ದಾರೆ.

ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು ? ಇಲ್ಲಿ ಚೆಕ್ ಮಾಡಿ

ರೈತರು ತಮ್ಮ ಊರಿನ ವ್ಯಾಪ್ತಿಯಲ್ಲಿರುವ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಕುರಿತು ಮಾಹಿತಿ ಪಡೆಯುವ ಪೇಜ್ ಸಂರಕ್ಷಣೆ ತೆರೆದುಕೊಳ್ಳುತ್ತದೆ.

ಅಲ್ಲಿ ನೀವು ಮುಂದೆ ಮೇಲೆ ಕ್ಲಿಕ್ ಮಾಡಬೇಕು.  ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. Premium Calculator ಮೇಲೆ ಕ್ಲಿಕ್ ಮಾಡಬೇಕು ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರಿಂದ ನೀವು ಯಾವ ಯಾವ ಬೆಳೆಗಳ ವಿಮೆ ಮಾಡಿಸಬಹುದು ಎಂಬ ಬೆಳೆಗಳ ಹೆಸರು ಕಾಣಿಸುತ್ತದೆ. ಬೆಳೆ ಆಯ್ಕೆ ಮಾಡಿಕೊಂಡ ನಂತರ ನೀವು ಎಷ್ಟು ಎಕರೆ  ವಿಮೆ ಮಾಡಿಸಬೇಕೆಂದುಕೊಂಡಿದ್ದೀರೋ ಅಲ್ಲಿ ನಮೂದಿಸಬೇಕು. ನಂತರ Show Premium ಮೇಲೆ ಕ್ಲಿಕ್ ಮಾಡಬೇಕು. ಉದಾಹರಣೆಗೆ ನೀವು ತೊಗರಿ ಒಂದು ಎಕರೆಗೆ ವಿಮೆ ಮಾಡಿಸಬಹುದಾದರೆ ಎಕೆರೆಗೆ ರೈತರು 466 ರೂಪಾಯಿ ಪಾವತಿಸಬೇಕು. ನಿಮ್ಮ ಬೆಳೆ ಸಂಪೂರ್ಣ ಹಾನಿಯಾದರೆ ನಿಮಗೆ 23 ಸಾವಿರ ರೂಪಾಯಿಯವರೆಗೆ ವಿಮೆ ಹಣ ಜಮೆಯಾಗಲಿದೆ. ಇದೇ ರೀತಿ ನೀವು ಬೇರೆ ಬೇರೆ ಬೆಳೆಗಳನ್ನು  ಚೆಕ್ ಮಾಡಬಹುದು.

Leave a Comment