fish farm pond subsidy ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (pradhan Mantri Matsya sampad scheme) ಯಡಿ ಮೀನುಗಾರಿಕೆಗೆ ಸಂಬಂಧಿಸಿದ ವಿವಿಧ ಚಟುವಟಿಕೆ ಕೈಗೊಳ್ಳಲು ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ಪ್ರಧಾನಮಂತ್ರಿ ಮತ್ಸ್ಸ್ಯ ಸಂಪದ ಯೋಜನೆಯಡಿ ಹೊಸದಾಗಿ ಮೀನು ಕೃಷಿ ಕೊಳ ನಿರ್ಮಾಣ ಮಾಡಲು ಇಚ್ಚಿಸುವವರು ಹಾಗೂ ಮೀನುಗಾರಿಕೆಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಾದ ಆರ್.ಎ.ಎಸ್ ಘಟಕಗಳ ನಿರ್ಮಾಣ, ತಾಜಾ ಮೀನು ಮಾರಾಟ ಕೇಂದ್ರಗಳ ಸ್ಥಾಪನೆ, ಮೀನು ಸಾಗಣೆ ಮತ್ತು ಮಾರಾಟ ವಾಹನಗಳ ಖರೀದಿಗೆ ಸಹಾಯಧನ ಮತ್ತಿತರ ಚಟುವಟಿಕೆಗಳ ಸದುಪಯೋಗ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ಯೋಜನೆಗಳ ಸಹಾಯಧನ ಪಡೆಯಲು ಆಸಕ್ತ ಒಳನಾಡು ಮೀನುಗಾರರು ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕ ಗಣೇಶ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಣ್ಣ, ಮಧ್ಯಮ ರೈತರು ಸಹ ತಮ್ಮ ಹೊಲಗಳಲ್ಲಿ ಅಥವಾ ತಮ್ಮ ಹೊಲದಲ್ಲಿರುವ ತಗ್ಗುಪ್ರದೇಶಗಳಲ್ಲಿ ಕೊಳಗಳನ್ನು ನಿರ್ಮಾಣ ಮಾಡಿ ಮೀನು ಮರಿಗಳನ್ನು ಸಾಕಿ ಆರ್ಥಿಕವಾಗಿ ಸಬಲರಾಗಬಹುದು.
ಜಲಮೂಲಗಳು ಇಱುವ ಕಡೆಗಳಲ್ಲಿ ಮೀನು ಕೃಷಿ ಪ್ರಮುಖ ಆರ್ಥಿಕ ಬೇಸಾಯವಾಗಿದೆ. ಈ ಉಧ್ಯಮದ ಮೇಲೆ ಈಗಲೂ ಸಹ ಸಾಕಷ್ಟು ಕುಟುಂಬಗಳು ಅವಲಂಬಿಸಿವೆ. ದೊಡ್ಡ ದೊಡ್ಡ ಕೆರೆಗಳಲ್ಲಿ, ಜಲಾಶಯಗಳಲ್ಲಿ ಮೀನುಮರಿಗಳನ್ನು ಬಿಟ್ಟು ವ್ಯಾಪಾರ ಮಾಡುವುದು ಒಂದೆಡೆಯಾದರೆ ಮೀನು ಕೃಷಿ ಕೊಳ ನಿರ್ಮಾಣ ಮಾಡಿ ರೈತರು ಆದಾಯ ಗಳಿಸಿಕೊಳ್ಳಬಹುದು.
fish farm pond subsidy ಮೀನುಗಾರಿಕೆಗೆ ಸಹಯಧನ ಹಾಗೂ ಮೀನುಮರಿ ನೀಡಲು ಅರ್ಜಿ ಆಹ್ವಾನ
ಮೀನುಗಾರಿಕೆ ಮಾಡಲಿಚ್ಚಿಸುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ರೈತರು ಮೀನುಗಾರಿಕೆ ಮಾಡಲು ಸಹಾಯಧನ ಪಡೆಯಬಹುದು. ಹೌದು, ಪ್ರಸಕ್ತ ಸಾಲಿನಲ್ಲಿ ಕೋಲಾರ ಜಿಲ್ಲಾ ವಲಯದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ (ಬಲೆ) ಹಾಗೂ ಮೀನು ಮಾರುಕಟ್ಟೆಗಳ ನಿರ್ಮಾಣ ಸಹಾಯಧನ ನೀಡಲಾಗುವುದು. ಮೀನು ಮಾರಟಕ್ಕೆ ಸಹಾಯ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ ನಿಮ್ಮ ಜಮೀನಿನ ಭೂ ಮಾಲಿಕರ ವಿವರ ಮೊಬೈಲ್ ನಲ್ಲೇ ಚೆಕ್ ಮಾಡಿ
ಅರ್ಹ ಮೀನುಗಾರರು ಸಂಬಂಧಿಸಿದ ತಾಲೂಕು ಮೀನುಗಾರಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೋಲಾರ ಮೀನುಗಾರಿಕೆ ಉಪ ನಿರ್ದೇಶಕರ ದೂರವಾಣಿ ಸಂಖ್ಯೆ 9740138511, ಕೋಲಾರ ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9964583932, ಮಾಲೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9972717346, ಮುಳಬಾಗಿಲು ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9482475770 , ಶ್ರೀನಿವಾಸಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9964583932, ಬೇತಮಂಗಲ (ಕೆಜಿಎಫ್ ಬಂಗಾರಪೇಟೆ) ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9036991112 ಹಾಗೂ ಮೀನುಗಾರಿಕೆ ಸಹಾಯವಾಣಿ ಸಂಖ್ಯೆ 8277200300 ಗೆ ಸಂಪರ್ಕಿಸಬಹುದು ಎಂದು ಕೋಲಾರ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀನುಮರಿ ಪಡೆಯಲು ಅರ್ಜಿ ಆಹ್ವಾನ
ಪ್ರತಿ ವರ್ಷದಂತೆ ಈ ವರ್ಷವೂ 2022-23ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗದಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ, ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು.
ಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಹೆಚ್ಚಿ ಮಾಹಿತಿಗಾಗಿ ಮಡಿಕೇರಿ ತಾಲೂಕು ವಿನಯ 9769070850, ಸೋಮವಾರಪೇಟೆ ನಿರ್ವಾಣಿ 9448918782, 7338218782, ವಿರಾಜಪೇಟೆ ಬಿ.ಕೆ. ನಿಶಾಂತ್ 9731363143 ಮೀನುಗಾರಿಕೆ ಇಲಾಖಾ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.