ಈ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ

Written by Ramlinganna

Updated on:

5 days rain alert  ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 20ರವರೆಗೆ ಭಾರಿ ಮಳೆಯಾಗಲಿದೆ. ಜುಲೈ 19 ಹಾಗೂ 20 ರಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅದೇ ರೀತಿ ಜುಲೈ 20 ರಂದು ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

5 days rain alert  19 ರವರೆಗೆ ಈ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ

ಮೈಸೂರು ಜಿಲ್ಲೆಯಲ್ಲಿ ಜುಲೈ 19 ರವರೆಗೆ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ತುಂತುರು ಮಳೆಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ನಾಗನಹಳ್ಳಿ ಕೃಷಿ ಹವಾಮಾನ ಕ್ಷೇತ್ರ ವಿಭಾಗ ತಿಳಿಸಿದೆ. ಗರಿ ಷ್ಠ ಉಷ್ಣಾಂಶ 32 ರಿಂದ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿ ಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗುವ ಸಾಧ್ಯತೆಯಿದೆ. ಬೆಳಗಿನ ಗಾಳಿಯು ಗಂಟೆಗೆ 1 ರಿಂದ 3 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ದಿನದಂದು ಮಳೆಯಾಗುತ್ತದೆ? ಇಲ್ಲೆ ಚೆಕ್ ಮಾಡಿ

ನಿಮ್ಮ ಜಿಲ್ಲೆಯಲ್ಲಿ ಮುಂದಿನ ಐದು ದಿನ ಯಾವಾಗ ಮಳೆಯಾಗುತ್ತದೆ ಮಳೆಯು ಗುಡುಗು ಸಿಡಿಲನಿಂದ ಕೂಡಿರುತ್ತದೆಯೋ ಅಥವಾ ಸಾಧಾರಣ ಮಳೆಯಾಗಿದೆಯೋ ಎಂಬುದನ್ನು ಚೆಕ್ ಮಾಡಲು ಈ

https://mausam.imd.gov.in/responsive/districtWiseWarning.php?day=Day_2

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಹವಾಮಾನ ಇಲಾಖೆಯ (ಐಎಂಡಿ) ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಜಿಲ್ಲಾವಾರು ಎಚ್ಚರಿಕೆ ಕಾಣಿಸುತ್ತದೆ. ಅಂದರೆ ಜುಲೈ, 18, ಜುಲೈ 19, ಜುಲೈ 20, ಜುಲೈ 21 ಹಾಗೂ ಜುಲೈ 22 ಹೀಗೆ ಐದು ದಿನಗಳ ಪೇಜ್ ಕಾಣಿಸುತ್ತದೆ. ಉದಾಹರಣೆಗೆ ನೀವು ಜುಲೈ 19 ಆಯ್ಕೆ ಮಾಡಿಕೊಂಡಾಗ ನಮ್ಮ ಕರ್ನಾಟಕ ಜಿಲ್ಲೆಯ ಮ್ಯಾಪ್ ನಲ್ಲಿ ಜಿಲ್ಲೆಗಳು ಕಾಣಿಸುತ್ತವೆ. ಆ ಜಿಲ್ಲೆ ಹತ್ತಿರ ಯಾವ ಪ್ರಮಾಣದಲ್ಲಿಮಳೆಯಾಗುತ್ತದೆ ಎಂಬುದು ಕಾಣಿಸುತ್ತದೆ. ಅದೇ ರೀತಿ ದಿನಾಂಕ ಬದಲಾವಣೆ ಮಾಡಿ ನೀವು ಮುಂದಿನ ಐದು ದಿನಗಳ ಮಳೆಯ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಒಂದು ಕರೆ ಮಾಡಿ ಮಳೆಯ ಮಾಹಿತಿ ಪಡೆಯುವುದು ಹೇಗೆ?

ಮನೆಯಲ್ಲಿಯೇ ಕುಳಿತು ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗುತ್ತದೆ ಇದರೊಂದಿಗೆ ನಿಮ್ಮೂರಿನಲ್ಲಿ ಯಾವಾಗ ಮಳೆಯಾಗುತ್ತದೆ ಎಂಬುದರ ಮಾಹಿತಿ ಪಡೆಯಲು ವರುಣಮಿತ್ರ ಸಹಾಯವಾಣಿಯನ್ನು ಕರೆ ಮಾಡಬೇಕಾಗುತ್ತದೆ.

ಇದನ್ನೂ ಓದಿ ಈ ದಿನ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ- ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ? ಇಲ್ಲೇ ಚೆಕ್ ಮಾಡಿ

ಆಗ ವರುಣಮಿತ್ರ ಸಿಬ್ಬಂದಿಗಳು ಕರೆ ಸ್ವೀಕರಿಸಿ ನಿಮಗೆ ಯಾವ ದಿನಾಂಕದಂದು ಯಾವ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂಬ ಮಾಹಿತಿ ನೀಡಲಾಗುವುದು.

ಮಳೆಯ ಮಾಹಿತಿ ನೀಡಲು ಬಂದಿವೆ ಮೊಬೈಲ್ ಆ್ಯಪ್

ನೀವು ಮನೆಯಲ್ಲಿಯೇ ಮಳೆಯ ಮಾಹಿತಿ ಚೆಕ್ ಮಾಡಲು ಮೇಘದೂತ, ಮೌಸಮ್ ಆ್ಯಪ್ ಗಳು ಇವೆ. ಈ ಆ್ಯಪ್ ಗಳನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡರೆ ಸಾಕು, ನಿಮಗೆ ಮುಂದಿನ ಐದು ದಿನಗಳ ಮಳೆಯ ಮಾಹಿತಿಯನ್ನು ಚೆಕ್ ಮಾಡಬಹುದು.

ಗುಡುಗು ಸಿಡಿಲಿನ ಮಾಹಿತಿ ನೀಡಲು ಬಂದಿವ್ ಆ್ಯಪ್ ಗಳು

ಗುಡುಗು ಸಿಡಿಲು ಬೀಳುವ ಐದು, ಹತ್ತು ನಿಮಿಷ ಮೊದಲೇ ಸಿಡಿಲಿನ ಮಾಹಿತಿ ನೀಡಲು ಸಿಡಿಲು ಹಾಗೂ ದಾಮಿನಿ ಆ್ಯಪ್ ಗಳು ಇವೆ.ಈ ಆ್ಯಪ್ ಗಳನ್ನು ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡು ಸಿಡಿಲು ಬಡಿಯುವ ಐದು ನಿಮಿಷ ಮೊದಲೇ ಮಾಹಿತಿ ಪಡೆಯಬಹುದು.

Leave a Comment