ಆಗಸ್ಟ್ 26ರವರೆಗೂ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ

Written by By: janajagran

Updated on:

Five days Heavy Rain ಶ್ರೀಲಂಕಾದ ಕರಾವಳಿ ಭಾಗದಲ್ಲಿ ಸಮುದ್ರದ ಮೈಲ್ಮೈನಲ್ಲಿ ಸುಳಿಗಾಳಿ ತೀವ್ರಗೊಂಡಿರುವುದರಿಂದ ರಾಜ್ಯದಲ್ಲಿ ಆಗಸ್ಟ್ 26ರವರೆಗೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಹವಾಮಾನ ಏರಿಳಿತ ಪರಿಣಾಮ ಮುಂಗಾರು ಚುರುಕಾಗಿರಲಿದೆ. ಇದರಿಂದ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.  ಕಳೆದ ಎರಡು-ಮೂರು ದಿನಗಳಿಂದ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಷಟ್ಟು ಮಳೆ ಸುರಿಯುತ್ತಿದೆ. ಇನ್ನೂ ನಾಲ್ಕು ದಿನ ಇದೇ ರೀತಿ ಮುಂದುವರೆಯುವ ಸಾಧ್ಯತೆಯಿದೆ.

ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ ಎರಡು ದಿನ ಮಳೆಯಾಗವ ಸಾಧ್ಯತೆಯಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಸೇರಿದಂತೆ ಉತ್ತರ ಒಳನಾಡು ಹಾಗೂ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಳ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 21 ರ ರಾತ್ರಿ  10 ಸೆಂ.ಮೀ, ಜಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ 9 ಸೆಂ.ಮೀ, ಕಲಬುರಗಿ ಚಿಂಚೋಳಿಯಲ್ಲಿ 5 ಸೆಂ.ಮೀ ಮಳೆಯಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 23 ಮತ್ತು 24 ರಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Five days Heavy Rain ಆಗಸ್ಟ್ 26 ರವರೆಗೆ ಈ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ದೇಶದ ಪಂಜಾಬ, ಹರಿಯಾಣ ರಾಜಸ್ಥಾನ ಹಾಗೂ ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 26ರವರೆಗೆ ಚದುರಿದ ಮಳೆಯಾಗಲಿದೆ. ಉತ್ತರಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಅಧಿಕ ಮಳೆಯಾಗಲಿದೆ.  ಈಗಾಗಲೇ ದೇಶಾದ್ಯಂತ ಮುಂಗಾರು ಮಳೆ ಚುರುಕಾಗಿದ್ದು, ಆಗಸ್ಟ್ 26ರವರೆಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ ಮೊಬೈಲ್ ನಲ್ಲೇ ಜಮೀನಿನ ಸ್ಕೆಚ್ ನಕ್ಷೆ ಹೀಗೆ ಪಡೆಯಿರಿ

ಈಶಾನ್ಯ ರಾಜ್ಯಗಳಲ್ಲಿ ಹಾಗೂ ಪಶ್ಚಿಮಬಂಗಾಳ, ಸಿಕ್ಕಿಂ, ಬಿಹಾರ ರಾಜ್ಯದಲ್ಲಿ ಆಗಸ್ಟ್ 24 ರಿಂದ 26ರವರೆಗೆ ಮಳೆಯಾಗಲಿದೆ. ಆಗಸ್ಟ್ 25 ರಿಂದ 26ರವರೆಗೆ ಬಿಹಾರದಲ್ಲಿ ಅಧಿಕ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ವಿದರ್ಭದಲ್ಲಿ ಚಂಡಮಾರುತ ಪ್ರಭಾವದಿಂದಾಗಿ ನೆರೆಹೊರೆ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

ಯಾವ ಯಾವ ಊರಿನಲ್ಲಿ ಮಳೆಯಾಗುತ್ತದೆ? ಈ ನಂಬರಿಗೆ ಕರೆ ಮಾಡಿ

ಇಂದು ಯಾವ ಯಾವ ಊರಿನಲ್ಲಿ ಮಳೆಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಬೇಕು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ಸಿಗುತ್ತದೆ. ಈ ನಂಬರ್  ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.  ನೀವು ಇದ್ದ ಊರಿನಲ್ಲಿಯೂ ಮುಂದಿನ ಐದು ದಿನದ ಹವಾಮಾನದ ವರದಿಯನ್ನು ನೀಡಲಾಗುವುದು. ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಸಂಪೂರ್ಣ ಉಚಿತವಾಗಿರುತ್ತದೆ.

Leave a Comment