ಇಂದಿನಿಂದ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ

Written by Ramlinganna

Published on:

Five days rain alert here :  ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ತುಮಕೂರು, ಹಾವೇರಿ, ಬೀದರ್, ಬಳ್ಳಾರಿ, ವಿಜಯನಗರ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರೀಲ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ Ration card list ನಿಂದ ಯಾರ ಯಾರ ಹೆಸರು ಡಿಲೀಟ್ ಆಗಿದೆ? ಇಲ್ಲೇ ಚೆಕ್ ಮಾಡಿ

ಏಪ್ರೀಲ್ 28 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಹಾಸನ, ಶಿವಮೊಗ್ಗ, ಮಂಡ್ಯ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದೆ. ಗಂಟೆಗೆ 40 ರಿಂದ50 ಕಿಲೋ ಮೀಟರ್ ವೇಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಏಪ್ರೀಲ್  29, 30 ಹಾಗೂ ಮೇ 1 ರರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಗುಡುಗು ಸಿಡಿಲಿನ ಆರ್ಭಟವಿರಲಿದೆ.

Five days rain alert here ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?

ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.

Five days rain alert here ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment