ಯಾವ ಯೋಜನೆಯಿಂದ ಎಷ್ಟು ಹಣ ಜಮೆಯಾಗುತ್ತಿದೆ?

Written by Ramlinganna

Updated on:

For these government schemes Farmers get money ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವ ಯೋಜನೆಯಿಂದ ಎಷ್ಟು ಹಣ ಜಮೆಯಾಗುತ್ತಿದೆ ಎಂಬುದನ್ನು ರೈತರು ಮನೆಯಲ್ಲಿಯೇ ಕುಳಿತು  ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಡಿಯಲ್ಲಿ ರೈತರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡ ನಂತರ ಸರ್ಕಾರದ ವತಿಯಿಂದ ನೇರವಾಗಿ ರೈತರ ಖಾತೆಗೆ ಸಹಾಯಧನ ಜಮೆ ಮಾಡುತ್ತಿದೆ. ಹಾಗಾದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮೆಯಾಗುತ್ತಿದೆ ಎಂಬುದನ್ನು ಚೆಕ್ ಮಾಡಬೇಕಲ್ಲವೇ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ.

For these government schemes Farmers get money ಯಾವ ಯೋಜನೆಯಿಂದ ಎಷ್ಟು ಹಣ ಜಮೆಯಾಗುತ್ತಿದೆ?

ಕೇಂದ್ರ ಸರ್ಕಾರವು ರೈತರಿಗಾಗಿ ಜಾರಿಗೆ ತಂದ ಮುಖ್ಯ ಯೋಜನೆಗಳಲ್ಲಿ ಪಿಎಂ ಕಿಸಾನ್ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿಕೊಂಡ ರೈತ ಫಲಾನುಭವಿಗಳಿಗೆ ನೇರವಾಗಿ ಪ್ರತಿ ವರ್ಷ ಮೂರು ಕಂತುಗಳಲ್ಲಿ ಅಂದರೆ ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿಯಂತೆ ಒಟ್ಟ ಒಂದು ವರ್ಷಕ್ಕೆ 6 ಸಾವಿರ ರೂಪಾಯಿ ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಜಮೆಯಾಗುತ್ತಿದೆಯೇ? ಹೀಗೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗುತ್ತಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ತಮ್ಮ ಮೊಬೈಲ್ ನಂಬರ್  ಹಾಗೂ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು, ಪಿಎಂ ಕಿಸಾನ್ ಯೋಜನೆಯಡಿ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

ರಾಜ್ಯ ಸರ್ಕಾರದ ವತಿಯಿಂದ 4 ಸಾವಿರ ರೂಪಾಯಿ ಪಿಎಂ ಕಿಸಾನ್ ಹೆಚ್ಚುವರಿ ಹಣ

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿದ ರೈತರಿಗೆ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ಪ್ರತಿ ವರ್ಷ 4 ಸಾವಿರ ರೂಪಾಯಿ ಹೆಚ್ಚುವರಿಯಾಗಿ ರೈತರ ಖಾತೆಗೆ ಜಮೆಮಾಡಲಾಗುತ್ತಿದೆ.

ಬೆಳೆ ಹಾನಿ ಪರಿಹಾರ ಜಮೆ

ಪ್ರಕೃತಿ ವಿಕೋಪದಿಂದಾಗಿ ರೈತರ ಬೆಳೆ ಹಾಳಾದರೆ ರೈತರಿಗೆ ಸಹಾಯವಾಗಲೆಂದು ಪ್ರತಿ ಎಕರೆಗೆ ಇಂತಿಷ್ಟು ಹಣ ಜಮೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ಘೋಷಣೆ ಮಾಡುತ್ತದೆ. ಬೆಳೆ ಹಾನಿಯಾದ ರೈತರು ತಮ್ಮ ಹೆಸರನ್ನು ಗ್ರಾಮ ಪಂಚಾಯತಿಯಲ್ಲಿ ತಮ್ಮಜಮೀನನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ ಸಲ್ಲಿಸಿದ ನಂತರ ರೈತರ ಖಾತೆಗೆ ಹಣ ಜಮೆ ಮಾಡಲಾಗುವುದು.

ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು.  ನಂತರ  ಬೆಳೆ ಹಾನಿ ಯಾವ ಕಾರಣದಿಂದ ಹಾನಿಯಾಗಿದೆ ಎಂಬುದನ್ನು ಚೆಕ್ ಮಾಡಬೇಕು.  ಪ್ರವಾಹ, ಅತೀವೃಷ್ಟಿಯಿಂದ ಬೆಳೆ ಹಾನಿಯಾದವರು ಫ್ಲಡ್ ಆಯ್ಕೆ ಮಾಡಿಕೊಳ್ಳಬೇಕು. ಯಾವ ವರ್ಷದ ರಿಪೋರ್ಟ್ ನೋಡಬೇಕೆಂದುಕೊಂಡಿದ್ದೀರೋ ಆ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಸಂಖ್ಯೆ, ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಇದೇ ರೀತಿ ನೀವು 2021-22, 2020-21ನೇ ಸಾಲಿನಲ್ಲಿ ನಿಮ್ಮ ಖಾತೆಗೆ ಹಣ ಜಮೆಯಾಗಿರುವುದನ್ನು ಸಹ ಚೆಕ್ ಮಾಡಿಕೊಳ್ಳಬಹುದು.

Leave a Comment