ನಿಮಗೆ ಯಾವ ಬೆಳೆಗೆ ಬೆಳೆ ಹಾನಿ ಪರಿಹಾರ ಜಮೆಯಾಗಿದೆ? ಚೆಕ್ ಮಾಡಿ

Written by Ramlinganna

Updated on:

For which crop compensation credited 2022-23ನೇ ಸಾಲಿನ ಮುಂಗಾರು ಹಂಗಾಮಿನ ಯಾವ ಬೆಳೆಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣವನ್ನು ಜಮೆ ಮಾಡಲಾಗಿದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು,  ರೈತರು ತಮ್ಮ ಬಳಿಯಿರುವ ಮೊಬೈಲ್ ಫೋನ್ ನಲ್ಲಿ  ಆಧಾರ್ ಸಂಖ್ಯೆಯನ್ನು ನಮೂದಿಸಿ ಬೆಳೆ ಹಾನಿ ಪರಿಹಾರಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನುಚೆಕ್ ಮಾಡಬುದು. ಇದರೊಂದಿಗೆ ಯಾವ ಬೆಳೆಗೆ ಎಷ್ಟು ಎಕರೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿರುವುದನ್ನು ಚೆಕ್ ಮಾಡಬಹುದು.

2022-23ನೇ ಸಾಲಿನ ಮುಂಗಾರು ಹಂಗಾಮಿಗೆ ರಾಜ್ಯದಲ್ಲಿ ಸುರಿದ ಅಪಾರ ಮಳೆಯಿಂದಾಗಿ ರೈತರ ಬೆಳೆ ಹಾಳಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಅತೀವೃಷ್ಟಿಯಿಂದಾಗಿ ಪ್ರವಾಹ ಉಂಟಾಗಿ ಕಟಾವಿಗೆ ಬಂದಿರುವ ಬೆಳೆಗಳಿಗೂ ಹಾನಿಯಾಗಿತ್ತು. ಇದರಿಂದಾಗಿ ರೈತರು ಸಂಕಷ್ಟಕ್ಕೊಳಗಾಗಿದ್ದರು. ರೈತರ ಪರಿಸ್ಥಿತಿಯನ್ನು ಅರಿತುಕೊಂಡ ರಾಜ್ಯಸರ್ಕಾರವು  ಬೆಳೆ ಹಾನಿ ಪರಿಹಾರ ಘೋಷಿಸಿತು. ರೈತರ ಖಾತೆಗೆ ಹಂತಹಂತವಾಗಿ ಬೆಳೆಹಾನಿ ಪರಿಹಾರ ಹಣ ಜಮೆ ಮಾಡಲಾಗುತ್ತಿದೆ.

ಯಾವ ಬೆಳೆಗೆ ಎಷ್ಟು ಎಕರೆಗೆ ಬೆಳೆಹಾನಿ ಪರಿಹಾರ ಹಣ ಜಮೆಯಾಗಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಿ

ರೈತರು ಮನೆಯಲ್ಲಿಯೇ ಕುಳಿತು ತಮ್ಮಲ್ಲಿರುವ ಮೊಬೈಲ್ ನಲ್ಲಿ ಯಾವ ಬೆಳೆಗೆ ಹಾಗೂ ಎಷ್ಟು ಎಕರೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪರಿಹಾರ ಪೇಮೆಂಟ್ ರಿಪೋರ್ಟ್ ಪೇಜ್ ತೆರೆದುಕೊಳ್ಳುತ್ತದೆ. ಇಲ್ಲಿ ರೈತರು ಆಧಾರ್ ಸಂಖ್ಯೆ ಸೆಲೆಕ್ಟ್ ಮಾಡಬೇಕು. ಇದಾದ ಮೇಲೆ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ ಫ್ಲಡ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಇಯರ್ ಟೈಪ್ ನಲ್ಲಿ 2022-23 ಆಯ್ಕೆ  ಮಾಡಿಕೊಂಡು ಆಧಾರ್ ಸಂಖ್ಯೆ ಹಾಕಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ ನಿಮ್ಮ ಯಾವ ಬ್ಯಾಂಕಿಗೆ ಎಷ್ಟು ಎಕರೆಗೆ ಹಾಗೂ ಯಾವ ಬೆಳೆಗೆ  ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

For which crop compensation credited ಬೆಳೆ ಹಾನಿ ಪರಿಹಾರ ಎಷ್ಟು ಘೋಷಣೆ ಮಾಡಲಾಗಿದೆ?

ಪ್ರಸಕ್ತ ವರ್ಷ ಮುಂಗಾರು ಹಂಗಾಮಿಗೆ ಹಾಳಾದ ಬೆಳೆಗಳಿಗೆ ರಾಜ್ಯ ಸರ್ಕಾರವು ಪರಿಹಾರ ಹಣ ಘೋಷಿಸಿತ್ತು. ಒಣ ಭೂಮಿಗೆ ರಾಜ್ಯ ಸರ್ಕಾರದಿಂದ 6500 ರೂಪಾಯಿ ಹಾಗೂ ಕೇಂದ್ರ ಸರ್ಕಾರದಿಂದ 6 ಸಾವಿರ ಒಟ್ಟು 12500 ರೂಪಾಯಿ ಪ್ರತಿ ಹೆಕ್ಟೇರಿಗೆ ನೀಡಲಾಗುವುದು. ಅದೇ ರೀತಿ ತೋಟಗಾರಿಕೆ ಬೆಳೆಗೆ 25 ಸಾವಿರ ಹಾಗೂ ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರಿಗೆ 28 ಸಾವಿರ ರೂಪಾಯಿ ಪರಿಹಾರ ಹಣ ನೀಡಲಾಗುವುದು.

ಇದನ್ನೂ ಓದಿ ಈ ಬೆಳೆಗಳಿಗೆ ನವೆಂಬರ್ 30 ರೊಳಗೆ ವಿಮೆ ಮಾಡಿಸಿ 30 ರಿಂದ 40 ಸಾವಿರ ರೂಪಾಯಿಯವರೆಗೆ ವಿಮೆ ಪಡೆಯಿರಿ

ಸರ್ಕಾರ ಘೋಷಣೆ ಮಾಡಿದಂತೆ ಈಗಾಗಲೇ ಹಂತ ಹಂತವಾಗಿ ಪರಿಹಾರ ಹಣ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಪರಿಹಾರ ಹಣ ಜಮೆಯಾಗದಿದ್ದರೆ ಯಾರಿಗೆ ಸಂಪರ್ಕಿಸಬೇಕು?

ಬೆಳೆ ಹಾನಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ ರೈತರು ಗ್ರಾಮ ಪಂಚಾಯತ್ ನಲ್ಲಿ ವಿಚಾರಿಸಬೇಕು. ಏಕೆಂದರೆ ಬೆಳೆಹಾನಿಯಾದ ರೈತರ ಮಾಹಿತಿಯನ್ನು ಗ್ರಾಮ ಪಂಚಾಯತ್ ನ ಅಧಿಕಾರಿಗಳು ಪರಿಹಾರ ತಂತ್ರಾಂಶದಲ್ಲಿ ಅಪ್ಲೋಡ್ ಮಾಡುತ್ತಾರೆ. ಆ ಆಧಾರದ ಮೇಲೆ ರೈತರಿಗೆ ಪರಿಹಾರ ಹಣ ಜಮೆ ಮಾಡಲಾಗುವುದು.  ನಿಮ್ಮ ಹೆಸರು ನೋಂದಣಿಯಾಗದಿದ್ದರೆ ಜಮೀನಿನ ಪಹಣಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯನ್ನು ಗ್ರಾಪಂ ಲೆಕ್ಕಾಧಿಕಾರಿಗಳಿಗೆ ಸಲ್ಲಿಸಿ ನೋಂದಣಿ ಮಾಡಸಬಹುದು.

Leave a Comment